ಬೆಂಗಳೂರು: ಕರ್ನಾಟಕದಲ್ಲಿ ನಾಳೆ(ಜೂ.4)ಯಿಂದ 4 ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD)ಮುನ್ಸೂಚನೆ ನೀಡಿದೆ. ಈ ಹಿನ್ನೆಲೆ ಸಿಲಿಕಾನ್ ಸಿಟಿ ಬೆಂಗಳೂರಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಬೆಂಗಳೂರು, ಬೆಂಗಳೂರು ಗ್ರಾಮಾಂತರ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿಯ ಕರಾವಳಿ ಜಿಲ್ಲೆಗಳಲ್ಲಿ ವರುಣನ ಆರ್ಭಟ ಜೋರಾಗಿರಲಿದೆ. ಹಾಸನ, ಶಿವಮೊಗ್ಗ, ರಾಮನಗರ, ಕೊಡಗು ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲೂ ಮಳೆರಾಯನ ಅಬ್ಬರವಿರಲಿದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: ಅತಂತ್ರವಾದಲ್ಲಿ ಖರ್ಗೆ ಮುಖ್ಯಮಂತ್ರಿಯಾಗುವ ಭಯವೇ?: ಕಾಂಗ್ರೆಸ್‌ಗೆ ಬಿಜೆಪಿ ಪ್ರಶ್ನೆ
IMD has announced the onset of South West Monsoon over Coastal Karnataka and most parts of South Interior Karnataka including #Bengaluru today. Northern Limit of Monsoon passes through Karwar, Shivamogga, Chikkamagalur and Bengaluru. #Monsoon2022 pic.twitter.com/E6JMsF0BQ2
— Bengaluru Weather (@BngWeather) May 31, 2022
ಸಾಂಸ್ಕೃತಿಕ ನಗರಿ ಮೈಸೂರು, ಮಂಡ್ಯ, ಚಾಮರಾಜನಗರ ಜಿಲ್ಲೆಗಳಲ್ಲೂ ಭಾರೀ ಮಳೆಯಾಗುವ ಮುನ್ಸೂಚನೆ ಇದೆ. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಗುಡುಗು-ಮಿಂಚು ಸಹಿತ ಮಳೆಯಾಗಲಿದೆ ಎಂದು ಎಚ್ಚರಿಕೆ ನೀಡಲಾಗಿದೆ. ಬೆಂಗಳೂರಿನಲ್ಲಿ ಸಿಡಿಲು ಮತ್ತು ಗುಡುಗು ಸಹಿತ ಮಳೆಯಾಗಲಿದೆ. ಉತ್ತರ ಕರ್ನಾಟಕದ ಬಾಗಲಕೋಟೆ, ಬೀದರ್, ಗದಗ, ಕೊಪ್ಪಳ, ರಾಯಚೂರು ಜಿಲ್ಲೆಗಳಲ್ಲಿ ಸಹ ಮಳೆ ಅಬ್ಬರ ಇರಲಿದೆ ಎಂದು ಹೇಳಲಾಗಿದೆ.
ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ ನೈಋತ್ಯ ಮಾನ್ಸೂನ್ ಪ್ರಾರಂಭವಾಗುವ ಕುರಿತು IMD ಇತ್ತೀಚೆಗಷ್ಟೇ ಪ್ರಕಟಣೆ ಹೊರಡಿಸಿತ್ತು. ಇತ್ತೀಚೆಗಷ್ಟೇ ಸುರಿದ ಭಾರೀ ಮಳೆಯ ಹೊಡೆತಕ್ಕೆ ಸಿಲಿಕಾನ್ ಸಿಟಿ ತತ್ತರಿಸಿ ಹೋಗಿತ್ತು. ಬೆಂಗಳೂರಿನ ಅನೇಕ ಪ್ರದೇಶಗಳಲ್ಲಿ ಮನೆಗಳಿಗೆ ನೀರು ನುಗ್ಗಿ ದೊಡ್ಡ ಅವಾಂತರವೇ ಸೃಷ್ಟಿಯಾಗಿತ್ತು. ಮಳೆಯಿಂದಾಗಿ ಅನೇಕರ ಆಸ್ತಿ-ಪಾಸ್ತಿಗೆ ನಷ್ಟುವುಂಟಾಗಿತ್ತು. ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸೇರಿದಂತೆ ಅನೇಕ ರಾಜಕೀಯ ನಾಯಕರು ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಸಂತ್ರಸ್ತರ ಅಳಲನ್ನು ಆಲಿಸಿದ್ದರು.
ಇದನ್ನೂ ಓದಿ: ಪ್ಲಾಸ್ಟಿಕ್ ಬಳಕೆ ಕುರಿತ ಕಟ್ಟುನಿಟ್ಟಿನ ಕ್ರಮ ಜಾರಿಗೊಳಿಸಿದ ಸರ್ಕಾರ
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.