Rain Alert: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಇಂದಿನಿಂದ 3 ದಿನ ಮಳೆ ಎಚ್ಚರಿಕೆ
Karnataka Weather Update: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ಇಂದಿನಿಂದ ಮೂರು ದಿನಗಳ ಕಾಲ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
Karnataka Weather Update: ಕಳೆದ ಕೆಲವು ದಿನಗಳಿಂದ ಬಿಡುವು ನೀಡಿದ್ದ ಮಳೆರಾಯ ಇಂದಿನಿಂದ ಮುಂದಿನ ಮೂರು ದಿನಗಳ ಕಾಲ ಮತ್ತೆ ರಾಜ್ಯದ ಜನತೆಯನ್ನು ಕಾಡಲಿದ್ದಾನೆ. ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ಇಂದಿನಿಂದ ಮೂರು ದಿನಗಳ ಕಾಲ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ರಾಜ್ಯ ರಾಜಧಾನಿ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇಂದಿನಿಂದ (ನವೆಂಬರ್ 22) ಮುಂದಿನ ಮೂರು ದಿನಗಳವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಬೆಂಗಳೂರು ಮಾತ್ರವಲ್ಲದೆ, ಕರಾವಳಿ ಕರ್ನಾಟಕ, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಬಹುತೇಕ ಭಾಗಗಳಲ್ಲಿ ಇಂದಿನಿಂದ (ನವೆಂಬರ್ 22) ಗುರುವಾರದವರೆಗೆ (ನವೆಂಬರ್ 24) ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಐಎಂಡಿ ಎಚ್ಚರಿಕೆ ನೀಡಿದೆ.
ಇದನ್ನೂ ಓದಿ- KSRTC ಸಿಬ್ಬಂದಿಗಳಿಗೆ ನೂತನ ಬೊಲೆರೋ ವಾಹನ: ಅಪಘಾತ ಸಂದರ್ಭಗಳಲ್ಲಿ ಬಳಕೆ
ಇಂದಿನಿಂದ ಮೂರು ದಿನ ಈ ಜಿಲ್ಲೆಗಳಲ್ಲಿ ಅಬ್ಬರಿಸಲಿದ್ದಾನೆ ವರುಣ:
ಹವಾಮಾನ ಇಲಾಖೆ ನೀಡಿರುವ ಮುನ್ಸೂಚನೆಯ ಪ್ರಕಾರ, ರಾಜ್ಯದ ಈ ಜಿಲ್ಲೆಗಳಲ್ಲಿ ಮುಂಬರುವ ಮೂರು ದಿನಗಳವರೆಗೆ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು, ಬೆಂಗಳೂರು, ಬೆಂ,ಗ್ರಾಮಾಂತರ, ಮಂಡ್ಯ, ರಾಮನಗರ, ಮೈಸೂರು , ತುಮಕೂರು, ವಿಜಯಪುರ ಹಾಗೂ ಹಾವೇರಿ ಸೇರಿದಂತೆ ರಾಜ್ಯದ ಇತರ ಜಿಲ್ಲೆಗಳಲ್ಲಿ ಇಂದಿನಿಂದ ಮತ್ತೆ ಮಳೆಯಾಗುವ ಸಾಧ್ಯತೆ ಇದೆ ಎಂದು ಮಾಹಿತಿ ಲಭ್ಯವಾಗಿದೆ.
ಭಾರೀ ಮಳೆಯ ಎಚ್ಚರಿಕೆಯ ಹಿನ್ನೆಲೆಯಲ್ಲಿ ಮುಂದಿನ ಎರಡು ದಿನಗಳ ಕಾಲ ನೈಋತ್ಯ ಮತ್ತು ಪಕ್ಕದ ಆಗ್ನೇಯ ಮತ್ತು ಪಶ್ಚಿಮ-ಮಧ್ಯ ಬಂಗಾಳಕೊಲ್ಲಿಯಲ್ಲಿ ಮೀನುಗಾರಿಕೆಗೆ ತೆರಳದಂತೆ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ.
ಇದನ್ನೂ ಓದಿ- ಸ್ಮಶಾನಕ್ಕೆ ಹೋಗುವುದಕ್ಕೆ ದಾರಿ ಇಲ್ಲವೆಂದು ರಸ್ತೆ ಮಧ್ಯದಲ್ಲಿ ಶವ ಇಟ್ಟು ಪ್ರತಿಭಟನೆಗೆ ಕುಳಿತ ಗ್ರಾಮಸ್ಥರು
ಇದಲ್ಲದೆ, ಕಳೆದ ಒಂದು ವಾರದಿಂದ ರಾಜ್ಯದಲ್ಲಿ ಚುಮು ಚುಮು ಚಳಿಯೂ ಹೆಚ್ಚಾಗಿದ್ದು ಮಳೆಯಿಂದಾಗಿ ಕನಿಷ್ಠ ತಾಪಮಾನ ಸಾಮಾನ್ಯಕ್ಕಿಂತಲೂ ಕಡಿಮೆಯಾಗುವ ಸಾಧ್ಯತೆ ಇದೇ ಎಂದು ಹವಾಮಾನ ಇಲಾಖೆ ತಿಳಿಸಿದೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.