ಬೆಂಗಳೂರು : ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮತ್ತೆ ಏಳು ದಿನ ಮಳೆ‌ ಕಂಟಕ ಮುಂದುವರೆಯಲಿದೆ. ಮುಂದಿನ ಏಳು ದಿನಗಳವರೆಗೆ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. 


COMMERCIAL BREAK
SCROLL TO CONTINUE READING

ರಾಜ್ಯಾದ್ಯಂತ ಇಂದಿನಿಂದ ಒಟ್ಟು ಏಳು ದಿನಗಳ ಕಾಲ ಭಾರೀ ಮಳೆಯಾಗುವ  ಸಾಧ್ಯತೆ ಇದೆ. ಬೆಂಗಳೂರಿನಲ್ಲಿಯೂ ಇಂದು ಸಂಜೆ ಬಳಿಕ ಭಾರೀ ಮಳೆಯಾಗಲಿದೆ.  ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ವರುಣ ಅಬ್ಬರಿಸಲಿದ್ದಾನೆ.


ಇದನ್ನೂ ಓದಿ : ತಮಿಳುನಾಡು ಭಾಗದಲ್ಲಿ ಮಳೆಯ ಆರ್ಭಟ


ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಮಂಡ್ಯ, ತುಮಕೂರು, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಶಿವಮೊಗ್ಗ ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. 


ದಕ್ಷಿಣ ಒಳನಾಡಿನ ಕರ್ನಾಟಕದ ಉಳಿದ ಜಿಲ್ಲೆಗಳಲ್ಲಿ, ಉತ್ತರ ಒಳನಾಡಿನ ಉಳಿದ ಜಿಲ್ಲೆಗಳಲ್ಲಿಯೂ ಗುಡುಗು ಸಹಿತ ಮಳೆಯಾಗುವ ಸಂಭವ ಇದೆ. ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾಧಾರಣ ಮಳೆ ಸಾಧ್ಯತೆ ಇದೆ. 


ಇದನ್ನೂ ಓದಿ : 70 ಕಣಗಳಲ್ಲಿ ಗೆದ್ದು ಬೀಗಿದ್ದ 3 ವರ್ಷದ ಟಗರು 5 ಲಕ್ಷ ರೂಪಾಯಿಗೆ ಸೇಲ್ !ಇದು ದಾಖಲೆಯ ಮೊತ್ತ


ನಾಳೆ ಉಡುಪಿ, ಮೈಸೂರು, ಮಂಡ್ಯ, ಚಾಮರಾಜನಗರ ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳಲ್ಲಿ ಪ್ರತ್ಯೇಕವಾದ ಭಾರೀ ಮಳೆ ಸಾಧ್ಯತೆಯಿದೆ. 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.