ಬೆಂಗಳೂರು: ಅರಬ್ಬಿ ಸಮುದ್ರದಲ್ಲಿ ಲಘು ವಾಯುಭಾರ ಕುಸಿತ ಉಂಟಾಗಿದ್ದು, ರಾಜ್ಯದಲ್ಲಿ ಮೋಡ ಕವಿದ ವಾತಾವರಣ ಕಂಡುಬಂದಿದೆ. ಮಹಾರಾಷ್ಟ್ರ ಮತ್ತು ಕರ್ನಾಟಕ ಗಡಿಭಾಗದ ಜಿಲ್ಲೆಗಳಲ್ಲಿ ಗುಡುಗು-ಮಿಂಚಿನಿಂದ ಕೂಡಿದ ವಾತಾವರಣ ಕಂಡು ಬರಲಿದ್ದು, ಕೆಲವೆಡೆ ಒಂದೆರಡು ದಿನ ಹಗುರ ಮಳೆಯಾಗುವ ಮುನ್ಸೂಚನೆಗಳಿವೆ.


COMMERCIAL BREAK
SCROLL TO CONTINUE READING

ಕೇರಳದಿಂದ ಮಹಾರಾಷ್ಟ್ರದವರೆಗೂ ವಾಯುಭಾರ ಕುಸಿತದ ಪರಿಣಾಮವಿರುವು ದರಿಂದ ರಾಜ್ಯದಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಕಂಡುಬರುತ್ತಿದೆ ಎಂದು ಕರ್ನಾಟಕ(Karnataka) ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ನಿವೃತ್ತ ನಿರ್ದೇಶಕ ವಿ.ಎಸ್.ಪ್ರಕಾಶ್ ಈ ಸಂಜೆಗೆ ತಿಳಿಸಿದರು. ಮಹಾರಾಷ್ಟ್ರದ ಗಡಿಭಾಗದ ರಾಜ್ಯದ ಜಿಲ್ಲೆಗಳಾದ ಬಾಗಲಕೋಟೆ, ವಿಜಾಪುರ ಮತ್ತಿತರ ಕಡೆಗಳಲ್ಲಿ ಮೋಡ ಕವಿದ ವಾತಾ ವರಣ ಹೆಚ್ಚಿದ್ದು, ಹಗುರ ಮಳೆಯಾಗುವ ಸಾಧ್ಯತೆ ಇದೆ.


Narayana Gowda: ಸಚಿವ ನಾರಾಯಣಗೌಡಗೆ ಎದುರಾಗಿದೆ ಸಂಕಷ್ಟ..!


ಮರಾಠವಾಡದಲ್ಲಿ ಹೆಚ್ಚಿನ ಪ್ರಮಾಣದ ಮಳೆಯಾಗುವ ಸಾಧ್ಯತೆಗಳಿವೆ. ರಾಜ್ಯದ ಉತ್ತರ ಕನ್ನಡ ಜಿಲ್ಲೆಯ ಕಾರವಾರ, ಹಳಿಯಾಳ, ಶಿರಸಿ(Sirisi) ಮತ್ತಿತರ ಕಡೆಗಳಲ್ಲಿ ಗುಡುಗು-ಮಿಂಚಿನಿಂದ ಕೂಡಿದ ಸಾಧಾರಣ ಮಳೆಯಾಗುವ ಸಂಭವವಿದೆ ಎಂದರು. ರಾಜ್ಯಾದ್ಯಂತ ವ್ಯಾಪಕ ಮಳೆಯಾಗುವ ಮುನ್ಸೂಚನೆಗಳು ಕಂಡುಬರುತ್ತಿಲ್ಲ. ಆದರೆ, ಕೆಲವೆಡೆ ಚದುರಿದಂತೆ ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದು ಅವರು ತಿಳಿಸಿದರು.


BJP: 'ಬಿಜೆಪಿ ಸಂಪರ್ಕದಲ್ಲಿದ್ದಾರೆ 15-20 ಜನ ಕಾಂಗ್ರೆಸ್ ಶಾಸಕರು'


ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆಯಾ ಗುವ ಸಾಧ್ಯತೆ ವಿರಳ. ಆದರೂ ರೈತ ಸಮು ದಾಯ ಬೆಳೆದ ಫಸಲು ಒಕ್ಕಣೆ ಮಾಡುತ್ತಿದ್ದು, ಆತಂಕಕ್ಕೆ ಒಳಗಾಗಿದ್ದಾರೆ. ಅಕಾಲಿಕ ಮಳೆ(Rain) ಬಂದು ಬೆಳೆದ ಫಸಲು ಮಳೆಯಿಂದ ಹಾನಿ ಯಾಗಲಿದೆ ಎಂಬ ಆತಂಕ ರೈತರನ್ನು ಕಾಡುತ್ತಿದೆ. ಈಗಿರುವ ಹವಾ ಮುನ್ಸೂಚನೆ ಪ್ರಕಾರ ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಗಳಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.


Election Commission: ರಾಜ್ಯದಲ್ಲಿ ಮತ್ತೊಂದು ಎಲೆಕ್ಷನ್ ಗೆ 'ದಿನಾಂಕ ಘೋಷಣೆ'..!


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.