ರಾಜ್ಯದಲ್ಲಿ‌ ಮುಂದಿನ 5 ದಿನ ಕುಂಭದ್ರೋಣ ಮಳೆ : ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಸೂಚನೆ

Heavy Rain Alert : ಇಂದಿನಿಂದ ಜುಲೈ 12ರವೆರೆಗೆ ಕರಾವಳಿಯಲ್ಲಿ ಭಾರೀ ಮಳೆಯಾಗಲಿದೆ. ಭಾರೀ ಮಳೆ‌‌ ಮುನ್ಸೂಚನೆ ಕಾರಣ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.

Written by - Ranjitha R K | Last Updated : Jul 8, 2024, 03:42 PM IST
  • ರಾಜ್ಯದಲ್ಲಿ ವರುಣನ ಅಬ್ಬರ ಜೋರಾಗಿದೆ.
  • ಐದು ದಿನಗಳ ಕಾಲ ರಾಜ್ಯದಲ್ಲಿ ಎಡೆ ಬಿಡದೆ ಮಳೆ
  • ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲೂ ಭಾರೀ ಮಳೆ ಸಾಧ್ಯತೆ
ರಾಜ್ಯದಲ್ಲಿ‌ ಮುಂದಿನ 5 ದಿನ ಕುಂಭದ್ರೋಣ ಮಳೆ : ಸಮುದ್ರಕ್ಕೆ ಇಳಿಯದಂತೆ  ಮೀನುಗಾರರಿಗೆ ಸೂಚನೆ

ಬೆಂಗಳೂರು : ರಾಜ್ಯದಲ್ಲಿ ವರುಣನ ಅಬ್ಬರ ಜೋರಾಗಿದೆ. ಇನ್ನೂ ಐದು ದಿನಗಳ ಕಾಲ ರಾಜ್ಯದಲ್ಲಿ ಎಡೆ ಬಿಡದೆ  ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದಿನಿಂದ ಜುಲೈ 12ರವೆರೆಗೆ ಕರಾವಳಿಯಲ್ಲಿ ಭಾರೀ ಮಳೆಯಾಗಲಿದೆ ಎಂದು ಹೇಳಿದೆ. 

Add Zee News as a Preferred Source

ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲೂ ಭಾರೀ ಮಳೆ ಸಾಧ್ಯತೆ :
ಜುಲೈ ೧೨ ರವರೆಗೆ ಅಂದರೆ ಮುಂದಿನ ಐದು ದಿನಗಳ ಕಾಲ ಕರಾವಳಿ ಜಿಲೆಗಳಲ್ಲಿ ನಿರಂತರ ಮಳೆಯಾಗಲಿದೆ. ಇಂದು ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ಭಾರೀ, ಅತೀ ಭಾರೀ ಮಳೆ ಎಚ್ಚರಿಕೆ ನೀಡಲಾಗಿದೆ. ಹೀಗಾಗಿ ಇಂದು ಮೂರು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಜುಲೈ ಹತ್ತಕ್ಕೆ ಮೂರೂ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. 

ಇದನ್ನೂ ಓದಿ : ಡಿಸಿಗಳು ಎಂದರೆ ಮಹಾರಾಜರಲ್ಲ- ಈ ಮನೋಭಾವ ಇದ್ದರೆ ಜನಸೇವೆ ಸಾಧ್ಯವಿಲ್ಲ: ಸಿಎಂ ಸಿದ್ದರಾಮಯ್ಯ

ಭಾರೀ ಮಳೆ‌‌ ಮುನ್ಸೂಚನೆ ಕಾರಣ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ನದಿ ತೀರದ ನಿವಾಸಿಗಳು ಕೂಡಾ ಎಚ್ಚರಿಕೆಯಿಂದ ಇರುವಂತೆ ಹೇಳಲಾಗಿದೆ. 

ಬೆಂಗಳೂರಿಗಿಲ್ಲ ಮೂರು ದಿನಗಳ ಕಾಲ‌ ಮಳೆ :
ಈ ನಡುವೆ ಬೆಂಗಳೂರಿನಲ್ಲಿ‌ ಮೋಡ ಮುಸುಕಿದ ವಾತಾವರಣ ಮುಂದುವರೆದಿದೆ. ಅಲ್ಲಲ್ಲಿ ಅಲ್ಪ ಪ್ರಮಾಣದಲ್ಲಿ ಮಳೆ‌ಬೀಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿಎಸ್ ಪಾಟೀಲ್ ತಿಳಿಸಿದ್ದಾರೆ. 

ಇದನ್ನೂ ಓದಿ : ರಾಹುಲ್ ಗಾಂಧಿ ಹೇಳಿಕೆಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ತಿರುಗೇಟು

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...

Android Link - https://bit.ly/3AClgDd

Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

 

 

About the Author

Ranjitha R K

ರಂಜಿತಾ ಆರ್.ಕೆ ಪ್ರಸ್ತುತ `ಜೀ ಕನ್ನಡ ನ್ಯೂಸ್‌' ವೆಬ್‌ನಲ್ಲಿ ಚೀಫ್ ಸಬ್ ಎಡಿಟರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮ ಕ್ಷೇತ್ರದಲ್ಲಿ 19 ವರ್ಷಕ್ಕೂ ಹೆಚ್ಚಿನ ಅನುಭವ ಹೊಂದಿರುವ ಇವರು 2020 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ರಾಜಕೀಯ, ಬ್ಯುಸಿನೆಸ್, ಟೆಕ್ನಾಲಜಿ, ಹೆಲ್ತ್ ಅಂಡ್ ಲೈಫ್ ಸ್ಟೈಲ್, ಸ್ಪಿರಿಚ್ಯುವಲ್ ವಿಭಾಗಗಲ್ಲಿ ಆಸಕ್ತಿಕರ ಲೇಖನಗಳನ್ನು ಒದಗಿಸುವ ಅನುಭವವನ್ನು ಹೊಂದಿರುತ್ತಾರೆ. 2006ರಲ್ಲಿ ʼರಾಮೋಜಿ ಗ್ರೂಪ್‌ʼನ ಈಟಿವಿ  ಕನ್ನಡ ವಾಹಿನಿಯಿಂದ ಪತ್ರಿಕೋದ್ಯಮ ವೃತ್ತಿಜೀವನ ಆರಂಭಿಸಿದ ಇವರು, ನಂತರ ಜನಶ್ರೀ, ಸಮಯ, ಸುವರ್ಣ ವಾಹಿನಿಗಳಲ್ಲಿಯೂ ಕಾರ್ಯ ನಿರ್ವಹಿಸಿದ್ದಾರೆ. ...Read More

Trending News