ಎಡೆ ಬಿಡದೇ ಆರ್ಭಟಿಸಲಿದ್ದಾನೆ ವರುಣ ! ಇಂದಿನಿಂದ ನಾಲ್ಕು ದಿನಗಳ ಕಾಲ ರೆಡ್ ಅಲರ್ಟ್

ಇಂದಿನಿಂದ ಮುಂದಿನ ನಾಲ್ಕು ದಿನಗಳವರೆಗೆ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ರಾಜ್ಯ ಹವಾಮಾನ ಇಲಾಖೆ ನೀಡಿದೆ.  ಈ ಹಿನ್ನಲೆಯಲ್ಲಿ ರಾಜ್ಯದ ಕೆಲವು ಭಾಗಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. 

Written by - Ranjitha R K | Last Updated : Jul 6, 2023, 10:26 AM IST
  • ರಾಜ್ಯದಲ್ಲಿ ವರುಣನ ಆರ್ಭಟ ಮುಂದುವರೆದಿದೆ.
  • ನಾಲ್ಕು ದಿನಗಳ ಕಾಲ ಭಾರೀ ಮಳೆಯಾಗುವ ಮುನ್ಸೂಚನೆ
  • ರಾಜ್ಯದಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.
ಎಡೆ ಬಿಡದೇ ಆರ್ಭಟಿಸಲಿದ್ದಾನೆ ವರುಣ ! ಇಂದಿನಿಂದ ನಾಲ್ಕು ದಿನಗಳ ಕಾಲ  ರೆಡ್ ಅಲರ್ಟ್  title=

ಬೆಂಗಳೂರು :  ರಾಜ್ಯದಲ್ಲಿ ವರುಣನ ಆರ್ಭಟ ಮುಂದುವರೆದಿದೆ. ಇನ್ನೂ  ನಾಲ್ಕು ದಿನಗಳ ಕಾಲ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ರಾಜ್ಯ ಹವಾಮಾನ ಇಲಾಖೆ ನೀಡಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಅಲರ್ಟ್ ಘೋಷಿಸಲಾಗಿದೆ. ಅದರಲ್ಲೂ ಕರಾವಳಿ ಜಿಲ್ಲೆಗಳಿಗೆ ಇಂದಿನಿಂದ ನಾಲ್ಕು ದಿನಗಳ ಕಾಲ  ರೆಡ್ ಅಲರ್ಟ್ ನೀಡಲಾಗಿದೆ. 

ರಾಜ್ಯದ ಕರಾವಳಿ ಜಿಲ್ಲೆಗಳಾದ ಉಡುಪಿ ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಎಡೆ ಬಿಡದೆ ಮಳೆ ಸುರಿಯುತ್ತಿದೆ. ಈ ಮಧ್ಯೆ, ಮುಂದಿನ ನಾಲ್ಕು ದಿನಗಳವರೆಗೆ ಮತ್ತೆ ಈ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಮೂರು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ನೀಡಲಾಗಿದೆ. 

ಇದನ್ನೂ ಓದಿ : ಗ್ರಾಹಕನಿಗೆ ಸೇವಾ ನ್ಯೂನ್ಯತೆ ಎಸಗಿದ ಮಾರುತಿ ಸುಜುಕಿಗೆ ದಂಡ

ಇನ್ನು ದಕ್ಷಿಣ ಒಳನಾಡಿನ ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಸೇರಿದಂತೆ ಹಲವೆಡೆ ಭಾರೀ ಮಳೆಯಾಗಿದ್ದು ಆರೆಂಜ್ ಅಲರ್ಟ್ ನೀಡಲಾಗಿದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ ಗದಗ್ ಜಿಲ್ಲೆಗಳಿಗೆ ಯಲ್ಲೋ ಅಲರ್ಟ್  ಘೋಷಿಸಲಾಗಿದೆ. 

ಈ ಮಧ್ಯೆ,  ಬೆಂಗಳೂರಿನಲ್ಲಿ ಇಂದು ಮತ್ತು ನಾಳೆ ಮೋಡ ಕವಿದ ವಾತಾವರಣ ಇರಲಿದೆ. ಇಂದು ಮತ್ತು ನಾಳೆ ಗುಡುಗು ಮಿಂಚಿನ ಸಮೇತ ಮಳೆಯಾಗುವ ಸಾಧ್ಯತೆ ಇದೆ ಎಂದು ಕೂಡಾ ಮುನ್ನೆಚ್ಚರಿಕೆ ನೀಡಲಾಗಿದೆ.  

ಇದನ್ನೂ ಓದಿ : BBMP NEWS: ಕಾರ್ಪೋಪೇಟರ್‌ಗಳೇ ಇಲ್ಲದ ಬಿಬಿಎಂಪಿ ಗೋಳು ಕೇಳುವವರು ಯಾರು?

ಇನ್ನು ಮುಂದಿನ ನಾಲ್ಕು ದಿನಗಳವರೆಗೆ ಗಾಳಿಯ ಪ್ರಮಾಣ ಹೆಚ್ಚಾಗಿ ಇರಲಿದ್ದು,  ತಗ್ಗುಪ್ರದೇಶದ ಜನರು ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ. 

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News