ರಾಜ್ಯದಲ್ಲಿ ಇನ್ನೂ ಮೂರ್ನಾಲ್ಕು ದಿನ ಭಾರೀ ಮಳೆ ಸಾಧ್ಯತೆ: ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ!!

Karnataka Rain Alert: ನಾಳೆ(ಅಕ್ಟೋಬರ್ 21) ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಕನ್ನಡ ಜಿಲ್ಲೆಯ ಹೆಚ್ಚಿನ ಸ್ಥಳಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ

Written by - Puttaraj K Alur | Last Updated : Oct 20, 2024, 11:37 PM IST
  • ರಾಜ್ಯದಲ್ಲಿ ಇನ್ನೂ ಮೂರ್ನಾಲ್ಕು ದಿನ ಭಾರೀ ಮಳೆ ಸಾಧ್ಯತೆ
  • ಇಂದಿನಿಂದ ಅಕ್ಟೋಬರ್ 24ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ
  • ಕರ್ನಾಟಕ ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ
ರಾಜ್ಯದಲ್ಲಿ ಇನ್ನೂ ಮೂರ್ನಾಲ್ಕು ದಿನ ಭಾರೀ ಮಳೆ ಸಾಧ್ಯತೆ: ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ!! title=
ಭಾರೀ ಮಳೆ ಸಾಧ್ಯತೆ!

Karnataka Rain Alert: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ರಾಜ್ಯದಲ್ಲಿ ಇನ್ನೂ ಮೂರ್ನಾಲ್ಕು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಅಂತಾ ಹವಾಮಾನ ಇಲಾಖೆ ಅಧಿಕಾರಿಗಳು ಮುನ್ಸೂಚನೆ ನೀಡಿದ್ದಾರೆ.

ಈ ಬಗ್ಗೆ ರಾಜ್ಯ ಹವಾಮಾನ ಇಲಾಖೆಯಿಂದ ಮಾಹಿತಿ ಬಿಡುಗಡೆ ಮಾಡಲಾಗಿದೆ. ಇಂದಿನಿಂದ ಅಕ್ಟೋಬರ್ 24ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ತುಮಕೂರು, ಚಿತ್ರದುರ್ಗ, ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.

ಇದನ್ನೂ ಓದಿ: ವಿಜಯನಗರದಲ್ಲಿ ಮಳೆರಾಯನ ಆರ್ಭಟ

ದಕ್ಷಿಣ ಒಳನಾಡು ಸೇರಿದಂತೆ ಉಳಿದ ಜಿಲ್ಲೆಗಳಲ್ಲಿ ಬಹುತೇಕ ಕಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡು ಉಳಿದ ಜಿಲ್ಲೆಗಳಲ್ಲಿ ಅನೇಕ ಸ್ಥಳಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

ನಾಳೆ(ಅಕ್ಟೋಬರ್ 21) ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಕನ್ನಡ ಜಿಲ್ಲೆಯ ಹೆಚ್ಚಿನ ಸ್ಥಳಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬೆಳಗಾವಿ, ಧಾರವಾಡ,ಗದಗ, ಹಾವೇರಿ, ತುಮಕೂರು, ಚಿತ್ರದುರ್ಗ, ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ ಮತ್ತು ಹಾಸನ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. 

ಇದನ್ನೂ ಓದಿ: ಮುಳ್ಳಯ್ಯನಗಿರಿಯಲ್ಲಿ ವರುಣಾರ್ಭಟ... ಆತಂಕದಲ್ಲಿ ಜನತೆ

ದಕ್ಷಿಣ ಒಳನಾಡು ಸೇರಿದಂತೆ ಉಳಿದ ಜಿಲ್ಲೆಗಳಲ್ಲಿ ಬಹುತೇಕ ಕಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡು ಸೇರಿದಂತೆ ಉಳಿದ ಜಿಲ್ಲೆಗಳಲ್ಲಿ ಅನೇಕ ಸ್ಥಳಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News