Rain in Karnataka : ಇಂದಿನಿಂದ ರಾಜ್ಯದಲ್ಲಿ ಭಾರೀ ಮಳೆ : ಹವಾಮಾನ ಇಲಾಖೆ 

ನೈಋತ್ಯ ಮುಂಗಾರು ಜೂನ್‌ನಿಂದ-ಸೆಪ್ಟೆಂಬರ್ ನಲ್ಲಿ ದೇಶಾದ್ಯಂತ ಮಳೆಯ ಪ್ರಮಾಣ ಸಾಮಾನ್ಯವಾಗಿರಲಿದೆ. ರಾಜ್ಯದ ಕರಾವಳಿ, ದಕ್ಷಿಣ ಒಳನಾಡು, ಉತ್ತರ ಒಳನಾಡಿನಲ್ಲಿ ಇಂದಿನಿಂದ ಮತ್ತೆ ಮಳೆ ಶುರುವಾಗಲಿದೆ.

Last Updated : Jul 8, 2021, 08:32 AM IST
  • ರಾಜ್ಯದಲ್ಲಿ ಇಂದಿನಿಂದ ನಾಲ್ಕೈದು ದಿನಗಳಲ್ಲಿ ಮುಂಗಾರು ಚುರುಕಾಗಲಿದೆ
  • ಜುಲೈ ತಿಂಗಳ 2ನೇ ವಾರದಲ್ಲಿ ನೈಋತ್ಯ ಮುಂಗಾರು ಚುರುಕು ಪಡೆಯಲಿದೆ
  • ನೈರುತ್ಯ ಮುಂಗಾರು ಕಲ್ಯಾಣ ಕರ್ನಾಟಕ ಭಾಗದಲ್ಲಿ ಇಂದು ಉತ್ತಮ ಮಳೆ
Rain in Karnataka : ಇಂದಿನಿಂದ ರಾಜ್ಯದಲ್ಲಿ ಭಾರೀ ಮಳೆ : ಹವಾಮಾನ ಇಲಾಖೆ  title=

ಬೆಂಗಳೂರು : ರಾಜ್ಯದಲ್ಲಿ ಇಂದಿನಿಂದ ನಾಲ್ಕೈದು ದಿನಗಳಲ್ಲಿ ಮುಂಗಾರು ಚುರುಕಾಗಲಿದೆ.  ಹಾಗಾಗಿ ಈ ತಿಂಗಳಲ್ಲಿ  ಶೇ.94 -106 ರಷ್ಟು ಮಳೆಯಾಗಲಿದೆ, ಜುಲೈ ತಿಂಗಳ 2ನೇ ವಾರದಲ್ಲಿ ನೈಋತ್ಯ ಮುಂಗಾರು ಚುರುಕು ಪಡೆಯಲಿದೆ. ಹೀಗಾಗಿ ದೇಶಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ನೈಋತ್ಯ ಮುಂಗಾರು ಜೂನ್‌ನಿಂದ-ಸೆಪ್ಟೆಂಬರ್ ನಲ್ಲಿ ದೇಶಾದ್ಯಂತ ಮಳೆ(Rain)ಯ ಪ್ರಮಾಣ ಸಾಮಾನ್ಯವಾಗಿರಲಿದೆ. ರಾಜ್ಯದ ಕರಾವಳಿ, ದಕ್ಷಿಣ ಒಳನಾಡು, ಉತ್ತರ ಒಳನಾಡಿನಲ್ಲಿ ಇಂದಿನಿಂದ ಮತ್ತೆ ಮಳೆ ಶುರುವಾಗಲಿದೆ. ಕರಾವಳಿ ಜಿಲ್ಲೆಗಳಲ್ಲೂ ಮಳೆಯಾಗಲಿದೆ. ಇನ್ನೂ ಎರಡು ದಿನ ಕರಾವಳಿಯಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ದಕ್ಷಿಣ ಒಳನಾಡಿನಲ್ಲಿ ಇನ್ನೂ ಮೂರು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಇದನ್ನೂ ಓದಿ : ರಾಜ್ಯಕ್ಕೆ ಸಿಗದ ಕ್ಯಾಬಿನೆಟ್ ದರ್ಜೆ ಸ್ಥಾನ, ನಾಲ್ವರಿಗೆ ರಾಜ್ಯ ಖಾತೆ

ನೈರುತ್ಯ ಮುಂಗಾರು ಕಲ್ಯಾಣ ಕರ್ನಾಟಕ ಭಾಗದಲ್ಲಿ ಇಂದು ಉತ್ತಮ ಮಳೆಯಾಗಲಿದೆ. ಉತ್ತರ ಒಳನಾಡಿನಲ್ಲಿ ಇಂದು ಬೆಳಗ್ಗೆಯಿಂದ ಮೋಡ ಕವಿದ ವಾತಾವರಣ ಇದ್ದು. ನೈಋತ್ಯ ಮುಂಗಾರು ದುರ್ಬಲವಾದ್ದರಿಂದ ಕರಾವಳಿಯಲ್ಲಿ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ(Indian Meteorological Department) ಮಾಹಿತಿ ನೀಡಿದೆ.

ಇದನ್ನೂ ಓದಿ : Big News: ಪ್ರಧಾನಿ ಮೋದಿ ಸಂಪುಟದಲ್ಲಿ ರಾಜ್ಯದ ನಾಲ್ವರಿಗೆ ಒಲಿದ ಮಂತ್ರಿ ಭಾಗ್ಯ

ರಾಜ್ಯ ಮಾತ್ರವಲ್ಲದೆ, ಭುವನೇಶ್ವರ ಒಡಿಶಾದಲ್ಲಿ ಒಂದು ವಾರದಿಂದ ಭಾರೀ ಮಳೆ(Heavy Rain)ಯಾಗಲಿದೆ. ಭುವನೇಶ್ವರದ ಅನೇಕ ಕಡೆ ರಸ್ತೆಗಳು ಬಂದ್ ಆಗಿದ್ದು, ನದಿ ತೀರದ ಗ್ರಾಮಗಳಿಗೂ ನೀರು ನುಗ್ಗಿದೆ. ಇಷ್ಟೇ ಅಲ್ಲದೆ, ರಾಜಸ್ಥಾನ, ಉತ್ತರ ಪ್ರದೇಶ, ಹರಿಯಾಣ, ಚಂಡೀಗಢ, ದೆಹಲಿ, ಪಂಜಾಬ್ ರಾಜ್ಯಗಳಲ್ಲೂ ಇಂದು ಮಳೆಯಾಗಲಿದೆ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಇದನ್ನೂ ಓದಿ : Heavy Rain : ರಾಜ್ಯದಲ್ಲಿ ಇಂದು ನಾಳೆ ಭಾರೀ ಮಳೆ : ಕರಾವಳಿ ಭಾಗದಲ್ಲಿ ಹವಾಮಾನ ಇಲಾಖೆ ಎಚ್ಚರಿಕೆ

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ

Trending News