ಬೆಂಗಳೂರು: ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯುತ್ತಿದ್ದು ಪ್ರವಾಹದ ಭೀತಿ ಉಂಟಾಗಿರುವುದರಿಂದ ರಾಜ್ಯದಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದ್ದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ (BS Yediyurappa) ಪ್ರವಾಹ ಪರಿಸ್ಥಿರಿ ಎದುರಿಸಲು ಸಜ್ಜಾಗುವಂತೆ ಜಿಲ್ಲಾ ಉಸ್ತುವಾರಿ ಸಚಿವರಿಗೆ ಸೂಚನೆ ‌ನೀಡಿದ್ದಾರೆ.


COMMERCIAL BREAK
SCROLL TO CONTINUE READING

ಸದ್ಯ ಕೋವಿಡ್-19 (COVID-19) ಪಾಸಿಟಿವ್ ಬಂದು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಯಡಿಯೂರಪ್ಪ, ಆಸ್ಪತ್ರೆಯಿಂದಲೇ ಉಸ್ತುವಾರಿ ಸಚಿವರಿಗೆ ಪ್ರವಾಹ ಪರಿಸ್ಥಿರಿ ಎದುರಿಸಲು ಸಜ್ಜಾಗುವಂತೆ ಸೂಚನೆ ‌ನೀಡಿದ್ದಾರೆ.


ಮುಂಬೈನಲ್ಲಿ ಭಾರೀ ಮಳೆಗೆ ಸಿಲುಕಿದ್ದ 290 ಜನರ ರಕ್ಷಣೆ, ಸಿಎಂ ಜೊತೆ ಪಿಎಂ ಚರ್ಚೆ


ಜಿಲ್ಲಾ ಉಸ್ತುವಾರಿ ಸಚಿವರು ತಮ್ಮ ಉಸ್ತುವಾರಿ ಜಿಲ್ಲೆಗಳಲ್ಲೇ ಇರಬೇಕು.‌ ಜಿಲ್ಲೆಯ ಶಾಸಕರು ಮತ್ತು ಅಧಿಕಾರಿಗಳ ಜೊತೆ ನಿರಂತರವಾಗಿ ಸಂಪರ್ಕದಲ್ಲಿದ್ದು ತ್ವರಿತ ಕ್ರಮಗಳನ್ನು ಕೈಗೊಳ್ಳಬೇಕು. ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಪರಿಶೀಲನೆ ನಡೆಸಿ ಪರಿಹಾರ ಮತ್ತು ಪುನರ್ವಸತಿ ಕಾರ್ಯಗಳನ್ನು ಕೈಗೊಳ್ಳಬೇಕು ಎಂದು ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ.


ಈಗಾಗಲೇ ಮಳೆ (Rain) ಹಾನಿ ನಿರ್ವಹಣೆಗೆ 50 ಕೋಟಿ ರೂಪಾಯಿ ಬಿಡುಗಡೆ ಮಾಡಲಾಗಿದೆ. ಅಗತ್ಯವಾದರೆ ಇನ್ನಷ್ಟು ಪರಿಹಾರ ಬಿಡುಗಡೆ ಮಾಡಲಾಗುವುದು ಎಂದು ಎಲ್ಲಾ ಜಿಲ್ಲಾ ಉಸ್ತುವಾರಿ ಸಚಿವರಿಗೆ ದೂರವಾಣಿ ಕರೆ ಮಾಡಿ ನಿರ್ದೇಶನ ನೀಡಿದ್ದಾರೆ ಎನ್ನಲಾಗಿದೆ.


ತೀವ್ರವಾಗಿ ಮಳೆ ಸುರಿಯುತ್ತಿರುವ ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು, ‌ಬೆಳಗಾವಿ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ದೂರವಾಣಿ ಮೂಲಕ ಮಾತನಾಡಿದ್ದಾರೆ ಎಂದು ತಿಳಿದುಬಂದಿದೆ.


ಶಾಕಿಂಗ್! ಚೀನಾದಲ್ಲಿ ಮತ್ತೊಂದು ಭಯಾನಕ ವೈರಸ್ ಪತ್ತೆ: ಇದುವರೆಗೆ 7 ಸಾವು


ಮೊದಲು ಮಳೆಯಿಂದ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ. ಹಾನಿಗೊಳಗಾದವರಿಗೆ ಪರಿಹಾರ ನೀಡಿ. ಸ್ಥಳೀಯ ಶಾಸಕರ ವಿಶ್ವಾಸಕ್ಕೆ ತೆಗೆದುಕೊಳ್ಳಿ ಎಂದು ಉಸ್ತುವಾರಿ ಸಚಿವರಿಗೆ ಸೂಚಿಸಿರುವ ಯಡಿಯೂರಪ್ಪ, ಜಿಲ್ಲಾಧಿಕಾರಿಗಳಿಗೂ ಕರೆ ಮಾಡಿ ತಕ್ಷಣವೇ ಕಾರ್ಯಪ್ರವೃತ್ತರಾಗುವಂತೆ ನಿರ್ದೇಶಿಸಿದ್ದಾರೆ ಎನ್ನಲಾಗಿದೆ.


ಈ ಬಗ್ಗೆ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಉಪಮುಖ್ಯಮಂತ್ರಿ ಡಾ. ಸಿ. ಎನ್. ಅಶ್ವಥನಾರಾಯಣ (Dr CN Ashwathnarayan),  ರಾಜ್ಯದಲ್ಲಿ‌ ಅತಿ ಹೆಚ್ಚು ಮಳೆ ಹಿನ್ನೆಲೆಯಲ್ಲಿ ಪ್ರವಾಹದ ಕುರಿತು ಈಗಾಗಲೇ ಸಿಎಂ ಸೂಚನೆ ನೀಡಿದ್ದಾರೆ. ರಾಜ್ಯದ ಎಲ್ಲಾ ಕಡೆ ಹೆಚ್ಚಿನ ಮಳೆಯಾಗುತ್ತಿದೆ. ಕಾರ್ಯದರ್ಶಿ ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಗೆ ಈಗಾಗಲೇ ಸೂಚನೆ ಹೋಗಿದೆ. ಪ್ರವಾಹ ಎದುರಿಸಲು ಈಗಾಗಲೇ ಸಿದ್ಧತೆ ಮಾಡಿಕೊಳ್ಳಲಾಗಿದೆ. ಪ್ರವಾಹ ಪರಿಸ್ಥಿತಿ ಎದುರಿಸಲು ಸರ್ಕಾರ ಎಲ್ಲಾ ರೀತಿಯಲ್ಲೂ ಸಜ್ಜಾಗಿದೆ ಎಂದು ಹೇಳಿದ್ದಾರೆ.