ಮಳೆಯ ಅಬ್ಬರ: ಶಿವಮೊಗ್ಗ ಜಿಲ್ಲೆಯ 3 ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ
ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ, ಹೊಸನಗರ ಮತ್ತು ಸಾಗರ ತಾಲ್ಲೂಕುಗಳಲ್ಲಿ ಅತೀ ಹೆಚ್ಚು ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತೆ ದೃಷ್ಟಿಯಿಂದ ಜು.12ರಂದು ಈ ತಾಲ್ಲೂಕಿನ ಶಾಲೆಗಳಿಗೆ ಮಾತ್ರ ಅನ್ವಯವಾಗುವಂತೆ ರಜೆ ಘೋಷಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.
ಶಿವಮೊಗ್ಗ: ರಾಜ್ಯದಲ್ಲಿ ವರುಣನ ಅಬ್ಬರ ಜೋರಾಗಿದ್ದು, ರಾಜ್ಯದ ಹಲವು ಭಾಗಗಳಲ್ಲಿ ಎಡಬಿಡದೆ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಜನ ಜೀವನ ಅಸ್ತವ್ಯಸ್ತವಾಗಿದೆ. ಅತೀ ಹೆಚ್ಚು ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಶಿವಮೊಗ್ಗ ಜಿಲ್ಲೆಯ ಮೂರು ತಾಲೂಕಿನ ಶಾಲೆಗಳಿಗೆ ಮಂಗಳವಾರ ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ಆದೇಶಿಸಿದ್ದಾರೆ.
ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ, ಹೊಸನಗರ ಮತ್ತು ಸಾಗರ ತಾಲ್ಲೂಕುಗಳಲ್ಲಿ ಅತೀ ಹೆಚ್ಚು ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತೆ ದೃಷ್ಟಿಯಿಂದ ಜು.12ರಂದು ಈ ತಾಲ್ಲೂಕಿನ ಶಾಲೆಗಳಿಗೆ ಮಾತ್ರ ಅನ್ವಯವಾಗುವಂತೆ ರಜೆ ಘೋಷಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.
ಇದನ್ನೂ ಓದಿ- HD Kumaraswamy : ಹೆಚ್ಡಿ ಕುಮಾರಸ್ವಾಮಿಗೆ ಕೊರೊನಾ ಪಾಸಿಟಿವ್!
ಶಿವಮೊಗ್ಗ ಜಿಲ್ಲೆಯ ಉಳಿದ ತಾಲ್ಲೂಕುಗಳಲ್ಲಿ ಎಂದಿನಂತೆ ಶಾಲೆಗಳು ನಡೆಯಲಿದ್ದು, ಈ ಬಗ್ಗೆ ಶಾಲಾ ಮುಖ್ಯ ಶಿಕ್ಷಕರಿಗೆ ಅಗತ್ಯ ಮಾಹಿತಿ ನೀಡಲು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಅವರು ಸೂಚಿಸಿದ್ದಾರೆ.
ತೀರ್ಥಹಳ್ಳಿಯಲ್ಲಿ ಎಡೆಬಿಡದೆ ಸುರಿಯುತ್ತಿರುವ ಮಳೆ:
ತೀರ್ಥಹಳ್ಳಿ ತಾಲೂಕಿನಲ್ಲಿ ಭಾರೀ ಮಳೆಯಾಗುತ್ತಿದೆ. ತುಂಗಾ ನದಿಯಲ್ಲಿ ನೀರು ಹೆಚ್ಚಿದೆ. ಗಾಜನೂರು ಡ್ಯಾಂ ನಿಂದ 50 ಸಾವಿರ ಕ್ಯೂಸೆಕ್ಸ್ ನೀರು ಹೊರಬಿಡಲಾಗುತ್ತಿದೆ.
ಇದನ್ನೂ ಓದಿ- ಲೆಕ್ಕ ಬರೆದಿಟ್ಟುಕೊಳ್ಳಿ ಡಿಕೆಶಿ ನಿಮ್ಮ ಲೆಕ್ಕ ಚುಕ್ತಾ ಮಾಡುತ್ತಾರೆ: ಬಿಜೆಪಿ ಎಚ್ಚರಿಕೆ
ಮಳೆಯಿಂದಾಗಿ ಅಪಾರ ನಷ್ಟ:
ತೀರ್ಥಹಳ್ಳಿ ತಾಲೂಕು ಆರಗ ಪಂಚಾಯ್ತಿ ಕಾಳಮ್ಮನ ಗುಡಿಯ ಶ್ರೀನಿವಾಸ ಎಂಬುವವರ ಸಸೀತೋಟದಲ್ಲಿ ಮಳೆಯಿಂದ ಗುಡ್ಡ ಕುಸಿದಿದ್ದು ಬಾರೀ ಅನಾಹುತ ಸಂಭವಿಸಿದೆ. ಮಳೆಗೆ ಮನೆಗಳು ಶಿಥಿಲಗೊಂಡಿವೆ. ಜನರು ಮನೆಯಿಂದ ಹೊರಬಾರದ ಪರಿಸ್ಥಿತಿ ನಿರ್ಮಾಣವಾಗಿದೆ.
https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.