ಬೆಂಗಳೂರು : ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಇಂದಿನಿಂದ ಭಾನುವಾರದವರೆಗೆ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ರಾಜ್ಯದ ಕರಾವಳಿ ಮತ್ತು ಮಲೆನಾಡ ಭಾಗದಲ್ಲಿ ಭಾರೀ ಮಳೆಯಾಗುತ್ತಿದ್ದು, ಹಲವೆಡೆ ಹವಾಮಾನ ಇಲಾಖೆ(IMD) ರೆಡ್, ಯೆಲ್ಲೋ, ಅರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಇದನ್ನೂ ಓದಿ : Siddaramaiah: ‘ಬೆಳಗಾವಿಯಲ್ಲಿ ಕೂಡಲೇ ವಿಧಾನಮಂಡಲ ಅಧಿವೇಶನ ಕರೆಯಬೇಕು’
ಈ ಮಳೆ ಇಂದು ನಾಳೆ ಕೂಡ ಉತ್ತರ ಕರ್ನಾಟಕ, ಕರಾವಳಿ ಮತ್ತು ಮಲೆನಾಡ ಭಾಗದಲ್ಲಿ ಮುಂದುವರೆಯಲಿದೆ. ಅಲ್ಲದೆ ನಾಳೆ ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಕೊಡಗು ಜಿಲ್ಲೆಗಳಲ್ಲಿ ರೆಡ್ ಅಲರ್ಟ್(Red Alert) ಘೋಷಣೆ ಮಾಡಲಾಗಿದೆ. ಜುಲೈ 15 ಮತ್ತು 17ರಂದು ಈ ಪ್ರದೇಶಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಇದನ್ನೂ ಓದಿ : Heavy Rainfall : ಉತ್ತರ ಕರ್ನಾಟಕ ಭಾಗದಲ್ಲಿ ಮುಂದಿನ 5 ದಿನ ಭಾರೀ ಮಳೆ!
ಚಿತ್ರದುರ್ಗ, ದಾವಣಗೆರೆ, ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ ಜಿಲ್ಲೆಗಳಲ್ಲಿ ಭಾರೀ ಮಳೆ(Heavy Rain)ಯಾಗಲಿದೆ. ಹೀಗಾಗಿ ಈ ಜಿಲ್ಲೆಗಳಲ್ಲಿ 'ಯಲ್ಲೋ, ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಇದನ್ನೂ ಓದಿ : Global Home Price Index 2021: ಭಾರತದಲ್ಲಿ ಮನೆಗಳ ಬೆಲೆಗಳಲ್ಲಿ ಭಾರಿ ಕುಸಿತ, ನಮ್ಮ ಬೆಂಗಳೂರಿನಲ್ಲಿ ಎಷ್ಟು ಕುಸಿತ?
ರಾಜ್ಯದಲ್ಲಿ ಈಗಾಗಲೇ ನೈರುತ್ಯ ಮಾನ್ಸೂನ್ನಿಂದಾಗಿ ಚನ್ನಾಗಿ ಮಳೆಯಾಗುತ್ತಿದೆ. ಅಲ್ಲದೆ, ಜುಲೈ 18ರವರೆಗೂ ರಾಜ್ಯದಲ್ಲಿ ಭಾರೀ ಮಳೆ(Heavy Rainfall)ಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಇದನ್ನೂ ಓದಿ : Karnataka Unlock: ಸೋಂಕಿನ ಪ್ರಮಾಣ ಇಳಿಕೆ, ಮತ್ತಷ್ಟು ವಿನಾಯಿತಿ ಘೋಷಿಸುವ ಸಾಧ್ಯತೆ..?
ಕೊಡಗು ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಧಾರಾಕಾರ ಮಳೆ(Rainfall) ಸುರಿಯುತ್ತಿದೆ. ಬಾಗಮಂಡಲ, ನಾಪೋಕ್ಲು, ಮಡಿಕೇರಿ, ಸುಂಟಿಕೊಪ್ಪ ಮತ್ತು ಸೋಮವಾರಪೇಟೆ ಭಾಗದಲ್ಲಿ ಧಾರಾಕಾರ ಮಳೆ ಸುರಿಯುತ್ತಿದೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ