ಬೆಂಗಳೂರು: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಡಿ 2022-23 ನೇ ಸಾಲಿಗೆ ಪರಿಶಿಷ್ಟ ಪಂಗಡಕ್ಕೆ ಸೇರಿದ ಎಲ್ಲ ಸಮುದಾಯದ ಮಹಿಳಾ ಮತ್ತು ಪುರುಷ ಅರ್ಹ ಅಭ್ಯ.ರ್ಥಿಗಳಿಗೆ ಉಚಿತವಾಗಿ ಲಘು (ಕಾರು/ಜೀಪ್) ಹಾಗೂ ಭಾರಿ ವಾಹನ (ಬಸ್ಸು) ಚಾಲನಾ ತರಬೇತಿ ಜೊತೆಗೆ ವಾಹನ ಚಾಲನಾ ಪರವಾನಿಗೆ ನೀಡುವ ಕಾರ್ಯಕ್ರಮವನ್ನು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಸಹಯೋಗದೊಂದಿಗೆ ಹಮ್ಮಿಕೊಳ್ಳಲಾಗಿದ್ದು, ಆಸಕ್ತ ಫಲಾಪೇಕ್ಷಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.


COMMERCIAL BREAK
SCROLL TO CONTINUE READING

ಲಘು ವಾಹನ ಚಾಲನಾ ತರಬೇತಿ ಪಡೆಯಲು ಇಚ್ಛಿಸುವ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷದವರಾಗಿರಬೇಕು. ಭಾರಿ ವಾಹನ ಚಾಲನಾ ತರಬೇತಿ ಪಡೆಯಲು ಇಚ್ಛಿಸುವ ಅಭ್ಯರ್ಥಿಗಳು ಕನಿಷ್ಠ 20 ವರ್ಷದವರಾಗಿರಬೇಕು. ಲಘು ವಾಹನ ಚಾಲನಾ ಅನುಜ್ಞಾ ಪತ್ರ ಪಡೆದು ಒಂದು ವರ್ಷ ಪೂರೈಸಿರಬೇಕು.


ಇದನ್ನೂ ಓದಿ: ಊಬರ್ ಕ್ಯಾಬ್ ಬುಕ್ ಮಾಡಿ ಖತರ್ನಾಕ್ ಗ್ಯಾಂಗ್ ಮಾಡಿದ್ದೇನು ಗೊತ್ತಾ..!?


ಅರ್ಜಿ ಸಲ್ಲಿಸಲು ಏ.20 ಕೊನೆಯ ದಿನವಾಗಿದ್ದು, ಅರ್ಜಿಯೊಂದಿಗೆ ಜನ್ಮ ದಿನಾಂಕದ ಬಗ್ಗೆ ಜನನ ಪ್ರಮಾಣ ಪತ್ರ ಅಥವಾ ಎಸ್.ಎಸ್.ಎಲ್.ಸಿ ಅಂಕಪಟ್ಟಿ ಅಥವಾ ಶಾಲಾ ವರ್ಗಾವಣಾ ಪ್ರಮಾಣ ಪತ್ರ (ಟಿಸಿ) ಅಥವಾ ನೋಟರಿಯವರಿಂದ ಪ್ರಮಾಣ ಪತ್ರ,  ಆಧಾರ್ ಕಾರ್ಡ್, ಜಾತಿ ಪ್ರಮಾಣ ಪತ್ರ ಮತ್ತು ಆದಾಯ ಪ್ರಮಾಣ ಪತ್ರ, ಪಾಸ್‌ಪೋರ್ಟ್ ಅಳತೆಯ 5 ಭಾವಚಿತ್ರಗಳನ್ನು ಸಲ್ಲಿಸಬೇಕು.ತರಬೇತಿಯನ್ನು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ತರಬೇತಿ ಕೇಂದ್ರ, ವಡ್ಡರ ಹಳ್ಳಿ, ದಾಸನಪುರ ಹೋಬಳಿ, ಬೆಂಗಳೂರು ಉತ್ತರ -562130 ದಲ್ಲಿ ನೀಡಲಾಗುವುದು. ತರಬೇತಿಯ ಅವಧಿಯಲ್ಲಿ ಉಚಿತ ವಸತಿ ಮತ್ತು ಉಟೋಪಚಾರ ವ್ಯವಸ್ಥೆಯನ್ನು ನೀಡಲಾಗುವುದು.


ಇದನ್ನೂ ಓದಿ: ನಿಮ್ಮ ಋಣ ನಾ ಎಂದೂ ಮರೆಯಲ್ಲ..ನನಗೆ ರೊಟ್ಟಿ ಕೊಟ್ರಿ, ಮಲಗೋಕೆ ಕಟ್ಟೆ ಜಾಗ ಕೊಟ್ರಿ..


ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರ ಕಾರ್ಯಾಲಯ, ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮ, ಜಿಲ್ಲಾ ಆಡಳಿತ ಭವನ, ಹೊಸಪೇಟೆ ರಸ್ತೆ, ಕೊಪ್ಪಳ-583231, ದೂರವಾಣಿ ಸಂಖ್ಯೆ : 08539-221176, ಇ-ಮೇಲ್ ವಿಳಾಸ: dmadclkpl@gmail.com ಅಥವಾ dmkoppal@yahoo.com  ಗೆ ಸಂಪರ್ಕಿಸಬಹುದು ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.