ನವದೆಹಲಿ: ಕೇಂದ್ರ ಭಾರತ, ಪೂರ್ವ ಭಾರತ ಮತ್ತು ದಕ್ಷಿಣ ಪರ್ಯಾಯ ದ್ವೀಪದ ಹಲವು ಭಾಗಗಳಲ್ಲಿ ಮಂಗಳವಾರದಿಂದ ಮೂರು ದಿನಗಳ ಕಾಲ ಭಾರಿ ಗುಡುಗು ಸಹಿತ ಮಳೆ ಹಾಗೂ ಸಿಡಿಲಿನ ವಾತಾವರಣ ಉಂಟಾಗಲಿದೆಯೆಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಸೋಮವಾರ ಮುನ್ಸೂಚನೆ ನೀಡಿದೆ.


COMMERCIAL BREAK
SCROLL TO CONTINUE READING

Randeep Singh Surjewala: 'ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿ, ರಾಜ್ಯದ ಮಾನ ಉಳಿಸಿ'


ಕರ್ನಾಟಕದ ಉತ್ತರ ಒಳನಾಡಿನಲ್ಲಿ ಕೂಡ ಇದರ ಪರಿಣಾಮ ಉಂಟಾಗಲಿದೆ. ಮೂರೂ ದಿನ ಉತ್ತರ ಕರ್ನಾಟಕದ ಒಳನಾಡು ಪ್ರದೇಶಗಳಲ್ಲಿ ಇದೇ ರೀತಿಯ ವಾತಾವರಣ ಇರಲಿದೆ ಎಂದು ಇಲಾಖೆ ತಿಳಿಸಿದೆ. ಮಧ್ಯಪ್ರದೇಶ, ವಿದರ್ಭ, ಛತ್ತೀಸ್‌ಗಢ ಮತ್ತು ಮರಾಠವಾಡಾದಲ್ಲಿ ಗುಡುಗಿನಿಂದ ಕೂಡಿದ ಮಳೆ(Heavy Rain)ಯಾಗಲಿದೆ. ಆಲಿಕಲ್ಲು ಮಳೆಯೂ ಬೀಳಬಹುದು. ಜಾರ್ಖಂಡ್, ಒಡಿಶಾ, ಪಶ್ಚಿಮ ಬಂಗಾಳ, ಸಿಕ್ಕಿಂ, ಮಧ್ಯ ಮಹಾರಾಷ್ಟ್ರ ಮೊದಲಾದೆಡೆ ಗುಡುಗು ಸಹಿತ ಮಳೆಯ ಆರ್ಭಟ ಇರುತ್ತದೆ ಎಂದು ಐಎಂಡಿ ಹೇಳಿದೆ.


Congress: 'ಪಿಎಂ ಮೋದಿ ಸ್ವಾತಂತ್ರ್ಯ ಬಂದ್ಮೇಲೆ ಹುಟ್ಟಿದ ಗಿರಾಕಿ, ನಾನು ಅದಕ್ಕೂ ಮೊದ್ಲೆ ಹುಟ್ಟಿದವನು'


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.