ಎಡೆ ಬಿಡದೇ ಆರ್ಭಟಿಸಲಿದ್ದಾನೆ ವರುಣ ! ಇಂದಿನಿಂದ ನಾಲ್ಕು ದಿನಗಳ ಕಾಲ ರೆಡ್ ಅಲರ್ಟ್
ಇಂದಿನಿಂದ ಮುಂದಿನ ನಾಲ್ಕು ದಿನಗಳವರೆಗೆ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ರಾಜ್ಯ ಹವಾಮಾನ ಇಲಾಖೆ ನೀಡಿದೆ. ಈ ಹಿನ್ನಲೆಯಲ್ಲಿ ರಾಜ್ಯದ ಕೆಲವು ಭಾಗಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.
ಬೆಂಗಳೂರು : ರಾಜ್ಯದಲ್ಲಿ ವರುಣನ ಆರ್ಭಟ ಮುಂದುವರೆದಿದೆ. ಇನ್ನೂ ನಾಲ್ಕು ದಿನಗಳ ಕಾಲ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ರಾಜ್ಯ ಹವಾಮಾನ ಇಲಾಖೆ ನೀಡಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಅಲರ್ಟ್ ಘೋಷಿಸಲಾಗಿದೆ. ಅದರಲ್ಲೂ ಕರಾವಳಿ ಜಿಲ್ಲೆಗಳಿಗೆ ಇಂದಿನಿಂದ ನಾಲ್ಕು ದಿನಗಳ ಕಾಲ ರೆಡ್ ಅಲರ್ಟ್ ನೀಡಲಾಗಿದೆ.
ರಾಜ್ಯದ ಕರಾವಳಿ ಜಿಲ್ಲೆಗಳಾದ ಉಡುಪಿ ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಎಡೆ ಬಿಡದೆ ಮಳೆ ಸುರಿಯುತ್ತಿದೆ. ಈ ಮಧ್ಯೆ, ಮುಂದಿನ ನಾಲ್ಕು ದಿನಗಳವರೆಗೆ ಮತ್ತೆ ಈ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಮೂರು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ನೀಡಲಾಗಿದೆ.
ಇದನ್ನೂ ಓದಿ : ಗ್ರಾಹಕನಿಗೆ ಸೇವಾ ನ್ಯೂನ್ಯತೆ ಎಸಗಿದ ಮಾರುತಿ ಸುಜುಕಿಗೆ ದಂಡ
ಇನ್ನು ದಕ್ಷಿಣ ಒಳನಾಡಿನ ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಸೇರಿದಂತೆ ಹಲವೆಡೆ ಭಾರೀ ಮಳೆಯಾಗಿದ್ದು ಆರೆಂಜ್ ಅಲರ್ಟ್ ನೀಡಲಾಗಿದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ ಗದಗ್ ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಘೋಷಿಸಲಾಗಿದೆ.
ಈ ಮಧ್ಯೆ, ಬೆಂಗಳೂರಿನಲ್ಲಿ ಇಂದು ಮತ್ತು ನಾಳೆ ಮೋಡ ಕವಿದ ವಾತಾವರಣ ಇರಲಿದೆ. ಇಂದು ಮತ್ತು ನಾಳೆ ಗುಡುಗು ಮಿಂಚಿನ ಸಮೇತ ಮಳೆಯಾಗುವ ಸಾಧ್ಯತೆ ಇದೆ ಎಂದು ಕೂಡಾ ಮುನ್ನೆಚ್ಚರಿಕೆ ನೀಡಲಾಗಿದೆ.
ಇದನ್ನೂ ಓದಿ : BBMP NEWS: ಕಾರ್ಪೋಪೇಟರ್‌ಗಳೇ ಇಲ್ಲದ ಬಿಬಿಎಂಪಿ ಗೋಳು ಕೇಳುವವರು ಯಾರು?
ಇನ್ನು ಮುಂದಿನ ನಾಲ್ಕು ದಿನಗಳವರೆಗೆ ಗಾಳಿಯ ಪ್ರಮಾಣ ಹೆಚ್ಚಾಗಿ ಇರಲಿದ್ದು, ತಗ್ಗುಪ್ರದೇಶದ ಜನರು ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ