Heavy Rain in Karnataka : ಮುಂಗಾರು ಆರ್ಭಟಕ್ಕೆ ರಾಜ್ಯ ತತ್ತರ : ಜೂ.18 ರವರೆಗೂ ಭಾರೀ ಮಳೆ!
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ರಾಜ್ಯದಲ್ಲಿ ಮಳೆಯ ಅಬ್ಬರ
ಬೆಂಗಳೂರು : ರಾಜ್ಯದಲ್ಲಿ ಹಲವು ಜಿಲ್ಲೆಗಳಲ್ಲಿ ಜೂನ್ 18 ರವರೆಗೂ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಜೂನ್ 18 ರವರೆಗೆ ರಾಜ್ಯದಲ್ಲಿ ಮಳೆ(Rainfall) ಮುಂದುವರಿಯಲಿದ್ದು, ಕರಾವಳಿ ಮತ್ತು ಮಲೆನಾಡಿನ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಕರಾವಳಿ ಸಮೀಪ ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ತೀವ್ರತೆ ಹೆಚ್ಚಾದ ಪರಿಣಾಮ ರಾಜ್ಯದೆಲ್ಲೆಡೆ ಇನ್ನೆರಡು ದಿನ ಮಳೆಯಾಗುವ ಸಾಧ್ಯತೆ ಇದೆ.
ಇದನ್ನೂ ಓದಿ : Second PUC Result 2021 : ದ್ವಿತೀಯ PUC ಫಲಿತಾಂಶಕ್ಕೆ 'ರಾಜ್ಯ ಹೈಕೋರ್ಟ್' ತಡೆ!
ಕರ್ನಾಟಕದಲ್ಲಿ ಉತ್ತಮ ಮಳೆಯಾಗುತ್ತಿರುವುದರಿಂದ ಈಗಾಗಲೇ ಜಲಾಶಯಗಳಿಗೆ ಭಾರೀ ನೀರು ಹರಿದುಬರುತ್ತಿದ್ದು, ನದಿಗಳು ತುಂಬಿಹರಿಯುತ್ತಿವೆ. ಕರಾವಳಿ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್(Orange Alert) ಘೋಷಣೆ ಆಗಿರುವುದರಿಂದ ನಾಲ್ಕೈದು ದಿನ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಮುನ್ನೆಚ್ಚರಿಕೆ ನೀಡಲಾಗಿದೆ. ಜೂನ್ನಿಂದ ಸೆಪ್ಟೆಂಬರ್ವರೆಗೆ ಮಳೆಯ ಆರ್ಭಟವಿರಲಿದೆ ಎಂದು ತಜ್ಞರು ತಿಳಿಸಿದ್ದಾರೆ. ಮಳೆಯ ಆರ್ಭಟದಿಂದ ಜಲಪಾತಗಳಿಗೆ ಮರುಜೀವ ಬಂದಿದೆ.
ಇದನ್ನೂ ಓದಿ : Complaint to ED: ಕೋವಿಡ್ ನಿರ್ವಹಣೆ ನಡುವೆ ಸಿಎಂ ಬಿಎಸ್‌ವೈಗೆ ಎದುರಾಗಿದೆ ಮತ್ತೊಂದು ಸಂಕಷ್ಟ!
ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಜೂನ್ 16 ಮತ್ತು 17 ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಮಲೆನಾಡು ಜಿಲ್ಲೆಗಳಾದ ಶಿವಮೊಗ್ಗ, ಚಿಕ್ಕಮಗಳೂರು,ಹಾಸನ,ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆ(Heavy Rainfall)ಯಾಗುವ ಸಾಧ್ಯತೆ ಇರುವುದರಿಂದ ಜೂನ್ 17 ಮತ್ತು 18 ಕ್ಕೆ 'ಯೆಲ್ಲೋ ಅಲರ್ಟ್' ಘೋಷಿಸಲಾಗಿದೆ.
ಇದನ್ನೂ ಓದಿ : Karnataka Unlock : ರಾಜ್ಯದಲ್ಲಿ ಜೂ. 21 ರಿಂದ ಅನ್ ಲಾಕ್ ಫಿಕ್ಸ್ : ಏನಿರುತ್ತೆ? ಏನಿರಲ್ಲ? ಇಲ್ಲಿದೆ ಮಾಹಿತಿ
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಕರ್ನಾಟಕದಲ್ಲಿ ಮಳೆಯ ಅಬ್ಬರ ಹೆಚ್ಚಾಗಿದೆ. ಕರ್ನಾಟಕ(Karnataka)ದ ಉಡುಪಿ, ಒಡಿಶಾ, ಕೇರಳದ ಕೊಳಿಕೋಡ್, ವಯನಾಡಿನಲ್ಲಿ ಇಂದು ಅಧಿಕ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ. ಕರಾವಳಿ ರಾಜ್ಯಗಳಾದ ಮಹಾರಾಷ್ಟ್ರ, ಗೋವಾ, ಕರ್ನಾಟಕ ಮತ್ತು ಕೇರಳದಲ್ಲಿ ಇಂದು ಅಧಿಕ ಮಳೆಯಾಗಲಿದೆ.
https://bit.ly/3hDyh4G
Apple Link - https://apple.co/3loQYe
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.