ಬೆಂಗಳೂರು : ಬಂಗಾಳಕೊಲ್ಲಿಯ ಆಗ್ನೇಯ ಭಾಗದ ಮೇಲಿನ ವಾಯುಭಾರ ಕುಸಿತದಿಂದಾಗಿ ಆಂಧ್ರಪ್ರದೇಶ, ತಮಿಳುನಾಡು, ಕರ್ನಾಟಕ, ತೆಲಂಗಾಣ ಮತ್ತು ಕೇರಳದಲ್ಲಿ ಇಂದು ಕೂಡ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಳೆಯ ಕಾರಣ ಇಂದು ತಿರುಪತಿ ಬೆಟ್ಟಕ್ಕೆ ಪಾದಯತ್ರೆಯನ್ನು ನಿಷೇಧಿಸಲಾಗಿದೆ.


COMMERCIAL BREAK
SCROLL TO CONTINUE READING

ಈ ಕುರಿತು ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ(Basavaraj Bommai), ರಾಜ್ಯದಲ್ಲಿ ಮಳೆಯಿಂದಾಗಿ ಬೆಳೆ ಹಾನಿ ಕುರಿತು ಸಮೀಕ್ಷೆ ನಡೆಸಲಾಗಿದೆ. ತರಕಾರಿ ಮತ್ತು ಕೃಷಿ ನಷ್ಟದ ಬಗ್ಗೆ ಕೃಷಿ ಇಲಾಖೆ ಜತೆ ಸಮಗ್ರ ಚರ್ಚೆ ನಡೆಸಲಾಗಿದೆ. ಶೀಘ್ರದಲ್ಲೇ ಪರಿಹಾರಿ ನೀಡುವ ಬಗ್ಗೆ ಸಮಾಲೋಚಿಸಲಾಗುವುದು ಎಂದು ತಿಳಿಸಿದ್ದಾರೆ.


ಇದನ್ನೂ ಓದಿ : ಶಿವಮೊಗ್ಗ ರಂಗಾಯಣದಲ್ಲಿ ರಂಗಶಿಕ್ಷಣ ಸರ್ಟಿಫಿಕೇಟ್ ಕೋರ್ಸ್ ಆರಂಭ


ಅರಬ್ಬಿ ಸಮುದ್ರದಲ್ಲಿನ ಮೇಲ್ಮೈ ಸುಳಿಗಾಳಿ, ಟ್ರಫ್‌ ಮತ್ತು ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ಕರಾವಳಿ ಮತ್ತು ಒಳನಾಡಿನಲ್ಲಿ ಮಳೆ(Rain) ಅಬ್ಬರಿಸಿದೆ. ಒಳನಾಡಿನ ಕೆಲ ಜಿಲ್ಲೆಗಳಿಗೆ ಸೀಮಿತವಾಗಿದ್ದ ‘ಯೆಲ್ಲೋ ಅಲರ್ಟ್‌’ ದಕ್ಷಿಣ ಒಳನಾಡಿನ ಎಲ್ಲ ಜಿಲ್ಲೆಗಳಿಗೂ ವಿಸ್ತರಿಸಿದೆ. ಅದೇ ರೀತಿ ಕರಾವಳಿ ಜಿಲ್ಲೆಗಳಿಗೆ ನೀಡಲಾಗಿದ್ದ ಯೆಲ್ಲೋ ಅಲರ್ಟ್‌ ಅನ್ನು 'ಆರೆಂಜ್​ ಅಲರ್ಟ್' ಆಗಿ ಪರಿವರ್ತಿಸಲಾಗಿದೆ. ಕರಾವಳಿಯಲ್ಲಿ ಗಂಟೆಗೆ 40 ರಿಂದ 60 ಕಿಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.


ಮುಂದಿನ ಮೂರು ದಿನ ಭಾರೀ ಮಳೆ ಸಾಧ್ಯತೆ


ಇನ್ನುಳಿದಂತೆ ದಾವಣಗೆರೆ, ಹಾಸನ, ಹಾವೇರಿ, ಕೋಲಾರ, ಶಿವಮೊಗ್ಗ, ಚಾಮರಾಜನಗರ, ಕೊಡಗು,. ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಂದು ಗಂಟೆಗೂ ಅಧಿಕ ಕಾಲ ಮಳೆ(Heavy Rain)ಯಾಗಿದೆ. ಅಕಾಲಿಕ ಮಳೆಯಿಂದಾಗಿ ರೈತರು ಸಂಕಷ್ಟದಲ್ಲಿ ಸಿಲುಕಿದ್ದಾರೆ. ಮುಂದಿನ ಮೂರು ದಿನ ಈ ಭಾಗದಲ್ಲಿ ಮಳೆಯ ಸಿಂಚನ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.


ಇದನ್ನೂ ಓದಿ : ಬೆಂಗಳೂರಿನ ಗೂಳಿಯ ಬೆಲೆ ಕೇಳಿದ್ರೆ ನೀವು ನಿಜಕ್ಕೂ ಶಾಕ್ ಆಗ್ತೀರಾ..!


ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳಯಾಗಿದೆ. ಉತ್ತರ ಕರ್ನಾಟಕ(North Karnataka) ಭಾಗದಲ್ಲಿ ಗುಡುಗು, ಸಿಡಿಲು ಸಹಿತ ಮಳೆಯಾಗಿರುವ ವರದಿಯಾಗಿವೆ. ಕಲಬುರಗಿ, ಕೊಪ್ಪಳ, ಗದಗ, ವಿಜಯಪುರ, ಬಾಗಲಕೋಟೆ ಜಿಲ್ಲೆಗಳಲ್ಲಿ ಭಾರಿ ಮಳೆಯಿಂದ ಅವಾಂತರ ಸೃಷ್ಟಿಯಾಗಿದೆ. ಶನಿವಾರದವರೆಗೂ ಇದೇ ರೀತಿಯ ವಾತಾವರಣವಿರಲಿದೆ.


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.