ಭಾರೀ ಮಳೆಗೆ ತತ್ತರಿಸಿದ ಮಂಗಳೂರು!
ಭಾರೀ ಮಳೆಯಿಂದಾಗಿ ರಸ್ತೆಯಲ್ಲಿ ನೀರು ತುಂಬಿ ಜನರು ಓಡಾಡಲು ಪರದಾಡುವಂತಾಗಿದೆ.
ಮಂಗಳೂರು: ಮಂಗಳೂರಿನ ಕೆಲವು ಭಾಗಗಳಲ್ಲಿ ಗುರುವಾರ ಭರ್ಜರಿ ಮಳೆಯಾಗಿದ್ದು, ಭಾರೀ ಮಳೆಗೆ ಕಡಲ ನಗರಿ ತತ್ತರಿಸಿದೆ.
ಭಾರೀ ಮಳೆಯಿಂದಾಗಿ ರಸ್ತೆಗಳು ಮತ್ತು ತಗ್ಗು ಪ್ರದೇಶದಲ್ಲಿ ನೀರು ತುಂಬಿದ್ದು, ಹಲವಡೆ ರಸ್ತೆ ಸಂಚಾರ ಅಸ್ತವ್ಯಸ್ತವಾಗಿದೆ. ದ್ವಿಚಕ್ರ ವಾಹನ ಸವಾರರು ಪರದಾಡುವಂತಾಗಿದೆ.
ಭಾರತ ಹವಾಮಾನ ಇಲಾಖೆ (ಐಎಂಡಿ) ಜುಲೈ 22 ರವರೆಗೆ ನಗರದಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ನೀಡಿದ್ದು, ಗರಿಷ್ಠ ತಾಪಮಾನವು 24 ಡಿಗ್ರಿ ಸೆಲ್ಸಿಯಸ್‌ನಿಂದ 28 ಡಿಗ್ರಿ ಸೆಲ್ಸಿಯಸ್‌ವರೆಗೆ ಇರಲಿದೆ ಎಂದು ತಿಳಿಸಿದೆ.
ಮಂಗಳೂರಿನ ಹೊರತಾಗಿ, ಇಡುಕಿ, ವಯನಾಡ್ ಮತ್ತು ಕೋಜಿಕೋಡ್ ಮುಂತಾದ ಸ್ಥಳಗಳು ಮಳೆಯಿಂದ ಪ್ರಭಾವಿತವಾಗುವ ಸಾಧ್ಯತೆಯಿದೆ.