Heavy Rainfall in Karnataka : ಇಂದಿನಿಂದ ಜೂ.17 ರವರೆಗೆ ರಾಜ್ಯದಲ್ಲಿ ಭಾರೀ ಮಳೆ!
ಇದೀಗ ಕರಾವಳಿ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಇನ್ನೂ 4 ದಿನ ಜೂನ್ 17 ರವರೆಗೆ ಭಾರೀ ಮಳೆ
ಬೆಂಗಳೂರು : ರಾಜ್ಯದಲ್ಲಿ ಭಾರೀ ಮಳೆಯಾಗುತ್ತಿದ್ದು ಇದೀಗ ಕರಾವಳಿ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಇನ್ನೂ 4 ದಿನ ಜೂನ್ 17 ರವರೆಗೆ ಭಾರೀ ಮಳೆ ಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಇಂದಿನಿಂದ ( ಜೂ.13) ಐದು ದಿನಗಳ ಕಾಲ ಆರೆಂಜ್ ಅಲರ್ಟ್(Orange Alert) ಘೋಷಿಸಲಾಗಿದೆ. ಸೋಮವಾರದಂದು ರೆಡ್ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಜೂನ್ 16 ಹಾಗೂ 17 ರಂದು ಎಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಇದನ್ನೂ ಓದಿ : ಪೊಲೀಸ್ ಅಧಿಕಾರಿಗಳ ಸ್ಟಾರ್ ಕಿತ್ತಾಕಿ, ಅವರಿಗೆ ಬಿಜೆಪಿ ಬ್ಯಾಡ್ಜ್, ಬಾವುಟ ಕೊಡಿ
ಇನ್ನೂ, ದಕ್ಷಿಣ ಒಳನಾಡಿನಲ್ಲಿ ಕೂಡ ಸೋಮವಾರದಿಂದ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಲಾಖೆ(India Meteorological Department) ಮಾಹಿತಿ ನೀಡಿದೆ.. ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ, ಕಲಬುರಗಿ, ಯಾದಗಿರಿ, ಬೀದರ್ ಜಿಲ್ಲೆಗಳಲ್ಲಿ ಶನಿವಾರ ಹಾಗೂ ಭಾನುವಾರ ಉತ್ತಮ ಮಳೆಯಾಗಿದೆ.
ಇದನ್ನೂ ಓದಿ : 'ಪೆಟ್ರೋಲನ್ನು ಜಿಎಸ್ಟಿ ಗೆ ಸೇರಿಸುವ ರಾಷ್ಟ್ರೀಯ ಪಕ್ಷಗಳ ಹುನ್ನಾರವನ್ನು ವಿರೋಧಿಸುತ್ತೇವೆ'
ಇಂದಿನಿಂದ ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ, ಉತ್ತರ ಕನ್ನಡದಲ್ಲಿ ಭಾರೀ ಮಳೆ(Heavy Rainfall)ಯಾಗುವ ಸಾಧ್ಯತೆ ಇದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಮಲೆನಾಡು ಜಿಲ್ಲೆಗಳಾದ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಮತ್ತು ಹಾಸನದಲ್ಲಿ ಇಂದಿನಿಂದ ಎರಡು ದಿನ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಇದನ್ನೂ ಓದಿ : 'ಹೋರಾಟದ ಸಾಗರಕ್ಕೆ ಸಾವಿರಾರು ನದಿಗಳನ್ನು ಸೇರಿಸಿದ್ದ ಬಂಡಾಯ ಕವಿ ಡಾ.ಸಿದ್ಧಲಿಂಗಯ್ಯ'
ಇನ್ನು ಬೆಳಗಾವಿ, ಧಾರವಾಡ, ಗದಗ, ಕೊಪ್ಪಳ, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಇಂದಿನಿಂದ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್(Yellow Alert) ಇರಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.