ಉಡುಪಿಯಲ್ಲಿ ಭಾರೀ ಮಳೆ; ಇಂದೂ ಕೂಡ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ಆದೇಶ ಹೊರಡಿಸಿದ ಜಿಲ್ಲಾಧಿಕಾರಿ.

Last Updated : Jul 24, 2019, 08:07 AM IST
ಉಡುಪಿಯಲ್ಲಿ ಭಾರೀ ಮಳೆ; ಇಂದೂ ಕೂಡ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ title=
Representative image

ಉಡುಪಿ: ಉಡುಪಿ ಜಿಲ್ಲೆಯಾದ್ಯಂತ ಎಡಬಿಡದೆ ಮಳೆ ಸುರಿಯುತ್ತಿರುವ ಕಾರಣ ಇಂದೂ(ಜುಲೈ 24) ಕೂಡ ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ಆದೇಶ ಹೊರಡಿಸಿರುವ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ, ಉಡುಪಿಯಲ್ಲಿ ಬುಧವಾರವೂ ಭಾರೀ ಮಳೆಯಾಗುತ್ತಿರುವ ಕಾರಣ ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲೆಯಲ್ಲಿರುವ ಅಂಗನವಾಡಿ ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಮತ್ತು ಪದವಿ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಮಂಗಳವಾರವೂ ಕೂಡ ಸರಕಾರ, ಅನುದಾನಿತ ಮತ್ತು ಖಾಸಗಿಯಾ ಎಲ್ಲಾ ಅಂಗನವಾಡಿ, ಶಾಲಾ-ಕಾಲೇಜುಗಳಿಗೆ(ಪದವಿ ಪೂರ್ವ ತರಗತಿವರೆಗೆ) ರಜೆ ಘೋಷಿಸಲಾಗಿತ್ತು.
 

Trending News