ಬೆಂಗಳೂರು : ರಾಜ್ಯದಲ್ಲಿ ಮತ್ತೆ ವರುಣನ ಸಿಂಚನವಾಗಿದೆ. ರಾಜ್ಯದಲ್ಲಿ ಇನ್ನು ನಾಲ್ಕು ದಿನ ಮಳೆಯಾಗಲಿದೆ. ನಿನ್ನೆ ಮಧ್ಯಾಹ್ನದಿಂದಲೇ ಸಿಲಿಕಾನ್ ಸಿಟಿಯಲ್ಲಿ ಮಳೆಯಾಗುತ್ತಿದೆ. ನಗರದ ಬಹುತೇಕ ಕಡೆಗಳಲ್ಲಿ ಮಳೆ ಸಿಂಚನವಾಗಿದೆ. ಇಂದು ಕೂಡಾ ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ಮಳೆಯಾಗುವ ಸಾಧ್ಯತೆ ಇದೆ. 


COMMERCIAL BREAK
SCROLL TO CONTINUE READING

ರಾಮನಗರ, ಕೋಲಾರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ಚಿಕ್ಕಬಳ್ಳಾಪುರ, ಭಾಗದಲ್ಲಿ ಮಳೆಯ ಮುನ್ಸೂಚನೆ ನೀಡಲಾಗಿದೆ. ಇನ್ನು ಇಂದು ಕರಾವಳಿ ಜಿಲ್ಲೆಗಳಲ್ಲಿ ಕೂಡಾ ಮಳೆಯ ಎಚ್ಚರಿಕೆ ನೀಡಲಾಗಿದೆ. 
ಉತ್ತರ ಒಳನಾಡಿನಲ್ಲಿ ತುಂತುರು ಮಳೆಯಾಗುವ ಸಾಧ್ಯತೆ ಇದೆ. 


ಇದನ್ನೂ ಓದಿ : ಚಿಕ್ಕಬಳ್ಳಾಪುರ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ


ಈ ಭಾಗದಲ್ಲಿ ಭಾರೀ ಮಳೆ ಸಾಧ್ಯತೆ : 
ಬೆಳಗಾವಿ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಧಾರವಾಡ, ಹಾಸನ, ಕೊಡಗು, ಶಿವಮೊಗ್ಗ, ಉಡುಪಿ ಜಿಲ್ಲೆಗಳ ಕೆಲವೆಡೆ ಬಿರುಗಾಳಿ ಸಹಿತ ಗೂಡು ಮಿಂಚಿನ ಮಳೆಯಾಗಲಿದೆ. ಗಾಳಿಯ ವೇಗವು ಗಂಟೆಗೆ 30 ರಿಂದ 40 ಕಿಮೀ ಇರುವ ಸಾಧ್ಯತೆ ಇದೆ.  ಇನ್ನು ನಾಲ್ಕು ದಿನ ಇದೇ ರೀತಿ ಮಳೆಯಾಗುವ ಮುನ್ಸೂಚನೆಯನ್ನು  ಹವಾಮಾನ ಇಲಾಖೆ ನೀಡಿದೆ. 


ಮಳೆ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ : 
ಭಾರೀ ಮಳೆ ಗಾಳಿ ಹಿನ್ನೆಯಲ್ಲಿ ಮನೆಯೊಳಗೆ ಇರುವಂತೆ ಮತ್ತು ಕಿಟಕಿ ಬಾಗಿಲುಗಳನ್ನು ಮುಚ್ಚಿರುವಂತೆ ಎಚ್ಚರಿಕೆ ನೀಡಲಾಗಿದೆ. ಸಾಧ್ಯವಾದಷ್ಟು ಪ್ರಯಾಣವನ್ನು ಬೆಳೆಸದಂತೆ ಸೂಚನೆ ನೀಡಲಾಗಿದೆ. ಅಲ್ಲದೆ, ಮಳೆ ಸುರಿಯುತ್ತಿದ್ದ ವೇಳೆ ಮರಗಳ ಕೆಳಗೆ  ಆಶ್ರಯ ಪಡೆಯದಂತೆ ಮುನ್ನೆಚ್ಚರಿಕೆ ನೀಡಲಾಗಿದೆ. 


ಇದನ್ನೂ ಓದಿ : ಬೆಳಗಾವಿಯಲ್ಲಿ ರಮೇಶ್‌ v/s ಡಿಕೆಶಿ ಟಾಕ್‌ವಾರ್‌


ನಿನ್ನೆಯೂ ಈ ಭಾಗದಲ್ಲಿ ಮಳೆ : 
ನಿನ್ನೆಯೂ ರಾಜ್ಯದ ಕೆಲವೆಡೆ ಭಾರೀ ಮಳೆಯಾಗಿದೆ. ಬೆಳಗಾವಿ, ಗದಗ, ಹುಬ್ಬಳ್ಳಿ, ಧಾರವಾಡ, ವಿಜಯನಗರ, ಹಾವೇರಿ, ಚಿಕ್ಕೋಡಿ, ಬಾಗಲಕೋಟೆ, ಹೀಗೆ ಹಲವು ಭಾಗದಲ್ಲಿ ಮಳೆಯಾಗಿದೆ. 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.