ಬೆಂಗಳೂರು: ಪ್ರತಿವರ್ಷ ವಿವಿಧ ವಲಯಗಳಲ್ಲಿ ಸೇವೆ ಸಲ್ಲಿಸಿರುವ ನಾಡಿನ ಪ್ರಜೆಗಳಿಗೆ ನೀಡಲಾಗುವ ರಾಜ್ಯೋತ್ಸವ ಪ್ರಶಸ್ತಿಯನ್ನು ಸರ್ಕಾರ ಪ್ರಕಟಿಸಿದೆ.


COMMERCIAL BREAK
SCROLL TO CONTINUE READING

ಈಗ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರಶಸ್ತಿಗೆ ಆಯ್ಕೆಯಾಗಿರುವ ಎಲ್ಲ ಸಾಧಕರಿಗೆ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ."೨೦೨೦-೨೧ನೇ ಸಾಲಿನ 'ಕನ್ನಡ ರಾಜ್ಯೋತ್ಸವ ಪ್ರಶಸ್ತಿ'ಗೆ ಆಯ್ಕೆಯಾಗಿರುವ ಎಲ್ಲ ಸಾಧಕರಿಗೆೆ ಹಾಗೂ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂದರ್ಭದಲ್ಲಿ ವಿಶೇಷವಾಗಿ ನೀಡಲಾಗುತ್ತಿರುವ 'ಅಮೃತ ಮಹೋತ್ಸವ ರಾಜ್ಯಪ್ರಶಸ್ತಿ' ಪುರಸ್ಕೃತ ರಾಜ್ಯದ ೧೦ ಸಂಘ-ಸಂಸ್ಥೆಗಳಿಗೆ, ನಾಡಿನ ಸಮಸ್ತ ಜನತೆಯ ಪರವಾಗಿ ಹೃತ್ಪೂರ್ವಕ ಅಭಿನಂದನೆಗಳು.



ಈ ಎಲ್ಲ ಸಾಧಕರ ಸಾಧನೆಗಳು ಯುವಜನತೆಗೆ ಸ್ಫೂರ್ತಿಯಾಗಲಿ ಎಂದು ಆಶಿಸುತ್ತೇನೆ. ಹಾಗೆಯೇ, ಸಾಧಕರನ್ನು ಗುರುತಿಸುವಲ್ಲಿ ಅತ್ಯಂತ ಪಾರದರ್ಶಕವಾಗಿ ಕಾರ್ಯನಿರ್ವಹಿಸಿರುವ ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ.ಸುನಿಲ್ ಕುಮಾರ್ ಅವರಿಗೆ ಮತ್ತು ಆಯ್ಕೆ ಸಮಿತಿಯ ಸದಸ್ಯರಿಗೂ ಹಾರ್ದಿಕ ಅಭಿನಂದನೆಗಳು" ಎಂದು ಅವರು ತಮ್ಮ ಅಧಿಕೃತ ಸಾಮಾಜಿಕ ಜಾಲತಾಣಗಳಲ್ಲಿ ಬರೆದುಕೊಂಡಿದ್ದಾರೆ.


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - 
https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ