Heavy Rain in Karnataka : ಜುಲೈ 5ರವರೆಗೆ ರಾಜ್ಯದಲ್ಲಿ ಭಾರೀ ಮಳೆ : ಹವಾಮಾನ ಇಲಾಖೆ ಮಾಹಿತಿ

ಕಳೆದ ಒಂದು ವಾರದಿಂದಲೂ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮಳೆ

Last Updated : Jul 2, 2021, 10:08 AM IST
  • ಕಳೆದ ಒಂದು ವಾರದಿಂದಲೂ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮಳೆ
  • ಜುಲೈ 5ರವರೆಗೂ ವರುಣನ ಆರ್ಭಟ ಮುಂದುವರೆಯುವ ಸಾಧ್ಯತೆ
  • ಇಂದು ಪಶ್ಚಿಮ ಬಂಗಾಳ, ಸಿಕ್ಕಿಂ, ಅಸ್ಸಾಂ, ಮೇಘಾಲಯದಲ್ಲಿ ವಿಪರೀತ ಮಳೆ
Heavy Rain in Karnataka : ಜುಲೈ 5ರವರೆಗೆ ರಾಜ್ಯದಲ್ಲಿ ಭಾರೀ ಮಳೆ : ಹವಾಮಾನ ಇಲಾಖೆ ಮಾಹಿತಿ title=

ಬೆಂಗಳೂರು : ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಇನ್ನೂ 4 ದಿನ ಮಳೆಯಾಗಲಿದೆ. ಉತ್ತರ ಒಳನಾಡಿನಲ್ಲೂ ಜುಲೈ 5ರವರೆಗೆ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.  

ಕಳೆದ ಒಂದು ವಾರದಿಂದಲೂ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ರಾಯಚೂರು ಭಾಗದಲ್ಲಿ ಭಾರೀ ಮಳೆ(Heavy Rainfall)ಯಾಗಿತ್ತು. ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡು, ಉತ್ತರ ಒಳನಾಡಿನಲ್ಲಿ ಇನ್ನೂ ಮಳೆ ಮುಂದುವರೆದಿದ್ದು, ಜುಲೈ 5ರವರೆಗೂ ವರುಣನ ಆರ್ಭಟ ಮುಂದುವರೆಯುವ ಸಾಧ್ಯತೆಯಿದೆ. ಕರಾವಳಿ ಜಿಲ್ಲೆಗಳಲ್ಲಿ ನಾಲ್ಕೈದು ದಿನಗಳಿಂದ ಮಳೆಯಿಂದ ಹಳದಿ ಅಲರ್ಟ್ ಘೋಷಿಸಲಾಗಿತ್ತು. ಇನ್ನೆರಡು ದಿನ ಕರಾವಳಿಯಲ್ಲಿ ಗುಡುಗು ಸಹಿತ ಮಳೆ ಮುಂದುವರೆಯುವ ಸಾಧ್ಯತೆಯಿದೆ.

ಇದನ್ನೂ ಓದಿ : Heavy Rain : ರಾಜ್ಯಾದ್ಯಂತ ಇಂದು ಭಾರೀ ಮಳೆ : ಹವಾಮಾನ ಇಲಾಖೆ ಮಾಹಿತಿ 

ಮೂರ್ನಾಲ್ಕು ದಿನಗಳಿಂದ ಕಲ್ಯಾಣ ಕರ್ನಾಟಕದಲ್ಲಿ ಮಳೆ(Rainfall) ಹೆಚ್ಚಾಗಿತ್ತು. ಈ ಭಾಗದಲ್ಲಿ ಇಂದಿನಿಂದ ಮಳೆ ಕೊಂಚ ಕಡಿಮೆಯಾಗಲಿದೆ. ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿಯೂ ಇನ್ನು 4 ದಿನ ಮಳೆಯ ಆರ್ಭಟ ಹೆಚ್ಚಾಗಲಿದ್ದು, ಉತ್ತರ ಒಳನಾಡಿನಲ್ಲಿ ಇಂದು ಬೆಳಗ್ಗೆಯಿಂದ ಮೋಡ ಕವಿದ ವಾತಾವರಣ ಇರಲಿದೆ. ಸಂಜೆಯ ಬಳಿಕ ಮಳೆಯಾಗುವ ಸಾಧ್ಯತೆಯಿದೆ. ನೈಋತ್ಯ ಮುಂಗಾರು ದುರ್ಬಲವಾದ್ದರಿಂದ ಕರಾವಳಿಯಲ್ಲಿ ಹೆಚ್ಚು ಮಳೆಯಾಗುತ್ತಿದೆ.

ಇದನ್ನೂ ಓದಿ : ಅಂಜನಾದ್ರಿ ಪರ್ವತ ಅಭಿವೃದ್ಧಿಗೆ ಸರ್ಕಾರ ತೀರ್ಮಾನ : ಸಚಿವ ಸಿ.ಪಿ.ಯೋಗೇಶ್ವರ

ಇಂದು ಪಶ್ಚಿಮ ಬಂಗಾಳ, ಸಿಕ್ಕಿಂ, ಅಸ್ಸಾಂ, ಮೇಘಾಲಯದಲ್ಲಿ ವಿಪರೀತ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ(India Meteorological Department) ಮಾಹಿತಿ ನೀಡಿದೆ. ಮುಂಬೈ, ಮೇಘಾಲಯದಲ್ಲಿ ಮಳೆಯಿಂದ ಸಾಕಷ್ಟು ಅವಾಂತರಗಳು ಸೃಷ್ಟಿಯಾಗಿದ್ದು, ರಸ್ತೆಗಳು ಕೆರೆಗಳಂತಾಗಿವೆ. ಮೇಘಾಲಯದಲ್ಲಿ ಮಳೆಗೆ ಸೇತುವೆಗಳೇ ಕೊಚ್ಚಿಕೊಂಡು ಹೋಗಿವೆ. ದೆಹಲಿಯಲ್ಲಿ ನಿನ್ನೆಯಿಂದ ಮಳೆಯಾಗುತ್ತಿದ್ದು, ಬಿಸಿಲಿನಿಂದ ಕಾದ ನೆಲಕ್ಕೆ ತಂಪೆರೆದಿದೆ.

ಇದನ್ನೂ ಓದಿ : Mohammed Nalapad : ಡಿ.31ರ ಬಳಿಕ 'ಯುವ ಕಾಂಗ್ರೆಸ್‍ ನೂತನ ಅಧ್ಯಕ್ಷ'ರಾಗಿ ನಲಪಾಡ್ ಆಯ್ಕೆ

ಪುದುಚೆರಿ, ಉತ್ತರ ಪ್ರದೇಶ, ಗೋವಾ, ಕರಾವಳಿ ಕರ್ನಾಟಕ(Karnataka), ಅರುಣಾಚಲಪ್ರದೇಶ, ಮಿಜೋರಾಂ, ಪಶ್ಚಿಮ ಬಂಗಾಳ, ಕೇರಳ ಸಿಕ್ಕಿಂ, ಬಿಹಾರ, ಅಸ್ಸಾಂ, ಮೇಘಾಲಯ, ಉತ್ತರಾಖಂಡ, ನಾಗಾಲ್ಯಾಂಡ್, ತಮಿಳುನಾಡು, ತೆಲಂಗಾಣದಲ್ಲಿ ಇಂದು ಮಳೆಯ ಅಬ್ಬರ ಹೆಚ್ಚಾಗಲಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News