ಬೆಂಗಳೂರು : ಕಳೆದ 24 ಗಂಟೆಗಳಲ್ಲಿ ರಾಜ್ಯದ ವಿವಿಧ ಭಾಗಗಳಲ್ಲಿ ಭಾರೀ ಮಳೆಯಿಂದಾಗಿ ಮೂರು ಜನ ಸಾವನ್ನಪ್ಪಿದ್ದಾರೆ, ಎಂಟು ಸ್ಥಳಗಳಲ್ಲಿ ಭೂಕುಸಿತ ಸಂಭವಿಸಿದೆ ಮತ್ತು ಸುಮಾರು 9,000 ಜನರನ್ನು ಸ್ಥಳಾಂತರಿಸಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಮುಂದಿನ 24 ಗಂಟೆಗಳ ಕಾಲ ರಾಜ್ಯದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಲೂರು, ಹಾಸನ ಮತ್ತು ಕೊಡಗು ಈ ಏಳು ಜಿಲ್ಲೆಗಳಲ್ಲಿ 'ರೆಡ್ ಅಲರ್ಟ್'(Red Alert) ಘೋಷಣೆ ಮಾಡಲಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಇದನ್ನೂ ಓದಿ : ವಲಸಿಗ ಸಚಿವರು ವಾಪಸ್ ಬಂದರೂ ಪಕ್ಷಕ್ಕೆ ಸೇರಿಸಿಕೊಳ್ಳುವುದಿಲ್ಲ: ಸಿದ್ದರಾಮಯ್ಯ
ಸೋನಾಲಿಯಂ-ಕುಲೆಮ್ ಮತ್ತು ದುಧ್‌ಸಾಗರ್-ಕಾರಂಜೋಲ್ ನಡುವಿನ ಭೂಕುಸಿತ(Landslides)ದಿಂದಾಗಿ ಭಾರತೀಯ ರೈಲ್ವೆ ಕೆಲವು ರೈಲುಗಳನ್ನು ರದ್ದುಗೊಳಿಸಿದೆ.
ರಾಜ್ಯದ ನದಿಗಳಾದ ಕೃಷ್ಣಾ, ಕಾವೇರಿ, ತುಂಗಭದ್ರಾ, ಭೀಮಾ, ಕಪಿಲಾ (ಕಬಿನಿ) ಮತ್ತು ಮಲೆನಾಡು ಮತ್ತು ಕರಾವಳಿ ಭಾಗದ ಅನೇಕ ನದಿಗಳು(Rivers) ತುಂಬಿ ಹರಿಯುತ್ತಿವೆ. 18 ತಾಲ್ಲೂಕುಗಳಲ್ಲಿ 131 ಗ್ರಾಮಗಳು ತೀವ್ರವಾಗಿ ಹಾನಿಗೊಳಗಾಗಿದ್ದು, 16,213 ಜನರನ್ನ ಸ್ಥಳಾಂತರಿಸಲಾಗಿದೆ.
ರಾಜ್ಯದ ಅನೇಕ ಭಾಗಗಳಲ್ಲಿ ಸುರಿಯುತ್ತಿರುವ ಭಾರಿ ಮಳೆಯ ಹಿನ್ನಲೆಯಲ್ಲಿ, ಜಿಲ್ಲಾ ಉಸ್ತುವಾರಿ ಸಚಿವರುಗಳು ಮತ್ತು ಶಾಸಕರು ತಮ್ಮ ತಮ್ಮ ಜಿಲ್ಲೆ ಹಾಗೂ ಕ್ಷೇತ್ರಗಳಲ್ಲಿ ಉಪಸ್ಥಿತರಿದ್ದು ಜನರಿಗೆ ನೆರವಾಗಬೇಕು, ರಕ್ಷಣೆ ಮತ್ತು ಪರಿಹಾರ ಕಾರ್ಯಗಳ ಮೇಲ್ವಿಚಾರಣೆ ನಡೆಸಬೇಕು ಎಂದು ಸೂಚಿಸುತ್ತೇನೆ. (1/2)
— B.S. Yediyurappa (@BSYBJP) July 23, 2021
ರಾಜ್ಯದ ಮುಖ್ಯಮಂತ್ರಿ ಬಿಎಸ್ ಯಡಿಯುರಪ್ಪ(BS Yediyurappa) ಅವರು ರಾಜ್ಯದ ಮಳೆ ಸಂಬಂಧಿತ ಪರಿಸ್ಥಿತಿಯನ್ನು ಕುರಿತು ಜಿಲ್ಲಾ ಆಯುಕ್ತರೊಂದಿಗೆ ಮಾತುಕತೆ ನಡೆಸಿ ಪರಿಶೀಲಿಸಿದ್ದಾರೆ ಎಂದು ಹೇಳಿದ್ದಾರೆ. ಈ ಕುರಿತು ತಮ ಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಬರೆದುಕೊಂಡಿರುವ ಸಿಎಂ, ರಾಜ್ಯದ ಅನೇಕ ಭಾಗಗಳಲ್ಲಿ ಸುರಿಯುತ್ತಿರುವ ಭಾರಿ ಮಳೆಯ ಹಿನ್ನಲೆಯಲ್ಲಿ, ಜಿಲ್ಲಾ ಉಸ್ತುವಾರಿ ಸಚಿವರುಗಳು ಮತ್ತು ಶಾಸಕರು ತಮ್ಮ ತಮ್ಮ ಜಿಲ್ಲೆ ಹಾಗೂ ಕ್ಷೇತ್ರಗಳಲ್ಲಿ ಉಪಸ್ಥಿತರಿದ್ದು ಜನರಿಗೆ ನೆರವಾಗಬೇಕು, ರಕ್ಷಣೆ ಮತ್ತು ಪರಿಹಾರ ಕಾರ್ಯಗಳ ಮೇಲ್ವಿಚಾರಣೆ ನಡೆಸಬೇಕು ಎಂದು ಸೂಚಿಸುತ್ತೇನೆ.
ಇದನ್ನೂ ಓದಿ : ಸಿಎಂ ಹುದ್ದೆಗೆ ರಾಜೀನಾಮೆ ಬಿಗ್ ಟ್ವಿಸ್ಟ್ ನೀಡಿದ ಸಿಎಂ ಯಡಿಯುರಪ್ಪ
ಸತತ ಮಳೆ(Heavy Rain)ಯಿಂದ ಪ್ರವಾಹ ಪರಿಸ್ಥಿತಿ ಉಂಟಾಗುತ್ತಿರುವ ಹಿನ್ನಲೆಯಲ್ಲಿ ಬೆಳಗಾವಿ ಜಿಲ್ಲಾಧಿಕಾರಿ ಸೇರಿದಂತೆ ಹಲವು ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ಈಗಾಗಲೇ ಮಾತನಾಡಿ, ನದಿ ಪಾತ್ರದ ಹಳ್ಳಿಗಳಲ್ಲಿ ಹೆಚ್ಚಿನ ನಿಗಾ ವಹಿಸುವಂತೆ ಹಾಗೂ ಜನ ಜಾನುವಾರುಗಳ ಸುರಕ್ಷತೆಗೆ ಅಗತ್ಯ ಕ್ರಮ ವಹಿಸುವಂತೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಜಿಲ್ಲಾಡಳಿತಗಳು ಕೈಗೊಳ್ಳುತ್ತಿರುವ ರಕ್ಷಣಾ ಮತ್ತು ಪರಿಹಾರ ಕಾರ್ಯಗಳ ಮೇಲ್ವಿಚಾರಣೆಗೆ ಎಲ್ಲಾ ಜಿಲ್ಲಾ ಉಸ್ತುವಾರಿ ಸಚಿವರು(District in-charge Ministers) ಮತ್ತು ಶಾಸಕರು ಆಯಾ ಜಿಲ್ಲೆಗಳು ಮತ್ತು ಕ್ಷೇತ್ರಗಳಿಗೆ ಭೇಟಿ ನೀಡಲು ಕೋರಲಾಗಿದೆ ಎಂದು ಸಿಎಂ ತಿಳಿಸಿದ್ದಾರೆ.
#Aidtocivilauthorities #ICG #DisasterResponseTeams #Karnataka deployed in heavy rain induced waterlogged areas of #UttaraKannada with Gemini boats, life jackets, lifebuoys & first aid for rescue & relief of stranded populace. 155 personnel rescued so far #Harkaamdeshkenaam pic.twitter.com/i7VoNBp6Ay
— Indian Coast Guard (@IndiaCoastGuard) July 23, 2021
ರಾಜ್ಯದಲ್ಲಿ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಸಂಕಷ್ಟದಲ್ಲಿರುವ ಜನರನ್ನು ರಕ್ಷಿಸಲು ಭಾರತೀಯ ಕೋಸ್ಟ್ ಗಾರ್ಡ್ (ICG) ಕರಾವಳಿ ಜಿಲ್ಲೆಗಳಾದ ಮಹಾರಾಷ್ಟ್ರ, ಗೋವಾ ಮತ್ತು ಕರ್ನಾಟಕಗಳಲ್ಲಿ ಏಳು ವಿಪತ್ತು ಪರಿಹಾರ ತಂಡಗಳನ್ನು (ಡಿಆರ್‌ಟಿ) ನಿಯೋಜಿಸಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.
ಮಹಾರಾಷ್ಟ್ರ, ಗೋವಾ ಮತ್ತು ಕರ್ನಾಟಕ(Karnataka)ದಲ್ಲಿ ನೆಲೆಗೊಂಡಿರುವ ಐಸಿಜಿ ಘಟಕಗಳು ನಿರಂತರ ಮಳೆಯ ಪರಿಣಾಮವನ್ನು ತಗ್ಗಿಸಲು ಸಂಬಂಧಿಸಿದ ಜಿಲ್ಲಾಡಳಿತಕ್ಕೆ ಎಲ್ಲಾ ಸಹಾಯ ಮತ್ತು ಬೆಂಬಲವನ್ನು ನೀಡುತ್ತಿವೆ ಎಂದು ಐಸಿಜಿ ತಿಳಿಸಿದೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ