ಬೆಂಗಳೂರಿನಲ್ಲಿ ನವೆಂಬರ್ ವರೆಗೂ ಸುರಿಯಲಿದೆ ಮಳೆ.! ರಾಜಧಾನಿಗೆ ಮತ್ತೆ ಕಂಟಕ ತರುವನಾ ವರುಣ
ತಗ್ಗು ಪ್ರದೇಶಗಳಿಗೆ ನುಗ್ಗಿದ ನೀರಿನಿಂದ ಬೆಂಗಳೂರಿಗರು ನಲುಗಿ ಹೋಗಿದ್ದರು. ಇದೀಗ ರಾಜ್ಯದಲ್ಲಿ ಮತ್ತೆ ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಬೆಂಗಳೂರು : ರಾಜ್ಯ ರಾಜಧಾನಿಗೆ ಮತ್ತೆ ಮಳೆ ಆತಂಕ ಎದುರಾಗಿದೆ. ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಾಗೂ ಮೇಲ್ಮೈ ಸುಳಿಗಾಳಿ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ನವೆಂಬರ್ ವರೆಗೂ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಕಳೆದೊಂದು ವಾರದಿಂದ ಸುರಿಯುತ್ತಿರುವ ಮಳೆಗೆ ಇಡೀ ಬೆಂಗಳೂರು ತತ್ತರಿಸಿ ಹೋಗಿದೆ. ಕಳೆದ ವಾರ ಸುರಿದ ಭಾರೀ ಮಳೆಯಿಂದಾಗಿ ಇಡೀ ಬೆಂಗಳೂರು ನೀರಿನಲ್ಲಿ ಮುಳುಗಿ ಹೋಗಿತ್ತು. ತಗ್ಗು ಪ್ರದೇಶಗಳಿಗೆ ನುಗ್ಗಿದ ನೀರಿನಿಂದ ಬೆಂಗಳೂರಿಗರು ನಲುಗಿ ಹೋಗಿದ್ದರು. ಇದೀಗ ರಾಜ್ಯದಲ್ಲಿ ಮತ್ತೆ ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಇದನ್ನೂ ಓದಿ : ‘ಆಪರೇಶನ್ ಕಮಲ’ದಿಂದ ಜನ್ಮತಾಳಿದ ಬಿಜೆಪಿ ಸರ್ಕಾರ ಅಕ್ರಮಗಳ ಕೂಪವಾಗಿದೆ: ಕಾಂಗ್ರೆಸ್
ಕರಾವಳಿಗೆ ಮುಂದಿನ ಐದು ದಿನ ಯೆಲ್ಲೋ ಅಲರ್ಟ್ ನೀಡಲಾಗಿದೆ. ಉತ್ತರ ಒಳನಾಡಿನ ಕೆಲ ಜಿಲ್ಲೆಗಳಿಗೂ ಮುಂದಿನ 3 ದಿನ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿ, ಬೀದರ್, ಗುಲ್ಬರ್ಗಾ, ಯಾದಗಿರಿ ಭಾಗದಲ್ಲಿ ಭಾರಿ ಮಳೆಯಾಗಲಿದೆ ಎಂದು ಹೇಳಲಾಗಿದೆ. ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಬೆಂಗಳೂರು ನಗರ, ಗ್ರಾಮಾಂತರ, ಕೋಲಾರ, ಚಿಕ್ಕಮಗಳೂರಿನಲ್ಲೂ ಭಾರೀ ಮಳೆ ಸಾಧ್ಯತೆ ಬಗ್ಗೆ ಹವಾಮಾನ ಇಲಾಖೆ ಹೇಳಿದೆ.
ಇಂದು ಗುಡುಗು ಮಿಂಚು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಮೂರು ದಿನದ ಬಳಿಕ ಮಳೆ ಪ್ರಮಾಣದಲ್ಲಿ ಕೊಂಚ ಇಳಿಕೆಯಾಗಲಿದೆ. ಆದರೆ ಬೆಂಗಳೂರಿನಲ್ಲಿ ಮುಂದಿನ ಮೂರು ತಿಂಗಳು ಮಳೆಯಾಗಲಿದ್ದು, ಮಳೆ ಎದುರಿಸಲು ಜನ ಸಿದ್ದರಾಗಬೇಕಿದೆ.
ಇದನ್ನೂ ಓದಿ : PSI Scam: ಶಾಸಕ ಬಸವರಾಜ್ ದಡೇಸುಗೂರು ವಿರುದ್ಧ ಆರೋಪಿಸಿದ್ದ ಪರಸಪ್ಪನ ವಿಡಿಯೋ ಬಿಡುಗಡೆ!
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.