ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ  ಕುಸಿತ ಹಿನ್ನೆಲೆ ಸಿಲಿಕಾನ್ ಸಿಟಿ ಬೆಂಗಳೂರು(Bengaluru Rain) ಸೇರಿ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಈಗಾಗಲೇ ಬೆಂಗಳೂರು ಸೇರಿದಂತೆ ರಾಜ್ಯದ ಅನೇಕ ಜಿಲ್ಲೆಗಳಲ್ಲಿ ವರುಣನ ಆರ್ಭಟ ಜೋರಾಗಿದ್ದು, ಮತ್ತಷ್ಟು ಮಳೆ ಅಬ್ಬರ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.


COMMERCIAL BREAK
SCROLL TO CONTINUE READING

ಭಾರತೀಯ ಹವಾಮಾನ ಇಲಾಖೆ(IMD)ಯ ಮಾಹಿತಿಯ ಪ್ರಕಾರ, ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಇಂದಿನಿಂದ ಹೆಚ್ಚು ಮಳೆಯಾಗುವ ಸಂಭವವಿದ್ದು, ಎಚ್ಚರಿಕೆ ನೀಡಲಾಗಿದೆ. ಇಲ್ಲಿ ವಾಡಿಕೆಗಿಂತಲೂ ಹೆಚ್ಚು ಮಳೆಯಾಗಿದೆ. ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ನಗರದ ರಸ್ತೆಗಳು ಗುಂಡಿ ಬಿದ್ದು, ವಾಹನ ಸವಾರರಿಗೆ ತೀವ್ರ ತೊಂದರೆಯಾಗುತ್ತಿದೆ.


ಇದನ್ನೂ ಓದಿ: ಸಿದ್ದರಾಮಯ್ಯ ರಾಜ್ಯದ ಜನತೆಯ ದಾರಿ ತಪ್ಪಿಸುತ್ತಿದ್ದಾರೆ : ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ವಾಗ್ದಾಳಿ


ಯೆಲ್ಲೋ ಅಲರ್ಟ್ ಘೋಷಣೆ


ಈ ವಾರ ಕರಾವಳಿಯಲ್ಲಿ ವರುಣ ಭರ್ಜರಿಯಾಗಿ ಆರ್ಭಟಿಸಿದ್ದಾನೆ. ಭಾರೀ ಮಳೆ(Heavy Rain)ಯಾಗುವ ನಿರೀಕ್ಷೆ ಹಿನ್ನೆಲೆ ಬೆಂಗಳೂರು ಸೇರಿ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾಧಾರಣದಿಂದ ಭಾರೀ ಮಳೆ ನಿರೀಕ್ಷೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಮಂಡ್ಯ, ಮೈಸೂರು, ಚಿಕ್ಕ ಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಕೊಡಗು, ಕೋಲಾರ, ಹಾಸನ, ಕೋಲಾರ, ಬೆಳಗಾವಿ, ಬೀದರ್, ಕಲಬುರಗಿ ಸೇರಿ ಅನೇಕ ಜಿಲ್ಲೆಗಳಲ್ಲಿ ಮಳೆ ಮುಂದುವರೆಯುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.


ಅರಬ್ಬಿ ಸಮುದ್ರದ ಲಕ್ಷದ್ವೀಪ ಭಾಗದಲ್ಲಿ ಹಾಗೂ ಬಂಗಾಳ ಕೊಲ್ಲಿ(Bay of Bengal)ಯ ಆಗ್ನೇಯ ಭಾಗದಲ್ಲಿ ವಾಯುಭಾರ ಕುಸಿತವಾಗಿದ್ದು, ಮಳೆಗೆ ಮೂಲ ಕಾರಣವೆಂದು ಹೇಳಲಾಗುತ್ತಿದೆ. ಇದರ ಜೊತೆಗೆ ಒಂದು ವಾರದ ಬಳಿಕ ಮುಂಗಾರು ಮಳೆ ಕಡಿಮೆಯಾಗಿ ರಾಜ್ಯಕ್ಕೆ ಹಿಂಗಾರು ಪ್ರವೇಶ ಪಡೆಯಲಿದೆ ಎನ್ನುವುದು ಲೆಕ್ಕಾಚಾರವಾಗಿದೆ.


ಇದನ್ನೂ ಓದಿ: ಸ್ವಯಂ ಸೇವಾ ಸಂಸ್ಥೆಗಳಿಂದ ವಸತಿ ರಹಿತ ತರಬೇತಿ ಕೇಂದ್ರ ಆರಂಭಕ್ಕೆ ಅರ್ಜಿ ಆಹ್ವಾನ


ಈ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್


ರಾಜ್ಯದಲ್ಲಿ ಕಳೆದ ಕೆಲ ದಿನಗಳಿಂದ ನಿರಂತರವಾಗಿ ಮಳೆ(Rainfall)ಯಾಗುತ್ತಿದ್ದು, ಮುಂದುವರಿಯುವ ನಿರೀಕ್ಷೆ ಇದೆ. ಮಳೆಯ ಹೊಡೆತಕ್ಕೆ ರಾಜ್ಯದ ನದಿಗಳ ನೀರಿನ ಪ್ರಮಾಣ ಹೆಚ್ಚುತ್ತಿದೆ. ಬಹುತೇಕ ಡ್ಯಾಂಗಳು ಭರ್ತಿಯಾಗಿದ್ದು, ನದಿಗಳಿಗೆ ನೀರು ಬಿಡಲಾಗುತ್ತಿದೆ. ರಾಜ್ಯದ ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗ, ತುಮಕೂರು, ಮಂಗಳೂರಲ್ಲಿ ಭಾರೀ ಮಳೆ ಸಾಧ್ಯತೆ ಇದ್ದು, ಈ ಎಲ್ಲಾ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ