ಬೆಂಗಳೂರು: ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರವು (KSNDMC) ಕರಾವಳಿ ಕರ್ನಾಟಕಕ್ಕೆ ರೆಡ್ ಅಲರ್ಟ್ ಘೋಷಿಸಿದೆ. ಜೂನ್ 22 ರಂದು ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ. ಗುಡುಗು ಸಿಡಿಲು, ಬಿರುಗಾಳಿ ಸಹಿತ ಮಳೆ (30-40 ಕಿಮೀ) ಆಗಬಹುದು ಎಂದು ಹೇಳಿದೆ.


COMMERCIAL BREAK
SCROLL TO CONTINUE READING

KSNDMC ಸಲಹೆಯ ಪ್ರಕಾರ, ಜೂನ್ 23 ಮತ್ತು ಜೂನ್ 26 ರ ನಡುವೆ ಕೃಷ್ಣಾ ಜಲಾನಯನ ಪ್ರದೇಶದ ಕೆಲವು ಪ್ರದೇಶಗಳಲ್ಲಿ ಭಾರೀ ಮಳೆ ಆಗಬಹುದೆಂದು ನಿರೀಕ್ಷಿಸಲಾಗಿದೆ. ಭಾರತದ ಹವಾಮಾನ ಇಲಾಖೆ (IMD) ಮುನ್ಸೂಚನೆಯನ್ನು ಬಿಡುಗಡೆ ಮಾಡಿದೆ. ಕರ್ನಾಟಕದ ಒಳನಾಡಿನ ಕರಾವಳಿ ಮತ್ತು ಪಕ್ಕದ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಿದೆ.


ಇದನ್ನೂ ಓದಿ: ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ! 


ನೈಋತ್ಯ ಮಾನ್ಸೂನ್ ಮಹಾರಾಷ್ಟ್ರದ ಇನ್ನೂ ಕೆಲವು ಭಾಗಗಳಲ್ಲಿ ಮುಂದುವರೆದಿದ್ದರೂ, ವಿದರ್ಭದ ಉಳಿದ ಭಾಗಗಳು, ಮಧ್ಯಪ್ರದೇಶದ ಕೆಲವು ಭಾಗಗಳು, ಛತ್ತೀಸ್‌ಗಢ ಮತ್ತು ಒಡಿಶಾದ ಕೆಲವು ಭಾಗಗಳು, ಗಂಗಾ ಪಶ್ಚಿಮ ಬಂಗಾಳದ ಕೆಲವು ಭಾಗಗಳು, ಉಪ-ಹಿಮಾಲಯನ್ ಪಶ್ಚಿಮ ಬಂಗಾಳದ ಉಳಿದ ಭಾಗಗಳು, ಜಾರ್ಖಂಡ್‌ನ ಕೆಲವು ಭಾಗಗಳು ಮತ್ತು ಕರ್ನಾಟಕದ ಒಳನಾಡಿನ ಕರಾವಳಿ ಮತ್ತು ಪಕ್ಕದ ಜಿಲ್ಲೆಗಳಲ್ಲಿ ಜೂನ್ 21 ಮತ್ತು ಜೂನ್ 25 ರ ನಡುವೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಲಾಗಿದೆ.


ಜೂನ್ 23 ರಿಂದ ಕರ್ನಾಟಕ ರಾಜ್ಯದಾದ್ಯಂತ ಭಾರೀ ಮಳೆಯೊಂದಿಗೆ ವ್ಯಾಪಕ ಮಳೆಯನ್ನು ನಿರೀಕ್ಷಿಸುತ್ತಿದ್ದೇವೆ ಎಂದು IMD ಬೆಂಗಳೂರು ನಿರ್ದೇಶಕ ಸಿಎಸ್ ಪಾಟೀಲ್ ಹೇಳಿದ್ದಾರೆ. 


ಇದನ್ನೂ ಓದಿ: ಗಾಂಧಿನಗರದಲ್ಲಿ 1 ಕಿ.ಮೀ ವ್ಯಾಪ್ತಿಯಲ್ಲಿ ವಾಹನ ನಿಲುಗಡೆ ನಿಷೇಧ : ಡಿಸಿಎಂ


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.