)
Karnataka Rain Alert: ಬಂಗಾಳಕೊಲ್ಲಿಯಲ್ಲಿ ವಾಯುಭಾರಿ ಕುಸಿತ ಹಿನ್ನೆಲೆಯಲ್ಲಿ ಕರಾವಳಿ, ಉತ್ತರ ಮತ್ತು ದಕ್ಷಿಣ ಒಳನಾಡಿನಲ್ಲಿ ಜೂನ್ 9 ರಿಂದ 15 ರವರೆಗೆ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಭವಿಷ್ಯ ನುಡಿದಿದೆ.
ವಾಯುಭಾರಿ ಕುಸಿತ ಹಿನ್ನೆಲೆಯಲ್ಲಿ ಬಂಗಾಳಕೊಲ್ಲಿಯ ಆಗ್ನೇಯ ಭಾಗದಲ್ಲಿ 5.8 ಅಡಿ ಎತ್ತರಕ್ಕೆ ಎದ್ದಿರುವ ಭಾರೀ ಸುಳಿಗಾಳಿಯಿಂದಗಿ ಕಾರಣ ರಾಜ್ಯಾದ್ಯಂತ ಮುಂದಿನ ಐದಾರು ದಿನಗಳವರೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಅಧಿಕಾರಿ ಸಿ.ಎಸ್ ಪಾಟೀಲ್ ಮಾಹಿತಿ ನೀಡಿದ್ದಾರೆ.
ಜೂನ್ 12ರ ಬಳಿಕ ಭಾರೀ ಮಳೆ:
ಜೂನ್ 12ರಿಂದ ಕರ್ನಾಟಕ ರಾಜ್ಯಾದ್ಯಂತ ಮಳೆಯ ವಿಂಗಡನೆ ಮತ್ತು ತೀವ್ರತೆ ಅಧಿಕವಾಗುವ ಸಾಧ್ಯತೆ ಇದ್ದು, ಗುಡುಗು ಮಿಂಚಿನಿಂದ ಕೂಡಿದ ಭಾರೀ ಮಳೆ ಸಂಭವವಿದೆ. ಗಾಳಿಯ ವೇಗ ಪ್ರತಿ ಗಂಟೆಗೆ 40-50ಕಿ.ಮೀ. ವೇಗದಲ್ಲಿರುತ್ತದೆ ಎಂದು ಐಎಂಡಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಈ ಜಿಲ್ಲೆಗಳಿಗೆ ಯೆಲ್ಲೋ/ಆರೆಂಜ್ ಅಲರ್ಟ್:
ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ದಾವಣಗೆರೆ, ಚಿತ್ರದುರ್ಗ, ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಕೊಪ್ಪಳ, ರಾಯಚೂರು ಜಿಲ್ಲೆಗಳ ಕೆಲವು ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು ಈ ಜಿಲ್ಲೆಗಳಿಗೆ ಜೂನ್ 10 ಮತ್ತು ಜೂನ್ 11ರಂದು ಯೆಲ್ಲೋ ಅಲರ್ಟ್ ಹಾಗೂ ಜೂನ್ 12, 13ರಂದು ಆರೆಂಜ್ ಅಲರ್ಟ್ ಅನ್ನು ಘೋಷಿಸಲಾಗಿದೆ.
ಬೆಂಗಳೂರಿನ ಹವಾಮಾನ ಮುನ್ಸೂಚನೆ:
ಬೆಂಗಳೂರಿನಲ್ಲಿ ಜೂನ್ 09ರಿಂದ ಜೂನ್ 13ರವರೆಗೆ ಗುಡುಗು, ಮಿಂಚಿನ ಸಹಿತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಅಧಿಕಾರಿ ಸಿ.ಎಸ್ ಪಾಟೀಲ್ ಮುನ್ನೆಚ್ಚರಿಕೆ ನೀಡಿದ್ದಾರೆ.
ಇಂದೂ ಸಹ ರಾಜ್ಯಾದ್ಯಂತ ಬಹುತೇಕ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಿದ್ದು ಪ್ರಮುಖವಾಗಿ ಕುಂದಾಪುರದಲ್ಲಿ 8ಸೆಂ.ಮೀ. ದಾವಣಗೆರೆಯಲ್ಲಿ 8ಸೆಂ.ಮೀ., ದಾವಣಗೆರೆ ಜಿಲ್ಲೆಯಲ್ಲಿ 12ಸೆಂ.ಮೀ. ನಷ್ಟು ಮಳೆಯಾಗಿದೆ.
ಕುಂದಾಪುರ, ಉಡುಪಿ ಸೇರಿ ಕಾರ್ಕಳ ಭಾಗಗಳಲ್ಲಿಯೂ ಭಾರೀ ಮಳೆ ಆಗಿದೆ. ಬೀದರ್ ಕಲ್ಬುರ್ಗಿ, ಮಡಿಕೇರಿ ಭಾಗದಲ್ಲಿ ಮಳೆ ಆಗಿದೆ. ಇನ್ನುಳಿದಂತೆ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಕೆಲವು ಕಡೆ ಮಳೆ ಆಗಿದೆ. ಇಂದು ಸಂಜೆ ವೇಳೆಗೆ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಬಹುತೇಕ ಭಾಗಗಳಲ್ಲಿ ಗುಡುಗು, ಮಿಂಚು ಸಹಿತ ಭಾರೀ ಮಳೆ ಸಂಭವವಿದೆ ಎಂದು ಐಎಂಡಿ ಮಾಹಿತಿ ನೀಡಿದೆ.
ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ನಿಮ್ಮ ಜೀ ಕನ್ನಡ ನ್ಯೂಸ್ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್ ಲಭ್ಯ
Sun Direct-292
TATA PLAY- 1664
JIO TV-1334
NXT Digital-30
IN-CABLE-30
U-Digital-162
GTPL-17
Rockline Telecommunications ಬೆಂಗಳೂರು-42
V4 Digital Infotech ಮಂಗಳೂರು-628
Malanad infotech Pvt Ltd-56
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.