ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಮತ್ತೊಂದು ಚಂಡಮಾರುತ ಬೀಸುವ ಸಾಧ್ಯತೆ ಹಿನ್ನೆಲೆಯಲ್ಲಿ ಮುಂದಿನ ೫ ದಿನಗಳ ಕಾಲ ಕರ್ನಾಟಕ ಸೇರಿದಂತೆ ದಕ್ಷಿಣ ರಾಜ್ಯಗಳ ವಿವಿಧ ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇದನ್ನೂ ಓದಿ: ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ಮಹತ್ವದ ನಿರ್ಧಾರ : ಕೃಷಿ ಕಾನೂನು ಹಿಂಪಡೆಯಲು ಸಂಪುಟ ಅನುಮೋದನೆ!
ಕರ್ನಾಟಕದ ದಕ್ಷಿಣ ಒಳನಾಡಿನ ಬಹುತೇಕ ಕಡೆ ಮಳೆ ಬೀಳಲಿದೆ. ಬೆಂಗಳೂರು ನಗರ, ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ರಾಮನಗರ, ಮಂಡ್ಯ, ಮೈಸೂರು ಸೇರಿದಂತೆ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಸೂಚನೆ ನೀಡಿದೆ.
ಬಂಗಾಳಕೊಲ್ಲಿಯಲ್ಲಿ ಮತ್ತೊಂದು ಚಂಡಮಾರುತ ಬೀಸುವ ಸಾಧ್ಯತೆ ಹಿನ್ನೆಲೆಯಲ್ಲಿ ಮುಂದಿನ ೫ ದಿನಗಳ ಕಾಲ ಕರ್ನಾಟಕ ಸೇರಿದಂತೆ ದಕ್ಷಿಣ ರಾಜ್ಯಗಳ ವಿವಿಧ ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.#WeatherForecast
— AIR News Bangalore (@airnews_bang) November 24, 2021
ಇದನ್ನೂ ಓದಿ: Vedio : ಬಟ್ಟೆ ಒಣಗಿಸಲು ಬಾಲ್ಕನಿಗೆ ಬಂದು 19ನೇ ಮಹಡಿಯಿಂದ ಜಾರಿ ಬಿದ್ದ ವೃದ್ದೆ ಮುಂದೆ...?
ಮುಂದಿನ ೫ ದಿನ ರಾಜ್ಯದಲ್ಲಿ ಮಳೆ ಬೀಳುವ ಸಾಧ್ಯತೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಹಾಸನದಲ್ಲಿ ಕಂದಾಯ ಸಚಿವ ಆರ್. ಅಶೋಕ ಸೂಚನೆ ನೀಡಿದ್ದಾರೆ. ರೈತರು ಸಹ ಹವಾಮಾನ ವೈಪರೀತ್ಯ ಗಮನಿಸಿ ಬೆಳೆ ಕೊಯ್ಲು ಹಾಗೂ ಬೆಳೆ ಸಂರಕ್ಷಣೆಗೆ ಗಮನ ಹರಿಸಬೇಕೆಂದು ಮನವಿ ಮಾಡಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.