ಬೆಂಗಳೂರು : ಇಂದಿನಿಂದ ಜುಲೈ 16ರವರೆಗೂ ರಾಜ್ಯದಲ್ಲಿ ಭಾರೀ ಮಳೆಯಾಗಲಿದೆ ಎಂದು  ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. 


COMMERCIAL BREAK
SCROLL TO CONTINUE READING

ಈ ವೇಳೆ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮತ್ತು ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ(Heavy Rain)ಯಾಗಲಿದೆ. ಇದು ಜು.16ರವರೆಗೂ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.


ಇದನ್ನೂ ಓದಿ : PM Kisan : 9ನೇ ಕಂತು ಬಿಡುಗಡೆಗೆ ಮುನ್ನ ಯೋಜನೆಯಲ್ಲಾದ ಬದಲಾವಣೆ ಗೊತ್ತಿರಲಿ


ರಾಜ್ಯದ ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಭಾರೀ ಮಳೆ(Rain)ಯಾಗುವ ಸಾಧ್ಯತೆ ಇದೆ. ಈ ಭಾಗದಲ್ಲಿ  ಕಳೆದ 3 ದಿನಗಳಿಂದ ಮಳೆ ಸುರಿಯುತ್ತಿದೆ. ಚಿಕ್ಕಮಗಳೂರು, ಶಿವಮೊಗ್ಗ, ದಕ್ಷಿಣ ಕನ್ನಡ, ಉಡುಪಿಗಳಲ್ಲಿ ನಿರಂತರ ಮಳೆಯಾಗುತ್ತಿದೆ. 


ಇದನ್ನೂ ಓದಿ : ಕಾಲೇಜು ಆರಂಭಕ್ಕೆ ಸರ್ಕಾರದ ಸಿದ್ಧತೆ: ಸಿ.ಎನ್.ಅಶ್ವತ್ಥನಾರಾಯಣ್


ಕೇರಳದಲ್ಲಿ ಭಾರೀ ಮಳೆಯಾಗುವ ನಿರೀಕ್ಷೆ ಇದ್ದು, ಈಗಾಗಲೇ ಇಲ್ಲಿ 5 ಜಿಲ್ಲೆಗಳಲ್ಲಿ 'ಆರೆಂಜ್​ ಆಲರ್ಟ್'​ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ(India Meteorological Department) ಮಾಹಿತಿ ನೀಡಿದೆ.


ಇದನ್ನೂ ಓದಿ : Super Cop: ಸ್ವಂತ ಹಣದಿಂದ ರಸ್ತೆ ಗುಂಡಿ ಮುಚ್ಚಿಸಿದ ಪೊಲೀಸ್ ಅಧಿಕಾರಿ


ಕೇರಳದಲ್ಲಿ ಇಂದಿನಿಂದ ನಾಲ್ಕು ದಿನ ಭಾರೀ ಮಳೆಯಾಗಲಿದ್ದು, ಕಾಸರಗೋಡು, ಇಡುಕ್ಕಿ, ಕಣ್ಣೂರಿನಲ್ಲಿ​​ 'ಆರೆಂಜ್​ ಆಲರ್ಟ್'​(Orange Alert) ಮತ್ತೆ ಬಾಕಿ ಜಿಲ್ಲೆಗಳಲ್ಲಿ 'ಯಲ್ಲೋ ಆಲರ್ಟ್'​ ಘೋಷಣೆ ಮಾಡಲಾಗಿದೆ.  ಕೇರಳದಲ್ಲಿ ಕೇವಲ 408.44 ಮಿಮೀ ಮಳೆಯಾಗಿದೆ. ಇದು ಶೇ. 36ರಷ್ಟು ಕಡಿಮೆ ಮಳೆ. ಈ ತಿಂಗಳಲ್ಲಿ 643 ಮಿಮೀ ಮಳೆ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.


ಇದನ್ನೂ ಓದಿ : Caste Atrocities: 28 ವರ್ಷಗಳ ಹಿಂದೆ ಅಂತರ್ಜಾತಿ ವಿವಾಹವಾಗಿದ್ದ ದಂಪತಿ ಮೇಲೆ ಮಾರಣಾಂತಿಕ ಹಲ್ಲೆ, ದೌರ್ಜನ್ಯ


ದಕ್ಷಿಣ ಭಾರತ ಸೇರಿದಂತೆ ಉತ್ತರ ಭಾರದ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗಿದೆ. ಭಾನುವಾರ- ಸೋಮವಾರ ಸುರಿದ ಮಳೆಗೆ ಉತ್ತರ ಪ್ರದೇಶ ಮತ್ತು ರಾಜಸ್ಥಾನ, ಗುಜರಾತ್​, ಹಿಮಾಚಲ ಪ್ರದೇಶದ ಜನ ತತ್ತರಿಸಿದ್ದಾರೆ. 


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ