ಬೆಂಗಳೂರು : ಪ್ರವಾಹ ಇಳಿಮುಖದಿಂದ ಕೊಂಚ ನೆಮ್ಮದಿಯಲ್ಲಿದ್ದ ಜನರಿಗೆ ಮತ್ತೆ ಆತಂಕ ಎದುರಾಗಿದೆ.ಕಾವೇರಿ ಜಲಾನಯನ ಪ್ರದೇಶದಲ್ಲಿ  ಮಳೆಯ ಆರ್ಭಟ ಮುಂದುವರೆದಿದೆ. ಹೀಗಾಗಿ KRS ಜಲಾಶಯಕ್ಕೆ ಒಳಹರಿವು ಮತ್ತಷ್ಟು ಹೆಚ್ಚಾಗಿದೆ. ಇದೀಗ ಕಾವೇರಿ ನದಿಯಲ್ಲಿ ಮತ್ತೆ  ಪ್ರವಾಹ ಆತಂಕ ಎದುರಾಗಿದೆ. 


COMMERCIAL BREAK
SCROLL TO CONTINUE READING

ಡ್ಯಾಂ ನಿಂದ ನದಿಗೆ 30 ರಿಂದ 50 ಸಾವಿರ ಕ್ಯೂಸೆಕ್ ನೀರು ಬಿಡುಗಡೆ  ಮಾಡಬೇಕಾಗಿದೆ. ಈ ಹಿನ್ನೆಲೆಯಲ್ಲಿ ಕಾವೇರಿ ನೀರಾವರಿ ನಿಗಮದಿಂದ ಪ್ರವಾಹ ಎಚ್ಚರಿಕೆ ಬಗ್ಗೆ ತುರ್ತು ಸಂದೇಶ ರವಾನಿಸಲಾಗಿದೆ. ನದಿ ಪಾತ್ರದ ಜನರು ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ. 


ಇದನ್ನೂ ಓದಿ : ಅಸಮಾನತೆ ಹೋಗಲಾಡಿಸದೆ ಶೋಷಿತ ಸಮುದಾಯಗಳ ಏಳಿಗೆ ಸಾಧ್ಯವಿಲ್ಲ: ಸಿ.ಎಂ.ಸಿದ್ದರಾಮಯ್ಯ 


ಮತ್ತೊಂದೆಡೆ, ಲಿಂಗನಮಕ್ಕಿ ಡ್ಯಾಂ 1801 ಅಡಿ ಗಡಿದಾಟಿದೆ. ಈ ಹಿನ್ನೆಲೆಯಲ್ಲಿ ಕೆಪಿಸಿ ನದಿಪಾತ್ರದ ಜನರಿಗೆ ಎಚ್ಚರಿಕೆ ಸಂದೇಶ ರವಾನಿಸಿದೆ. ಶರಾವತಿ ಯೋಜನೆಯ ಲಿಂಗನಮಕ್ಕಿ ಜಲಾನಯನ ಪ್ರದೇಶದಲ್ಲಿ ಸತತವಾಗಿ ಮಳೆ ಬೀಳುತ್ತಿರುವ ಹಿನ್ನಲೆ ಲಿಂಗನಮಕ್ಕಿ ಜಲಾಶಯಕ್ಕೆ ಭಾರಿ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ಇದರಿಂದಾಗಿ ಲಿಂಗನಮಕ್ಕಿ ಜಲಾಶಯದ ನೀರಿನ ಮಟ್ಟವು ದಿನೇದಿನೇ ಏರುತ್ತಿದೆ. ಜಲಾಶಯದ ಗರಿಷ್ಠ ಮಟ್ಟವು 1819.00 ಅಡಿಗಳಾಗಿದ್ದು ಇಂದು ಬೆಳಗ್ಗೆ ವೇಳೆಗೆ  ಜಲಾಶಯದ ನೀರಿನ ಮಟ್ಟ 1801.20 (65.30%) ಅಡಿಗಳಗೆ ತಲುಪಿದೆ.ಲಿಂಗನಮಕ್ಕಿ ಜಲಾಶಯದ ಒಳ ಹರಿವು ಸುಮಾರು 60,000.00 ಕ್ಯೂಸೆಕ್ಸ್ ಗಳಿಗಿಂತಲೂ ಅಧಿಕವಾಗಿದೆ.ಇದೇ ರೀತಿಯಲ್ಲಿ ಜಲಾಶಯಕ್ಕೆ ಬರುವ ನೀರಿನ ಹರಿವು ಮುಂದುವರೆದಲ್ಲಿ ಜಿಲಾಶಯವು ಶೀಘ್ರದಲ್ಲಿ ಗರಿಷ್ಠ ಮಟ್ಟವನ್ನು ತಲುಪುವ ಸಾಧ್ಯತೆ ಇದೆ. 


ಆದ್ದರಿಂದ,ಲಿಂಗನಮಕ್ಕಿ ಅಣೆಕಟ್ಟೆಯ ಸುರಕ್ಷತೆ ದೃಷ್ಟಿಯಿಂದ ಹೆಚ್ಚುವರಿ ನೀರನ್ನು ಜಲಾಶಯದಿಂದ ಯಾವುದೇ ಸಮಯದಲ್ಲಿ ಹೊರಬಿಡಲಾಗುವುದು ಎಂದು ತಿಳಿಸಲಾಗಿದೆ. ಆದ್ದರಿಂದ, ಅಣೆಕಟ್ಟೆಯ ಕೆಳದಂಡೆಯಲ್ಲಿ ಹಾಗೂ ನದಿಯ ಪಾತ್ರದುದ್ದಕ್ಕೂ ವಾಸಿಸುತ್ತಿರುವ ಸಾರ್ವಜನಿಕರು ತಮ್ಮ ಜಾನುವಾರುಗಳೊಂದಿಗೆ ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಗೊಳ್ಳುವಂತೆ ತಿಳಿಸಲಾಗಿದೆ.


ಇದನ್ನೂ ಓದಿ :ಬಿಜೆಪಿ ತಮ್ಮ ಅವಧಿಯ ಹಗರಣಗಳನ್ನು ಮುಚ್ಚಿ ಹಾಕಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.