ರಾಜ್ಯದ ಹಲವು ಭಾಗದಲ್ಲಿ ವರುಣಾರ್ಭಟ : ಜುಲೈ 8 ರವರೆಗೆ ಅಲರ್ಟ್, ಹವಾಮಾನ ಇಲಾಖೆ ಎಚ್ಚರಿಕೆ
ರಾಜ್ಯದ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ವರುಣ ಆರ್ಭಟಿಸುತ್ತಿದ್ದಾನೆ. ಬಹುತೇಕ ಕಡೆಗಳಲ್ಲಿ ಆವಾಂತರಗಳೆ ಸೃಷ್ಟಿಯಾಗಿವೆ. ಇದೀಗ ರಾಜ್ಯದ ಕರಾವಳಿ ಜಿಲ್ಲೆಗಳಿಗೆ ಮುಂದಿನ ನಾಲ್ಕು ದಿನಗಳವರೆಗೆ ಅಲರ್ಟ್ ಘೋಷಿಸಲಾಗಿದೆ.
ಬೆಂಗಳೂರು : ರಾಜ್ಯದ ಹಲವು ಭಾಗದಲ್ಲಿ ಅಬ್ಬರಿಸಲಿರುವ ವರುಣ ಅರ್ಭಟ ಮುಂದುವರೆದಿದೆ. ಕರಾವಳಿ ಭಾಗದಲ್ಲಿ ಇಂದಿನಿಂದ 4 ದಿನ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ದಕ್ಷಿಣ ಕನ್ನಡ,ಉ.ಕನ್ನಡ.ಉಡುಪಿ ಜಿಲ್ಲೆಗಳಿಗೆ ಅಲರ್ಟ್ ನೀಡಲಾಗಿದೆ. ಜುಲೈ 8 ರವರೆಗೆ ಆರೆಂಜ್ ಅಲರ್ಟ್ ನೀಡಲಾಗಿದ್ದು, ಜುಲೈ9 ರಂದ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ರಾಜ್ಯದ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ವರುಣ ಆರ್ಭಟಿಸುತ್ತಿದ್ದಾನೆ. ಬಹುತೇಕ ಕಡೆಗಳಲ್ಲಿ ಆವಾಂತರಗಳೆ ಸೃಷ್ಟಿಯಾಗಿವೆ. ಇದೀಗ ರಾಜ್ಯದ ಕರಾವಳಿ ಜಿಲ್ಲೆಗಳಿಗೆ ಮುಂದಿನ ನಾಲ್ಕು ದಿನಗಳವರೆಗೆ ಅಲರ್ಟ್ ಘೋಷಿಸಲಾಗಿದೆ.ಜುಲೈ ೮ ರವರೆಗೆ ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಜಾರಿ ಮಾಡಿ ರಾಜ್ಯ ಹವಾಮಾನ ಇಲಾಖೆಯಿಂದ ಎಚ್ಚರಿಕೆ ನೀಡಿದೆ.
ಇದನ್ನೂ ಓದಿ : ಕಾಂಗ್ರೆಸ್ ಸಚಿವರು ಮತ್ತು ಶಾಸಕರ ತೀವ್ರ ಅಸಮಾಧಾನ
ಉತ್ತರ ಒಳನಾಡಿನ ಹಲವು ಜಿಲ್ಲೆಗಳಿಗೆ ಮಳೆ ಅಲರ್ಟ್ ನೀಡಲಾಗಿದೆ. ಇಂದು ಬೆಳಗಾವಿ,ಧಾರವಾಡ,ಕೊಡಗು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದ್ದರೆ, ಮಲೆನಾಡು ಶಿವಮೊಗ್ಗ ಶಿವಮೊಗ್ಗದಲ್ಲಿ ಆರೆಂಜ್ ಅಲರ್ಟ್ ನೀಡಲಾಗಿದೆ. ಈ ಭಾಗದಲ್ಲಿ ಮುಂದಿನ 3 ದಿನ ಆರೆಂಜ್ ಅಲರ್ಟ್,ಮತ್ತೆ 2 ದಿನ ಯೆಲ್ಲೋ ಅಲರ್ಟ್ ನೀದಯಾಲಾಗಿದೆ. ಕೊಡಗು ಜಿಲ್ಲೆಗೆ ಇಂದಿನಿಂದ ಮೂರುದಿನ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಬೆಂಗಳೂರಿನಲ್ಲಿ ಮುಂದುವರೆದ ಮೋಡ ಕವಿದ ವಾತಾವರಣವಿರಲಿದೆ. ನಗರದ ಕೆಲ ಭಾಗದಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ನೀಡಲಾಗಿದೆ.
ಇದನ್ನೂ ಓದಿ : ಸಿಎಂ, ಡಿಸಿಎಂ ಬಗ್ಗೆ ಹೇಳಿಕೆ ನೀಡಿದವರಿಗೆ ನೋಟಿಸ್..?
ಈ ನಡುವೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆ ಅಬ್ಬರದ ಹಿನ್ನೆಲೆಯಲ್ಲಿ ಬೆಂಗಳೂರಿನಿಂದ NDRF ತಂಡ ರವಾನೆ ಮಾಡಲಾಗಿದೆ.ಕಾರವಾರ, ಕುಮಟಾ,ಅಂಕೋಲಾ ಭಾಗಕ್ಕೆ 25ಜನರಿರುವ ಎರಡು NDRF ತಂಡ ರವಾನೆ ಮಾಡಲಾಗಿದೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.