ಬೆಂಗಳೂರು : ರಾಜ್ಯದಲ್ಲಿ ಇಂದಿನಿಂದ ಮುಂಗಾರು ಮಳೆ ತೀವ್ರವಾಗುವ ಸಾಧ್ಯತೆ ಇದ್ದು, ಕರಾವಳಿ ಜಿಲ್ಲೆಗಳು ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಇಂದಿನಿಂದ ಒಂದು ವಾರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಇಂದಿನಿಂದ ಜೂನ್ 13 ರವರೆಗೆ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಭಾರೀ ಮಳೆ(Heavy Rain)ಯಾಗುವ ಸಾಧ್ಯತೆ ಇದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಕರಾವಳಿ ಜಿಲ್ಲೆಗಳು ಮತ್ತು ದಕ್ಷಿಣ ಒಳನಾಡಿನಲ್ಲಿ ಇಂದಿನಿಂದ ಗುಡುಗು ಸಿಡಿಲು, ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಇದನ್ನೂ ಓದಿ : ರಾಜ್ಯದಲ್ಲಿ ಕೆಲವು ವಿನಾಯಿತಿಯೊಂದಿಗೆ ಜೂನ್ 21 ರವರೆಗೆ ಲಾಕ್ ಡೌನ್ ವಿಸ್ತರಣೆ
ದಕ್ಷಿಣ ಕನ್ನಡ, ಉಡುಪಿ, ರಾಯಚೂರು, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಶಿವಮೊಗ್ಗ, ಹಾಸನ, ಬೀದರ್, ಗದಗ, ಬೆಂಗಳೂರು ನಗರ, ಕಲಬುರ್ಗಿ, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ, ತುಮಕೂರು, ಕೋಲಾರ, ದಾವಣಗೆರೆ, ಕೊಪ್ಪಳ ಜಿಲ್ಲೆಗಳಲ್ಲೂ ಮಳೆಯಾಗುವ ಸಾದ್ಯತೆ ಇದ್ದು, ಅಲ್ಲಲ್ಲಿ ರೆಟ್ ಅಲರ್ಟ್(Red Alert) ಘೋಷಿಸಲಾಗಿದೆ.
ಇದನ್ನೂ ಓದಿ : Karnataka Lockdown Update : ರಾಜ್ಯದ ಈ 8 ಜಿಲ್ಲೆಗಳಲ್ಲಿ ಮತ್ತೆ '1 ವಾರ ಲಾಕ್ ಡೌನ್' ಮುಂದುವರಿಕೆ!
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.