ಭಾರೀ ಮಳೆ: ರಾಜ್ಯದ 4 ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ, ದೇವಿಮನೆ ಘಟ್ಟದಲ್ಲಿ ಗುಡ್ಡಕುಸಿತ ವಾಹನ ಸಂಚಾರ ಬಂದ್

Heavy Rain: ರಾಜ್ಯಾದ್ಯಂತ ಬಹುತೇಕ ಜಿಲ್ಲೆಗಳಲ್ಲಿ ಮುಂಗಾರು ಅಬ್ಬರ ಜೋರಾಗಿದೆ. ಗುಡುಗು-ಮಿಂಚು ಸಹಿತ ಭಾರೀ ಮಳೆ ಬಗ್ಗೆ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದ್ದು, ನಾಲ್ಕು ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. 

Written by - Yashaswini V | Last Updated : Jun 16, 2025, 10:00 AM IST
  • ರಾಜ್ಯದಲ್ಲಿ ಇಂದು ಕೂಡ ಮುಂದುವರೆದ ಮಳೆ
  • ಭಾರೀ ಮಳೆ ಹಿನ್ನೆಲೆ ರಾಜ್ಯದ ಹಲವು ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಣೆ
  • ಕೆಲವು ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ
ಭಾರೀ ಮಳೆ: ರಾಜ್ಯದ 4 ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ, ದೇವಿಮನೆ ಘಟ್ಟದಲ್ಲಿ ಗುಡ್ಡಕುಸಿತ ವಾಹನ ಸಂಚಾರ ಬಂದ್

Rain Alert: ಕರ್ನಾಟಕದಲ್ಲಿ ಮುಂಗಾರು ಆರ್ಭಟ ಹೆಚ್ಚಾಗಿದ್ದು ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಈ ಹಿನ್ನಲೆಯಲ್ಲಿ ಕೆಲವು ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಇದಲ್ಲದೆ, ವರುಣಾರ್ಭಟಕ್ಕೆ ಕಾರವಾರದ ದೇವೀಮನೆ ಘಟ್ಟದಲ್ಲಿ ಗುಡ್ಡ ಕುಸಿತ ಉಂಟಾಗಿದ್ದರೆ, ಉತ್ತರ ಕನ್ನಡ ಜಿಲ್ಲೆಯಲ್ಲಿ ಬೃಹದಾಕಾರದ ಮರವೊಂದು ಧರೆಗುರುಳಿದ ಪರಿಣಾಮ ಹೆದ್ದಾರಿ ಸಂಚಾರ ಬಂದ್ ಮಾಡಲಾಗಿದೆ. 

Add Zee News as a Preferred Source

ಈ ಜಿಲ್ಲೆಗಳಲ್ಲಿ ಭಾರೀ ಮಳೆ: 
ಕರ್ನಾಟಕದ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಉತ್ತರ ಕನ್ನಡ, ಉಡುಪಿ, ಮಂಗಳೂರು, ದಕ್ಷಿಣ ಕನ್ನಡ, ಕೊಡಗು, ಶಿವಮೊಗ್ಗ ಸೇರಿದಂತೆ ಬಹುತೇಕ ಭಾಗಗಳಲ್ಲಿ ಗುಡುಗು ಮಿಂಚು ಸಹಿತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆಯ ಮುನ್ನೆಚ್ಚರಿಕೆ ನೀಡಿದೆ. 

ಭಾರೀ ಮಳೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ರಾಮನಗರ, ಚಾಮರಾಜನಗರ ಸೇರಿದಂತೆ ಉಳಿದ ಎಲ್ಲಾ ಜಿಲ್ಲೆಗೂ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ. 

ಇದನ್ನೂ ಓದಿ- ಐವತ್ತಕ್ಕೂ ಹೆಚ್ಚು ಮೊಸಳೆ ಮರಿಗಳನ್ನು ರಕ್ಷಿಸಿದ ಗ್ರಾಮಸ್ಥರು: ರೋಚಕ ಫೋಟೋಸ್ ವೈರಲ್

ರಾಜ್ಯದ 4 ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ: 
ಚಿಕ್ಕಮಗಳೂರು, ಕಳಸ, ಮೂಡಿಗೆರೆ, ಶೃಂಗೇರಿ, ಎನ್. ಆರ್​.ಪುರ ಮತ್ತು ಕೊಪ್ಪ ತಾಲೂಕಿನಲ್ಲಿನ ಶಾಲೆಗಳಿಗೆ ರಜೆ ಘೋಷಿಸಿ ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶ ಹೊರಡಿಸಿದ್ದಾರೆ.

ಉಡುಪಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆಯಾಗುತ್ತಿರುವುದರಿಂದ ಅಂಗನವಾಡಿಯಿಂದ ಫ್ರೌಡ ಶಾಲೆವರೆಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ವಿದ್ಯಾ ಕುಮಾರಿ.ಕೆ ಆದೇಶ ಹೊರಡಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆ ಆರ್ಭಟ ಮುಂದುವರಿದ್ದು, ಈ ಭಾಗದಲ್ಲೂ ಎಡಬಿಡದೆ ಮಲೆಯಾಗುತ್ತಿರುವುದರಿಂದ, ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು, ಬಂಟ್ವಾಳ, ಮೂಡಬಿದ್ರೆ, ಮುಲ್ಕಿ ಮತ್ತು ಉಳ್ಳಾಲ ಐದು ತಾಲೂಕಿನಲ್ಲಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಈ ಸಂಬಂಧ ಆದೇಶ ಹೊರಡಿಸಿರುವ ಜಿಲ್ಲಾಧಿಕಾರಿ ಮುಲೈ ಮುಗಿಲನ್  ಅಂಗನವಾಡಿಯಿಂದ ಪ್ರೌಢಶಾಲೆವರೆಗೆ ರಜೆ ಘೋಷಿಸಿದ್ದಾರೆ.

ಕೊಡಗಿನಲ್ಲಿಯೂ ಕೂಡ ಬೆಂಬಿಡದೆ ಮಳೆಯಾಗುತ್ತಿದ್ದು, ಜಿಲ್ಲೆಯ ಅಂಗನವಾಡಿ, ಶಾಲೆ, ಕಾಲೇಜುಗಳಿಗೆ ಜಿಲ್ಲಾಧಿಕಾರಿ ವೆಂಕಟರಾಜಾ ರಜೆ ನೀಡಿ ಆದೇಶ ಹೊರಡಿಸಿದ್ದಾರೆ. 

ಇದನ್ನೂ ಓದಿ- ರಾಜ್ಯದಲ್ಲಿ ಜನೌಷಧಿ ಕೇಂದ್ರಗಳಿಗೆ ಬ್ರೇಕ್;‌ ರಾಜ್ಯ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

ದೇವಿಮನೆ ಘಟ್ಟದಲ್ಲಿ ಗುಡ್ಡಕುಸಿತ: 
ಕಾರವಾರದ ದೇವಿಮನೆ ಘಟ್ಟದಲ್ಲಿ ಗುಡ್ಡಕುಸಿತ ಹಿನ್ನಲೆಯಲ್ಲಿ ಕುಮಟಾ ಶಿರಸಿ ಹೆದ್ದಾರಿಯಲ್ಲೆ ಸಂಜೆ ಬಳಿಕ ವಾಹನ ಸಂಚಾರ ನಿಷೇಧಿಸಲಾಗಿದೆ. ಸಂಜೆ 6ಗಂಟೆಯಿಂದ ಬೆಳಿಗ್ಗೆ 6 ಗಂಟೆ ತನಕ ಎಲ್ಲಾ ವಾಹನ ಸಂಚಾರ್ ಬಂದ್ ಮಾಡಲಾಗಿದ್ದು ಹೆದ್ದಾರಿಯ ಎರಡು ಕಡೆಯಲ್ಲಿ ಬ್ಯಾರಿಕೇಡ್ ಹಾಕಲಾಗಿದೆ. ನಿನ್ನೆ ಕುಸಿತವಾಗಿದ್ದ ಗುಡ್ಡದ ಮಣ್ಣು ತೆರವು ಗೊಳಿಸಿರುವ ಜಿಲ್ಲಾಡಳಿತ   ದೇವಿಮನೆ ಘಟ್ಟದಲ್ಲಿ ಪದೆ ಪದೆ ಗುಡ್ಡ ಕುಸಿಯುತ್ತಿರುವ ಹಿನ್ನಲೆಯಲ್ಲಿ ಸುರಕ್ಷತಾ ದೃಷ್ಟಿಯಿಂದ ರಾತ್ರಿ ವೇಳೆ ವಾಹನ ಸಂಚಾರ ‌ನಿಷೇಧಿಸಿದೆ.  

ಹೆದ್ದಾರಿ ಸಂಚಾರ ಬಂದ್: 
ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆಯ ಅಬ್ಬರ ಜೋರಾಗಿದ್ದು, ವರುಣಾರ್ಭಟಕ್ಕೆ ಬೃಹತ್ ಗಾತ್ರದ ಮರವೊಂದು ವಿದ್ಯುತ್ ಕಂಬದ ಸಮೇತ ಹೆದ್ದಾರಿಗೆ ಉರುಳಿ ಬಿದ್ದಿರುವ ಪರಿಣಾಮ ಹೆದ್ದಾರಿ ಸಂಚಾರ ಬಂದ್ ಮಾಡಲಾಗಿದೆ. ಹೊನ್ನಾವರದ ಬಾಳೆಗದ್ದೆ ಗ್ರಾಮದ ಹೆದ್ದಾರಿ  ಬಳಿ ಘಟನೆ ನಡೆದಿದ್ದು, ಬೆಂಗಳೂರು - ಹೊನ್ನವರ ಸಂಚಾರ ಸಂಪೂರ್ಣ ಬಂದ್ ಮಾಡಲಾಗಿದೆ. ರಸ್ತೆಯ ಎರಡೂ ಬದಿ ಸಾಲುಗಟ್ಟಿ ನಿಂತಿರುವ ವಾಹನಗಳು ಹೊನ್ನಾವರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. 

ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

ನಿಮ್ಮ ಜೀ ಕನ್ನಡ ನ್ಯೂಸ್‌ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್‌ ಲಭ್ಯ 
Sun Direct-292 
TATA PLAY- 1664 
JIO TV-1334 
NXT Digital-30 
IN-CABLE-30 
U-Digital-162 
GTPL-17 
Rockline Telecommunications ಬೆಂಗಳೂರು-42
 V4 Digital Infotech ಮಂಗಳೂರು-628
Malanad infotech Pvt Ltd-56 
Metrocast ಬೆಂಗಳೂರು, ಬೆಳಗಾವಿ-830 ಲಭ್ಯ. 

About the Author

Yashaswini V

ಯಶಸ್ವಿನಿ ವಿ (Yashaswini V) Zee ಕನ್ನಡ ಡಿಜಿಟಲ್ ಮಾಧ್ಯಮದ ಮೊದಲ ಪತ್ರಕರ್ತೆ. 2017 ರಿಂದ Zee ಕನ್ನಡ‌ ನ್ಯೂಸ್‌ ಡಿಜಿಟಲ್‌ ಮಾಧ್ಯಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಇವರು ಪ್ರಸ್ತುತ Zee ಕನ್ನಡ ನ್ಯೂಸ್‌ನಲ್ಲಿ ಸಹಾಯಕ ಸುದ್ದಿ ಸಂಪಾದಕಿಯಾಗಿ ಕೆಲಸ ಮಾಡುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಹತ್ತು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಇವರು ದೆಹಲಿ ಮತ್ತು ಬೆಂಗಳೂರಿನಲ್ಲಿ ಕೆಲಸ ಮಾಡಿದ್ದಾರೆ. ತಮ್ಮ ಓದುಗರ ಆಸಕ್ತಿಗಳು ಮತ್ತು ಅಗತ್ಯಗಳನ್ನು ಗೌರವಿಸುತ್ತಾರೆ. ...Read More

Trending News