ಬೆಂಗಳೂರು: ಅಮರನಾಥದಲ್ಲಿ ಮೇಘಸ್ಪೋಟದಿಂದ 15 ಜನ ಸಾವನ್ನಪ್ಪಿದ್ದು,  ಪ್ರಾಥಮಿಕ ಮಾಹಿತಿಯ ಪ್ರಕಾರ ನೂರಕ್ಕೂ ಹೆಚ್ಚು ಜನ ಕನ್ನಡಿಗರು ಅಮರನಾಥ ಯಾತ್ರೆಯಲ್ಲಿದ್ದಾರೆ. ಕನ್ನಡಿಗರ ರಕ್ಷಣೆಗೆ ಸರ್ಕಾರ ಕ್ರಮ ಕೈಗೊಂಡಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. 


COMMERCIAL BREAK
SCROLL TO CONTINUE READING

ಇದನ್ನೂ ಓದಿ: 'ಪರಿಸರ ರಾಯಭಾರಿಯಾಗಿ' ಡಾ. ಸಾಲುಮರದ ತಿಮ್ಮಕ್ಕ ನೇಮಕ!


ರಾಜ್ಯದಿಂದ ಅಮರನಾಥ ಯಾತ್ರೆ ಕೈಗೊಂಡಿದ್ದ ಕನ್ನಡಿಗರು ಸುರಕ್ಷಿತವಾಗಿದ್ದು, ಬೇರೆ ಯಾವ ಅಹಿತಕರ ಸುದ್ದಿಯೂ ಬಂದಿಲ್ಲ. ಅಲ್ಲಿಯ ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರದ ಜೊತೆ ಸಂಪರ್ಕದಲ್ಲಿದ್ದೇವೆ ಎಂದರು. ರಕ್ಷಣಾ ಕಾರ್ಯಕ್ಕಾಗಿ  ಸಹಾಯವಾಣಿಯನ್ನೂ ಸಹ ತೆರೆಯಲಾಗಿದೆ. ಈಗಾಗಲೇ 15-20 ಜನ ಕರೆ ಮಾಡಿ ತಾವು ಸಿಲುಕಿರುವ ಸ್ಥಳದ ಬಗ್ಗೆ ಮಾಹಿತಿ ನೀಡಿದ್ದಾರೆ. ರಕ್ಷಣಾ ಕಾರ್ಯವನ್ನು ಕೂಡಲೇ ಕೈಗೊಳ್ಳಲಾಗುವುದು ಎಂದು ಹೇಳಿದರು. 


ಕೇಂದ್ರ ಸರ್ಕಾರ, ಗಡಿ ರಕ್ಷಣಾ ಪಡೆ, ಇಂಡಿಯನ್ ಟಿಬೆಟ್ ಫೋರ್ಸ್ ಎಲ್ಲರೂ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದರೆ. ಮುಖ್ಯ ಕಾರ್ಯದರ್ಶಿಗಳು ನೇರವಾಗಿ ಕೇಂದ್ರ ಸರ್ಕಾರದೊಂದಿಗೆ ಸಂಪರ್ಕದಲ್ಲಿದ್ದಾರೆ. ತೊಂದರೆಗೆ ಸಿಲುಕಿರುವವರು ಸಹಾಯವಾಣಿಗೆ ಕರೆ ಮಾಡಿದರೆ. ಕೂಡಲೇ ರಕ್ಷಣೆಗೆ ಕ್ರಮ ವಹಿಸಲಾಗುವುದು ಎಂದು ತಿಳಿಸಿದರು. 


ಇದನ್ನೂ ಓದಿ: ನಿತ್ಯಾನಂದನ ಜೊತೆ ಖ್ಯಾತ ನಟಿ ಪ್ರಿಯಾ ಮದುವೆ!? ಏನಿದು ಶಾಕಿಂಗ್‌ ಹೇಳಿಕೆ!!


ಸಹಾಯವಾಣಿಯ ವಿವರ:


ಎನ್.ಡಿ.ಆರ್.ಎಫ್: 011-23438252, 011-23438253


ಕಶ್ಮೀರ್ ಡಿವಿಷನಲ್ ಹೆಲ್ಪ್ ಲ್ಲೈನ್: 0914- 2496240


ದೇವಸ್ಥಾನ ಮಂಡಳಿಯ ಸಹಯಾವಾಣಿ: 0194-2313149


ಕರ್ನಾಟಕ ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರ : 080-1070, 22340676


ಸಹಾಯವಾಣಿ 24 ಗಂಟೆಗಳ ಕಾಲವೂ ಕಾರ್ಯನಿರ್ವಹಿಸಲಿದೆ.


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ