ಬೆಂಗಳೂರು-ಪುಣೆ ಮಾರ್ಗದಲ್ಲಿ 10 ಕಿಮೀ ಟ್ರಾಫಿಕ್ ಜಾಮ್..!

ತುಮಕೂರು-ಬೆಂಗಳೂರು ಮಾರ್ಗದ ಕ್ಯಾತ್ಸಂದ್ರದಿಂದ ತುಮಕೂರು-ಶಿರಾ ಮಾರ್ಗದ ಕೋರಾ ಗ್ರಾಮದವರೆಗೂ ವಾಹನಗಳು ಸಾಲುಗಟ್ಟಿ ನಿಂತಿವೆ.

Written by - Zee Kannada News Desk | Last Updated : Oct 20, 2022, 07:03 PM IST
  • ತುಮಕೂರಿನ ಹೆಬ್ಬಾಕ ಕೆರೆಯ ಕೋಡಿ ಒಡೆದು ರಾಷ್ಟ್ರೀಯ ಹೆದ್ದಾರಿ 48ಕ್ಕೆ ನುಗ್ಗಿದ ನೀರು
  • ಊರುಕೇರಿ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ ಮೇಲೆ ಹರಿಯುತ್ತಿರುವ ಕೋಡಿ ನೀರು
  • ಸುಮಾರು 10 ಕಿ.ಮೀ ಉದ್ದ ವಾಹನಗಳು ಸಾಲುಗಟ್ಟಿರುವುದರಿಂದ ಪ್ರಯಾಣಿಕರು ಪರದಾಟ
ಬೆಂಗಳೂರು-ಪುಣೆ ಮಾರ್ಗದಲ್ಲಿ 10 ಕಿಮೀ ಟ್ರಾಫಿಕ್ ಜಾಮ್..! title=
10 ಕಿಮೀ ಟ್ರಾಫಿಕ್ ಜಾಮ್..!

ತುಮಕೂರು: ಭಾರೀ ಮಳೆಯ ಪರಿಣಾಮ ತುಮಕೂರಿನ ಹೆಬ್ಬಾಕ ಕೆರೆಯ ಕೋಡಿ ನೀರು ಹರಿದು ರಾಷ್ಟ್ರೀಯ ಹೆದ್ದಾರಿ 48ಕ್ಕೆ ನುಗ್ಗಿದ್ದು ಸಂಚಾರ ಅಸ್ತವ್ಯಸ್ತಗೊಂಡಿದೆ.

ಊರುಕೇರಿ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ ಮೇಲೆ ಕೋಡಿ ನೀರು ಹರಿಯುತ್ತಿದ್ದು, ವಾಹನ ಸವಾರರು ಪರದಾಡುವಂತಾಗಿದೆ. ರಸ್ತೆ ಮೇಲೆ ನೀರು ಹರಿಯುತ್ತಿರುವುದರಿಂದ ತುಮಕೂರು-ಬೆಂಗಳೂರು ಮಾರ್ಗದ ಕ್ಯಾತ್ಸಂದ್ರದಿಂದ ತುಮಕೂರು-ಶಿರಾ ಮಾರ್ಗದ ಕೋರಾ ಗ್ರಾಮದವರೆಗೂ ವಾಹನಗಳು ಸಾಲುಗಟ್ಟಿ ನಿಂತಿವೆ.

ಇದನ್ನೂ ಓದಿ: ಎಸ್.ಸಿ ಎಸ್.ಟಿ ಮೀಸಲಾತಿ ಹೆಚ್ಚಳಕ್ಕೆ ಸುಗ್ರೀವಾಜ್ಞೆ

ಸುಮಾರು 10 ಕಿ.ಮೀ ಉದ್ದ ವಾಹನಗಳು ಸಾಲುಗಟ್ಟಿರುವುದರಿಂದ ಪ್ರಯಾಣಿಕರು ಪರದಾಡುವಂತಾಗಿದೆ. ಈ ಹೆದ್ದಾರಿಯು ರಾಜಧಾನಿ ಬೆಂಗಳೂರಿನೊಂದಿಗೆ ಚಿತ್ರದುರ್ಗ, ದಾವಣಗೆರೆ ಸೇರಿ ಕಲ್ಯಾಣ ಕರ್ನಾಟಕ ಮತ್ತು ಮುಂಬೈ ಕರ್ನಾಟಕದ ಬಹುತೇಕ ಜಿಲ್ಲಾ ಕೇಂದ್ರಗಳನ್ನು ಸಂಪರ್ಕಿಸುತ್ತದೆ.

ಗಂಟೆಗಟ್ಟಲೇ ಟ್ರಾಫಿಕ್ ಜಾಮ್​ನಲ್ಲಿ ಸಿಲುಕಿದ ಚಾಲಕರು ಮತ್ತು ವಾಹನ ಪಡಬಾರದ ಪಡಿಪಾಟಲು ಪಟ್ಟಿದ್ದಾರೆ. ಸಂಚಾರ ವ್ಯವಸ್ಥೆಯನ್ನು ಮತ್ತೆ ತಹಬದಿಗೆ ತರಲು ಪೊಲೀಸರು ಹರಸಾಹಸಪಡುತ್ತಿದ್ದಾರೆ. ಊರುಕೆರೆ-ಹೆಬ್ಬಾಕ ನಡುವಿಣ ರಸ್ತೆಯ ಸಂಪರ್ಕ ಸಂಪೂರ್ಣ ಕಡಿತಗೊಂಡಿದೆ. ಗ್ರಾಮದ ಆಂಜನೇಯ ದೇಗುಲ, ಕೆರೆ ಅಂಚಿನ‌ ಮನೆಗಳು ನೀರಿನಲ್ಲಿ ಮುಳುಗಡೆಯಾಗಿವೆ. ಹೆಬ್ಬಾಕ, ನರಸಾಪುರ, ಊರುಕೆರೆ ಭಾಗದ ಬಹುತೇಕ ಅಡಿಕೆ ಹಾಗೂ ತೆಂಗು ತೋಟಗಳು ಜಲಾವೃತಗೊಂಡಿವೆ. ಪರಿಣಾಮ ಸುತ್ತಮುತ್ತಲ ಗ್ರಾಮಸ್ಥರು ಇಕ್ಕಿಟ್ಟಿಗೆ ಸಿಲುಕಿದ್ದು, ಪರದಾಡುತ್ತಿದ್ದಾರೆ.

ಇದನ್ನೂ ಓದಿ: ಬಾಲನ್ಯಾಯ ತಿದ್ದುಪಡಿ ಕಾಯ್ದೆ 2021 ಪಾಲಿಸಲು ಸರ್ಕಾರ ಸೂಚನೆ

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News