ರಾಜ್ಯದಲ್ಲಿ ಇನ್ನೂ 3 ದಿನ ಗುಡುಗು ಸಹಿತ ಭಾರೀ ಮಳೆ: ಹಲವು ಜಿಲ್ಲೆಗಳಲ್ಲಿ `ಯೆಲ್ಲೊ ಅಲರ್ಟ್`
Rain Alert: ಇಂದಿನಿಂದ ಮುಂದಿನ ಮೂರು ದಿನಗಳವರೆಗೆ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಲೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
Karnataka Rain Alert: ರಾಜ್ಯದಲ್ಲಿ ಇನ್ನೂ ಮೂರು ದಿನಗಳ ಕಾಲ ವರುಣನ ಅಬ್ಬರ ಮುಂದುವರೆಯಲಿದೆ. ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ 27 ಮೇ 2023ರವರೆಗೆ ಗುಡುಗು ಸಹಿತ ಮಳೆ ಮುಂದುವರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಭವಿಷ್ಯ ನುಡಿದಿದೆ.
ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಇತ್ತೀಚೆಗೆ ಕರ್ನಾಟಕದ ಕೆಲವು ಪ್ರದೇಶಗಳಲ್ಲಿ ಗುಡುಗು ಸಹಿತ ಭಾರೀ ಮಲೆಯಾಗುವ ಸಾಧ್ಯತೆ ಬಗ್ಗೆ ಭವಿಷ್ಯ ನುಡಿದಿದ್ದು, ಕೆಲವು ಜಿಲ್ಲೆಗಳಲ್ಲಿ 'ಯೆಲ್ಲೊ ಅಲರ್ಟ್' ಅನ್ನು ಕೂಡ ಘೋಷಿಸಿದೆ.
ಉತ್ತರ ಒಳನಾಡಿನ ಬೀದರ್, ಕಲಬುರಗಿ, ಗದಗ, ಕೊಪ್ಪಳ, ರಾಯಚೂರು, ಯಾದಗಿರಿ ಹಾಗೂ ದಕ್ಷಿಣ ಒಳನಾಡಿನ ಎಲ್ಲ ಜಿಲ್ಲೆಗಳು, ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಇದನ್ನೂ ಓದಿ- ಸೋರುತಿಹದು ಕಿಮ್ಸ್ ಆಸ್ಪತ್ರೆ, ಹುಬ್ಬಳ್ಳಿ ಜನರ ಪರದಾಟ
ಈ ಜಿಲ್ಲೆಗಳಲ್ಲಿ "ಯಲ್ಲೋ ಅಲರ್ಟ್":
ರಾಜ್ಯದ ದಕ್ಷಿಣ ಒಳನಾಡಿನ ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ರಾಮನಗರ, ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ ಹಾಗೂ ಕರಾವಳಿಯ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆ ನಿರೀಕ್ಷೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದಲ್ಲದೆ, ಕೊಡಗು, ಹಾಸನ, ಶಿವಮೊಗ್ಗ, ಚಿಕ್ಕಮಗಳೂರಲ್ಲಿ ಅಧಿಕ ಮಲೆಯಾಗುವ ನಿರೀಕ್ಷೆ ಇರುವುದರಿಂದ ಈ ಜಿಲ್ಲೆಗಳಲ್ಲಿ "ಯಲ್ಲೋ ಅಲರ್ಟ್" ಕೂಡ ಘೋಷಿಸಲಾಗಿದೆ.
ಸಿಲಿಕಾನ್ ಸಿಟಿಯಲ್ಲಿ ಹೆಲ್ಪ್ ಲೈನ್ ನಂಬರ್ ಗೆ ಕರೆ ಮಾಡಲು ಸೂಚನೆ:
ಬೆಂಗಳೂರು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಭವಿಷ್ಯ ನುಡಿದಿದೆ. ಇನ್ನು ಕಳೆದ ಮೂರ್ನಾಲ್ಕು ದಿನಗಳಿಂದ ಬೆಂಗಳೂರಿನಲ್ಲಿ ಭಾರೀ ಮಳೆಯಿಂದಾಗಿ ಮನೆಗಳಿಗೆ ನೀರು ನುಗ್ಗಿ ಅಪಾರ ಪ್ರಮಾಣದ ಹಾನಿ ಉಂಟಾಗಿದೆ. ಇದಲ್ಲದೆ, ಕೆಲವೆಗೆ ಮಳೆಗೆ ಮರ-ವಿದ್ಯುತ್ ಕಂಬಗಳು ಧರೆಗುರುಳಿದ್ದರೆ, ರಸ್ತೆಗಳಲ್ಲಿ ನೀರು ನಿಂತು ಜನರು ಪರದಾಡುವಂತಾಗಿದೆ. ಮಳೆಯಿಂದಾಗಿ ಯಾವುದೇ ರೀತಿಯ ತೊಂದರೆಯನ್ನು ತಪ್ಪಿಸಲು ಬಿಬಿಎಂಪಿ ಹೆಲ್ಪ್ ಲೈನ್ಗೆ ಕರೆ ಮಾಡುವಂತೆ ಸೂಚನೆ ನೀಡಲಾಗಿದೆ.
ಇದನ್ನೂ ಓದಿ- ರಾಜಧಾನಿಯಲ್ಲಿ ನಾಳೆ ಪವರ್ ಕಟ್: ನಿಮ್ಮ ಏರಿಯಾದ ಹೆಸರೂ ಇದೆಯೇ? ಈಗಲೇ ಚೆಕ್ ಮಾಡಿ
ಕರಾವಳಿಯಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ:
ಮೇ 24 ರಿಂದ 26 ರವರೆಗೆ ಕರಾವಳಿ ಪ್ರದೇಶದ ಎಲ್ಲಾ ಜಿಲ್ಲೆಗಳ ಪ್ರತ್ಯೇಕ ಪ್ರದೇಶಗಳಲ್ಲಿ ಗುಡುಗು ಸಹಿತ ಮಿಂಚಿನ ಮಳೆಯಾಗುವ ನಿರೀಕ್ಷೆಯಿದೆ. ಇಂದು (ಬುಧವಾರ, ಮೇ 24 ರಂದು) ಕರಾವಳಿ ಕರ್ನಾಟಕದಲ್ಲಿ ಗುಡುಗು, ಬಿರುಗಾಳಿ ಸಹಿತ ಭಾರೀ ಮಳೆಯಾಗಬಹುದು ಎಂದು ಭವಿಷ್ಯ ನುಡಿದಿರುವ ಐಎಂಡಿ, ಗಾಳಿಯ ವೇಗ ಗಂಟೆಗೆ 40-50 ಕಿಮೀ ವೇಗವನ್ನು ತಲುಪಬಹುದು ಎಂದು ಎಚ್ಚರಿಕೆ ನೀಡಿದೆ. ಮೇ 25 ಮತ್ತು 26 ರಂದು, ಈ ಪ್ರದೇಶದಲ್ಲಿ ಗುಡುಗು, ಮಿಂಚಿನಿಂದ ಮಳೆ ಮುಂದುವರಿಯುವ ನಿರೀಕ್ಷೆಯಿದೆ ಎನ್ನಲಾಗಿದೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.