Tauktae Cyclone : ತೌಕ್ತೆ ಚಂಡಮಾರುತದಿಂದ ರಾಜ್ಯದ ಹಲವಡೆ ಭಾರೀ ಮಳೆ..!

ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಮೈಸೂರು, ಹಾಸನ, ರಾಮನಗರ ಜಿಲ್ಲೆಗಳಲ್ಲಿ ಮೇ 16ರವರೆಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. 

Last Updated : May 14, 2021, 10:09 AM IST
  • ರಾಜ್ಯದ ಹಲವು ಜಿಲ್ಲೆಗಳಲ್ಲಿ ಕಳೆದೊಂದು ವಾರಗಳಿಂದ ಮಳೆ
  • ನಾಳೆಯಿಂದ 2 ದಿನ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ
  • ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಮೈಸೂರು, ಹಾಸನ, ರಾಮನಗರ ಜಿಲ್ಲೆ
Tauktae Cyclone : ತೌಕ್ತೆ ಚಂಡಮಾರುತದಿಂದ ರಾಜ್ಯದ ಹಲವಡೆ ಭಾರೀ ಮಳೆ..! title=

 ಬೆಂಗಳೂರು : ಇನ್ನೇನು ಮಳೆಗಾಲ ಶುರುವಾಗಲಿದ್ದು, ರಾಜ್ಯದ  ಹಲವು ಜಿಲ್ಲೆಗಳಲ್ಲಿ ಕಳೆದೊಂದು ವಾರಗಳಿಂದ ಮಳೆಯಾಗುತ್ತಿದೆ. ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಮೈಸೂರು, ಹಾಸನ, ರಾಮನಗರ ಜಿಲ್ಲೆಗಳಲ್ಲಿ ಮೇ 16ರವರೆಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. 

ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡದ ಕೆಲವು ಭಾಗಗಳಲ್ಲಿ ಮೇ 15 ಮತ್ತು 16ರಂದು ಭಾರೀ ಮಳೆ(Rainfall)ಯಾಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ನಾಳೆಯಿಂದ 2 ದಿನ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಮೇ 16ರಂದು ಕರ್ನಾಟಕಕ್ಕೆ ಚಂಡಮಾರುತ ಅಪ್ಪಳಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇದನ್ನೂ ಓದಿ : S Suresh Kumar : SSLC ಪರೀಕ್ಷೆ ಮುಂದೂಡಿಕೆ : ಸಚಿವ ಸುರೇಶ್ ಕುಮಾರ್

ಇಂದಿನಿಂದ ಮೂರು ದಿನ ರಾಜ್ಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆಯಿದೆ. ನಾಳೆ ದಕ್ಷಿಣ ಭಾರತಕ್ಕೆ ತೌಕ್ತೆ ಚಂಡಮಾರುತ(Tauktae Cyclone) ಆಗಮನವಾಗಲಿದೆ. ಇಂದಿನಿಂದ ಮೂರು ದಿನ ರಾಜ್ಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಅರಬ್ಬಿ ಸಮುದ್ರದ ಆಗ್ನೇಯ ಭಾಗದಲ್ಲಿ ವಾಯುಭಾರ ಕುಸಿತ ಉಂಟಾದ ಹಿನ್ನೆಲೆ ಇಂದು ಚಂಡಮಾರುತವಾಗಿ ಬದಲಾಗುವ ಸಾಧ್ಯತೆಯಿದೆ. ಇದರ ಪ್ರಭಾವದಿಂದ ಕರಾವಳಿ ಜಿಲ್ಲೆಗಳಲ್ಲಿ ಇಂದಿನಿಂದ ಮೇ 17ರವರೆಗೆ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡದ ಕೆಲವು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. 

ಇದನ್ನೂ ಓದಿ : ರಾಜ್ಯ ಸರ್ಕಾರ ಕೂಡಲೇ ಬಡವರಿಗೆ ಆಹಾರ ಮತ್ತು ಆರ್ಥಿಕ ನೆರವಿನ ಪ್ಯಾಕೇಜ್ ಘೋಷಿಸಲಿ-ಸಿದ್ಧರಾಮಯ್ಯ

ಇಂದು, ನಾಳೆ ಮತ್ತು 17ರಂದು ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಆರೆಂಜ್ ಅಲರ್ಟ್(Orange Alert) ಘೋಷಣೆ ಮಾಡಲಾಗಿದೆ. ದಕ್ಷಿಣ ಒಳನಾಡಿನಲ್ಲಿ ಮೇ 16ರವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಮೇ 16ರಂದು ಅರಬ್ಬಿ ಸಮುದ್ರದಲ್ಲಿ ಈ ವರ್ಷದ ಮೊದಲ ಚಂಡಮಾರುತ ಅಪ್ಪಳಿಸಲಿದ್ದು, ಇದಕ್ಕೆ 'ತೌಕ್ತೆ ಚಂಡಮಾರುತ' ಎಂದು ಹೆಸರಿಡಲಾಗಿದೆ. ಕರ್ನಾಟಕ, ಕೇರಳ, ತಮಿಳುನಾಡು ಸೇರಿ ದಕ್ಷಿಣ ಭಾರತದ ರಾಜ್ಯಗಳಲ್ಲಿ ಚಂಡಮಾರುತ ಅಬ್ಬರಿಸಲಿದೆ. ಹೀಗಾಗಿ, ಮುಂದಿನ 1 ವಾರಗಳ ಕಾಲ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ. ನಾಳೆ ಮಹಾರಾಷ್ಟ್ರ ಮತ್ತು ಗೋವಾದಲ್ಲಿ ತೌಕ್ತೆ ಚಂಡಮಾರುತ ಅಬ್ಬರ ಹೆಚ್ಚಾಗಲಿದೆ. ಕರ್ನಾಟಕದಲ್ಲಿ ಮೇ 16ರಂದು ಗಂಟೆಗೆ 40ರಿಂದ 50 ಕಿಮೀ ವೇಗದಲ್ಲಿ ಗಾಳಿ ಬೀಸಲಿದೆ.

ಇದನ್ನೂ ಓದಿ : Heavy Rain : ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಲ್ಲಿ 3 ದಿನ ಭಾರೀ ಮಳೆ..!

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News