ರಾಜ್ಯದಲ್ಲಿ ಮತ್ತೆ ಮುಂಗಾರು ಅಬ್ಬರ, ಇನ್ನೊಂದು ವಾರ ಭಾರೀ ಮಳೆ ಮುನ್ಸೂಚನೆ
ರಾಜ್ಯದಲ್ಲಿ ಮತ್ತೆ ಮಳೆ ಜೋರಾಗಲಿದೆ. ಮುಂದಿನ ವಾರದಿಂದ ಮಳೆ ಮತ್ತೆ ಚುರುಕು ಪಡೆಯಲಿದೆ. ಇನ್ನೊಂದು ವಾರದಲ್ಲಿ ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ ಜಿಲ್ಲೆಗಳಿಗೆ ಈ ವಾರ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಬೆಂಗಳೂರು : ರಾಜ್ಯದಲ್ಲಿ ಸ್ವಲ್ಪ ದಿನಗಳಿಂದ ಬಿಡುವು ಪಡೆದಿದ್ದ ವರುಣ ಮತ್ತೆ ಅಬ್ಬರಿಸಲಿದ್ದಾನೆ. ಇನ್ನೊಂದು ವಾರ ರಾಜ್ಯದಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಜಿಲ್ಲೆಗಳಿಗೆ ಈ ವಾರ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಮುಂದಿನ ವಾರ ರಾಜ್ಯದ ಬಹುತೇಕ ಕಡೆ ಉತ್ತಮ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.
ರಾಜ್ಯದಲ್ಲಿ ಮತ್ತೆ ಮಳೆ ಜೋರಾಗಲಿದೆ. ಮುಂದಿನ ವಾರದಿಂದ ಮಳೆ ಮತ್ತೆ ಚುರುಕು ಪಡೆಯಲಿದೆ. ಇನ್ನೊಂದು ವಾರದಲ್ಲಿ ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ ಜಿಲ್ಲೆಗಳಿಗೆ ಈ ವಾರ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ದಕ್ಷಿಣ ಒಳನಾಡಿನಲ್ಲಿ ನಾಲ್ಕು ದಿನ ಹಗುರ ಮಳೆಯಾಗಲಿದೆ. ರಾಜ್ಯದ ಬಹುತೇಕ ಕಡೆ ಉತ್ತಮ ಮಳೆಯಾಗುವ ನಿರೀಕ್ಷೆಯಿದೆ ಎಂದು
ಹವಾಮಾನ ಇಲಾಖೆಯ ಪ್ರಸಾದ್ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ : ಸಿಲಿಕಾನ್ ಸಿಟಿಯಲ್ಲಿ ವ್ಹಿಲೀಂಗ್ ಹಾವಳಿ: ಪುಂಡನ ಶೋಕಿಗೆ ಯುವತಿ ಸಾಥ್
ಕರಾವಳಿ, ದಕ್ಷಿಣ ಒಳನಾಡು ಸೇರಿದಂತೆ ಕೆಲವು ಜಿಲ್ಲೆಗಳಿಗೆ ಐದು ದಿನ ಯಲ್ಲೋ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಹಾಕಲಾಗಿದೆ. ಇಂದು ಮತ್ತು ನಾಳೆ ಚಿಕ್ಕಮಗಳೂರು, ಕೊಡಗು ಜಿಲ್ಲೆಗೂ ಯೆಲ್ಲೋ ಅಲರ್ಟ್ ಹಾಕಲಾಗಿದೆ. ನಾಳೆಯ ನಂತರ ರಾಜ್ಯದಲ್ಲಿ ಇನ್ನಷ್ಟು ಮಳೆ ಹೆಚ್ಚಾಗಲಿದೆ.
ಆ.24ರಂದು ಚಿಕ್ಕಮಗಳೂರು, ಕೊಡಗು, ಮೈಸೂರು, ಚಾಮರಾಜನಗರ, ಕೋಲಾರ ಜಿಲ್ಲೆಗೆ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಹಾಗೆಯೇ ಆ.25ರಂದು ಚಿಕ್ಕಮಗಳೂರು, ಕೊಡಗು ಜಿಲ್ಲೆಗೆ ಯಲ್ಲೋ ಅಲರ್ಟ್ ಇರಲಿದೆ. ಕರಾವಳಿಯಲ್ಲಿ ಬಿರುಗಾಳಿ ಬೀಸುವ ಮುನ್ಸೂಚನೆ ನೀಡಲಾಗಿದ್ದು, ಆ.24, 25, 26 ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಬೆಂಗಳೂರಲ್ಲಿ ಎರಡು ದಿನ ಮೋಡ ಕವಿದ ವಾತಾವರಣ ಇರಲಿದೆ.
ಇದನ್ನೂ ಓದಿ : ಬೆಳಗಾವಿಯಲ್ಲಿ ಚಿರತೆ ಪ್ರತ್ಯಕ್ಷ - ನಗರ ಮತ್ತು ಗ್ರಾಮೀಣ ಪ್ರದೇಶದ 22ಶಾಲೆಗಳಿಗೆ ರಜೆ ಘೋಷಣೆ
https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.