ಕರ್ನಾಟಕದಲ್ಲಿ ಮುಂದಿನ ಮೂರು ದಿನ ಭಾರೀ ಮಳೆ: 5 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಿದ ಐಎಂಡಿ

Karnataka Rain: ಕರ್ನಾಟಕದಲ್ಲಿ ಜೂನ್​ 2ರವರೆಗೂ ಭಾರೀ ಮಳೆ ಸಾಧ್ಯತೆ ಇದೆ ಎಂದು ಭವಿಷ್ಯ ನುಡಿದಿರುವ ಹವಾಮಾನ ಇಲಾಖೆ ರಾಜ್ಯದ 5 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಿದೆ. 

Written by - Yashaswini V | Last Updated : May 30, 2025, 10:59 AM IST
  • ಕಳೆದ ಒಂದು ವಾರದಿಂದ ಕರ್ನಾಟಕದ ಕರಾವಳಿಯಲ್ಲಿ ಮಳೆಯ ಅಬ್ಬರ
  • ಕರ್ನಾಟಕದಲ್ಲಿ ಜೂನ್​ 2ರವರೆಗೂ ಭಾರಿ ಮಳೆ
  • 5 ಜಿಲ್ಲೆಗಳಿಗೆ ರೆಡ್ ಅಲರ್ಟ್​ ಘೋಷಣೆ
ಕರ್ನಾಟಕದಲ್ಲಿ ಮುಂದಿನ ಮೂರು ದಿನ ಭಾರೀ ಮಳೆ: 5 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಿದ ಐಎಂಡಿ

Karnataka Rain Alert: ಕರ್ನಾಟಕದಲ್ಲಿ ಮುಂದಿನ ಮೂರು ದಿನಗಳವರೆಗೆ (ಜೂನ್ 02) ಭಾರೀ ಮಲೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ರಾಜ್ಯದ ಕೆಲವು ಭಾಗಗಳಲ್ಲಿ ಧಾರಾಕಾರ ಮಳೆ ಬಗ್ಗೆ ಭವಿಷ್ಯ ನುಡಿದಿರುವ ಐಎಂಡಿ ಐದು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಿದ್ದು, ಕೆಲವೆಡೆ ಯೆಲ್ಲೋ ಅಲರ್ಟ್ ನೀಡಿದೆ. 

Add Zee News as a Preferred Source

ಈ ಐದು ಜಿಲ್ಲೆಗಳಿಗೆ ರೆಡ್ ಅಲರ್ಟ್: 
ರಾಜ್ಯದಲ್ಲಿ ಮುಂಗಾರು ಮಳೆ ಚುರುಕುಗೊಂಡಿರುವುದರಿಂದ ಕೆಲವು ಭಾಗಗಳಲ್ಲಿ ಧಾರಾಕಾರ ಮಲೆಯಾಗುವ ನಿರೀಕ್ಷೆಯಿದೆ ಎಂದಿರುವ ಭಾರತೀಯ ಹವಾಮಾನ ಇಲಾಖೆ ಜೂನ್ 02ರವರೆಗೆ ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಿ ಆದೇಶ ಹೊರಡಿಸಿದೆ. 

ಇದೇ ವೇಳೆ  ಶಿವಮೊಗ್ಗ, ಮೈಸೂರು, ಕಲಬುರಗಿ, ಬೀದರ್ ಜಿಲ್ಲೆಗಳಿಗೆ ಸಾಧಾರಣದಿಂದ ಭಾರೀ ಮಳೆ ಸಂಭವದ ಬಗ್ಗೆ ಮುನ್ಸೂಚನೆ ನೀಡಿರುವ ಭಾರತೀಯ ಹವಾಮಾನ ಇಲಾಖೆ ಇಲ್ಲೆಲ್ಲಾ ಯೆಲ್ಲೋ ಅಲರ್ಟ್ ಘೋಷಿಸಿದ್ದು, ಉತ್ತರ ಕನ್ನಡ ಸೇರಿದಂತೆ ಆ ಭಾಗದ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಿದೆ. 

ಇದನ್ನೂ ಓದಿ- 'ದಿವ್ಯ ದರ್ಶನ': ಬೆಂಗಳೂರಿನ ಪ್ರಸಿದ್ದ ದೇವಾಲಯಗಳ ದರ್ಶನಕ್ಕಾಗಿ ಹೊಸ ವಿಕೇಂಡ್ ಟೂರ್ ಪ್ಯಾಕೇಜ್ ಘೋಷಿಸಿದ ಬಿಎಂಟಿಸಿ 

ಬೆಂಗಳೂರು ಮಳೆ: 
ಕಳೆದೊಂದು ವಾರದಿಂದ ರಾಜ್ಯದ ಮಲೆನಾಡು ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗಿ ಅವಾಂತರ ಸೃಷ್ಟಿಯಾಗಿದೆ. ಆದಾಗ್ಯೂ, ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಳೆದ ವಾರದ ಆರಂಭದಲ್ಲಿ ಎರಡು ದಿನ ಭಾರೀ ಮಳೆಯಾಗಿತ್ತು. ನಂತರ ಆಗೊಮ್ಮೆ, ಈಗೊಮ್ಮೆ ಸಾಧಾರಣ ಮಳೆಯಾಗುತ್ತಿದ್ದು ಕೆಲಸಕ್ಕಾಗಿ ಹೊರಹೋಗುವವರು ಹಾಗೂ ಶಾಲಾ ಕಾಲೇಜುಗಳಿಗೆ ತೆರಳುವ ಮಕ್ಕಳಿಗೆ ತೊಂದರೆಯಾಗುತ್ತಿದೆ.

ತಗ್ಗಲಿದೆ ಮುಂಗಾರು ಅಬ್ಬರ: 
ಲಭ್ಯವಿರುವ ಮಾಹಿತಿಗಳ ಪ್ರಕಾರ, ನಾಳೆಯಿಂದ ಮುಂಗಾರು ಮಳೆ ಪ್ರಮಾಣ ಇಳಿಮುಖವಾಗಲಿದ್ದು ಮೇ 31ರಂದು ದ.ಕ.ಜಿಲ್ಲೆಗೆ ಮಾತ್ರ ಎಲ್ಲೋ ಅಲರ್ಟ್ ನೀಡಲಾಗಿದೆ. ಉಳಿದಂತೆ ರಾಜ್ಯಾದ್ಯಂತ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ ಎನ್ನಲಾಗಿದೆ. 

ಬೆಂಗಳೂರಿನಲ್ಲಿ ಈ ವಾರ ಸಾಧಾರಣ ಮಳೆ, ಮೋಡ ಮುಸುಕಿದ ವಾತಾವರಣ, ಆಗಾಗ ಕೆಲವೆಡೆ ಉತ್ತಮ ಮಳೆ ಸಾಧ್ಯತೆ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 

ಇದನ್ನೂ ಓದಿ- ಕರುನಾಡಲ್ಲಿ ನೂರರ ಗಡಿ ದಾಟಿದ ಕೊರೋನಾ: ಕೋವಿಡ್-19 ನಡುವೆ ಡೆಂಘಿ, ಚಿಕುನ್ ಗುನ್ಯಾ ಟೆನ್ಷನ್

ಶಾಲೆಗಳಿಗೆ ಇಂದು ರಜೆ: 
ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಮಳೆ ಅಬ್ಬರ ಮುಂದುವರೆದಿದ್ದು ಸದ್ಯ  ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ಮುನ್ನೆಚ್ಚರಿಕಾ ಕ್ರಮವಾಗಿ ಶಾಲೆಗಳು ಮತ್ತು ಅಂಗನವಾಡಿಗಳಿಗೆ ರಜೆ ಘೋಷಿಸಲಾಗಿದೆ. 

ಭಾರೀ ಮಳೆ ಸಂಭವವಿರುವುದರಿಂದ ನದಿ, ಸಮುದ್ರ ತೀರಗಳ ಬಳಿ ಹೋಗದಂತೆ ಹಾಗೂ ಸಾರ್ವಜನಿಕರು ಜಾಗರೂಕರಾಗಿರಲು ಜಿಲ್ಲಾಡಳಿತ ಸೂಚಿಸಿದೆ. 

ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

ನಿಮ್ಮ ಜೀ ಕನ್ನಡ ನ್ಯೂಸ್‌ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್‌ ಲಭ್ಯ 
Sun Direct-292 
TATA PLAY- 1664 
JIO TV-1334 
NXT Digital-30 
IN-CABLE-30 
U-Digital-162 
GTPL-17 
Rockline Telecommunications ಬೆಂಗಳೂರು-42
 V4 Digital Infotech ಮಂಗಳೂರು-628
Malanad infotech Pvt Ltd-56 
Metrocast ಬೆಂಗಳೂರು, ಬೆಳಗಾವಿ-830 ಲಭ್ಯ. 

About the Author

Yashaswini V

ಯಶಸ್ವಿನಿ ವಿ (Yashaswini V) Zee ಕನ್ನಡ ಡಿಜಿಟಲ್ ಮಾಧ್ಯಮದ ಮೊದಲ ಪತ್ರಕರ್ತೆ. 2017 ರಿಂದ Zee ಕನ್ನಡ‌ ನ್ಯೂಸ್‌ ಡಿಜಿಟಲ್‌ ಮಾಧ್ಯಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಇವರು ಪ್ರಸ್ತುತ Zee ಕನ್ನಡ ನ್ಯೂಸ್‌ನಲ್ಲಿ ಸಹಾಯಕ ಸುದ್ದಿ ಸಂಪಾದಕಿಯಾಗಿ ಕೆಲಸ ಮಾಡುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಹತ್ತು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಇವರು ದೆಹಲಿ ಮತ್ತು ಬೆಂಗಳೂರಿನಲ್ಲಿ ಕೆಲಸ ಮಾಡಿದ್ದಾರೆ. ತಮ್ಮ ಓದುಗರ ಆಸಕ್ತಿಗಳು ಮತ್ತು ಅಗತ್ಯಗಳನ್ನು ಗೌರವಿಸುತ್ತಾರೆ. ...Read More

Trending News