ಬೆಂಗಳೂರು : ಕಳೆದ 24 ಗಂಟೆಗಳಲ್ಲಿ ರಾಜ್ಯದ ವಿವಿಧ ಭಾಗಗಳಲ್ಲಿ ಭಾರೀ ಮಳೆಯಿಂದಾಗಿ ಮೂರು ಜನ  ಸಾವನ್ನಪ್ಪಿದ್ದಾರೆ, ಎಂಟು ಸ್ಥಳಗಳಲ್ಲಿ ಭೂಕುಸಿತ ಸಂಭವಿಸಿದೆ ಮತ್ತು ಸುಮಾರು 9,000 ಜನರನ್ನು ಸ್ಥಳಾಂತರಿಸಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.


COMMERCIAL BREAK
SCROLL TO CONTINUE READING

ಮುಂದಿನ 24 ಗಂಟೆಗಳ ಕಾಲ ರಾಜ್ಯದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಲೂರು, ಹಾಸನ ಮತ್ತು ಕೊಡಗು ಈ ಏಳು ಜಿಲ್ಲೆಗಳಲ್ಲಿ 'ರೆಡ್ ಅಲರ್ಟ್'(Red Alert) ಘೋಷಣೆ ಮಾಡಲಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.


ಇದನ್ನೂ ಓದಿ : ವಲಸಿಗ ಸಚಿವರು ವಾಪಸ್ ಬಂದರೂ ಪಕ್ಷಕ್ಕೆ ಸೇರಿಸಿಕೊಳ್ಳುವುದಿಲ್ಲ: ಸಿದ್ದರಾಮಯ್ಯ


ಸೋನಾಲಿಯಂ-ಕುಲೆಮ್ ಮತ್ತು ದುಧ್‌ಸಾಗರ್-ಕಾರಂಜೋಲ್ ನಡುವಿನ ಭೂಕುಸಿತ(Landslides)ದಿಂದಾಗಿ ಭಾರತೀಯ ರೈಲ್ವೆ ಕೆಲವು ರೈಲುಗಳನ್ನು ರದ್ದುಗೊಳಿಸಿದೆ.


ರಾಜ್ಯದ ನದಿಗಳಾದ ಕೃಷ್ಣಾ, ಕಾವೇರಿ, ತುಂಗಭದ್ರಾ, ಭೀಮಾ, ಕಪಿಲಾ (ಕಬಿನಿ) ಮತ್ತು ಮಲೆನಾಡು ಮತ್ತು ಕರಾವಳಿ ಭಾಗದ ಅನೇಕ ನದಿಗಳು(Rivers) ತುಂಬಿ ಹರಿಯುತ್ತಿವೆ. 18 ತಾಲ್ಲೂಕುಗಳಲ್ಲಿ 131 ಗ್ರಾಮಗಳು ತೀವ್ರವಾಗಿ ಹಾನಿಗೊಳಗಾಗಿದ್ದು, 16,213 ಜನರನ್ನ ಸ್ಥಳಾಂತರಿಸಲಾಗಿದೆ.


BS Yediyurappa) ಅವರು ರಾಜ್ಯದ ಮಳೆ ಸಂಬಂಧಿತ ಪರಿಸ್ಥಿತಿಯನ್ನು ಕುರಿತು ಜಿಲ್ಲಾ ಆಯುಕ್ತರೊಂದಿಗೆ ಮಾತುಕತೆ ನಡೆಸಿ ಪರಿಶೀಲಿಸಿದ್ದಾರೆ ಎಂದು ಹೇಳಿದ್ದಾರೆ. ಈ ಕುರಿತು ತಮ ಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಬರೆದುಕೊಂಡಿರುವ ಸಿಎಂ, ರಾಜ್ಯದ ಅನೇಕ ಭಾಗಗಳಲ್ಲಿ ಸುರಿಯುತ್ತಿರುವ ಭಾರಿ ಮಳೆಯ ಹಿನ್ನಲೆಯಲ್ಲಿ, ಜಿಲ್ಲಾ ಉಸ್ತುವಾರಿ ಸಚಿವರುಗಳು ಮತ್ತು ಶಾಸಕರು ತಮ್ಮ ತಮ್ಮ ಜಿಲ್ಲೆ ಹಾಗೂ ಕ್ಷೇತ್ರಗಳಲ್ಲಿ ಉಪಸ್ಥಿತರಿದ್ದು ಜನರಿಗೆ ನೆರವಾಗಬೇಕು, ರಕ್ಷಣೆ ಮತ್ತು ಪರಿಹಾರ ಕಾರ್ಯಗಳ ಮೇಲ್ವಿಚಾರಣೆ ನಡೆಸಬೇಕು ಎಂದು ಸೂಚಿಸುತ್ತೇನೆ.


ಇದನ್ನೂ ಓದಿ : ಸಿಎಂ ಹುದ್ದೆಗೆ ರಾಜೀನಾಮೆ ಬಿಗ್ ಟ್ವಿಸ್ಟ್ ನೀಡಿದ ಸಿಎಂ ಯಡಿಯುರಪ್ಪ


ಸತತ ಮಳೆ(Heavy Rain)ಯಿಂದ ಪ್ರವಾಹ ಪರಿಸ್ಥಿತಿ ಉಂಟಾಗುತ್ತಿರುವ ಹಿನ್ನಲೆಯಲ್ಲಿ ಬೆಳಗಾವಿ ಜಿಲ್ಲಾಧಿಕಾರಿ ಸೇರಿದಂತೆ ಹಲವು ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ಈಗಾಗಲೇ ಮಾತನಾಡಿ, ನದಿ ಪಾತ್ರದ ಹಳ್ಳಿಗಳಲ್ಲಿ ಹೆಚ್ಚಿನ‌ ನಿಗಾ ವಹಿಸುವಂತೆ ಹಾಗೂ ಜನ ಜಾನುವಾರುಗಳ ಸುರಕ್ಷತೆಗೆ ಅಗತ್ಯ ಕ್ರಮ ವಹಿಸುವಂತೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.


ಜಿಲ್ಲಾಡಳಿತಗಳು ಕೈಗೊಳ್ಳುತ್ತಿರುವ ರಕ್ಷಣಾ ಮತ್ತು ಪರಿಹಾರ ಕಾರ್ಯಗಳ ಮೇಲ್ವಿಚಾರಣೆಗೆ ಎಲ್ಲಾ ಜಿಲ್ಲಾ ಉಸ್ತುವಾರಿ ಸಚಿವರು(District in-charge Ministers) ಮತ್ತು ಶಾಸಕರು ಆಯಾ ಜಿಲ್ಲೆಗಳು ಮತ್ತು ಕ್ಷೇತ್ರಗಳಿಗೆ ಭೇಟಿ ನೀಡಲು ಕೋರಲಾಗಿದೆ ಎಂದು ಸಿಎಂ ತಿಳಿಸಿದ್ದಾರೆ.


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ