ಕೇರಳದ ಕೊಲ್ಲಂ ಜಿಲ್ಲೆಯಲ್ಲಿ ಐದು ವರ್ಷಕ್ಕೂ ಕಡಿಮೆ ವಯಸ್ಸಿನ ಮಕ್ಕಳಲ್ಲಿ ನಿಗೂಢ ಕಾಯಿಲೆ ಕಾಣಿಸಿಕೊಂಡಿದೆ. ಮಕ್ಕಳ ಮೈಮೇಲೆ ಕೆಂಪು ಗುಳ್ಳೆ ಕಾಣಿಸಿಕೊಂಡಿದ್ದು, ತೀವ್ರ ಜ್ವರದಿಂದ ಬಳಲುತ್ತಿದ್ದಾರೆ. 80ಕ್ಕೂ ಹೆಚ್ಚು ಮಕ್ಕಳಲ್ಲಿ ಕಾಣಿಸಿಕೊಂಡಿರುವ ಈ ಕಾಯಿಲೆಯನ್ನು 'ಟೊಮೆಟೊ ಜ್ವರ' ಎಂದು ಕರೆಯಲಾಗಿದೆ.  ಹಿನ್ನೆಲೆಯಲ್ಲಿ  ಮೈಸೂರು ಜಿಲ್ಲೆಯ ಗಡಿಭಾಗವಾದ ಬಾವಲಿ ಚೆಕ್ ಪೋಸ್ಟ್ ಗೆ ತಹಶೀಲ್ದಾರ್ ಶ್ರೀಮತಿ ರತ್ನಾಂಬಿಕೆ ,ತಾಲ್ಲೂಕು ಆರೋಗ್ಯಾಧಿಕಾರಿಗಳಾದ ಡಾ" ಟಿ.ರವಿಕುಮಾರ್ ರವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.


COMMERCIAL BREAK
SCROLL TO CONTINUE READING

ಇದನ್ನೂ ಓದಿ: Cancer Treatment: ಸ್ತನ ಕ್ಯಾನ್ಸರ್ ಚಿಕಿತ್ಸೆಗೆ ಹೊಸ ಔಷಧಿ ಲಭ್ಯ


ಈ ಸಂದರ್ಭದಲ್ಲಿ ಮಾತನಾಡಿದ ತಾಲ್ಲೂಕು ಆರೋಗ್ಯಾಧಿಕಾರಿಗಳಾದ ಡಾ" ಟಿ.ರವಿಕುಮಾರ್ ರವರು ಕರ್ನಾಟಕ-ಕೇರಳ ಗಡಿಯ ಭಾಗವಾದ ಬಾವಲಿ ಚೆಕ್ ಪೋಸ್ಟ್  ಮೂಲಕ  ಪ್ರವೇಶಿಸುವ ಜನರನ್ನು ವೈದ್ಯಕೀಯ ತಂಡವು ಪರೀಕ್ಷೆಗೆ ಒಳಪಡಿಸುತ್ತಿದೆ. ಜ್ವರ, ಚರ್ಮದ ಮೇಲೆ ಗುಳ್ಳೆಗಳು ಎದ್ದಿರುವುದು ಹಾಗೂ ಇತರೆ ಅನಾರೋಗ್ಯದ ಬಗ್ಗೆ ಪರಿಶೀಲಿಸುತ್ತಿರುವುದಾಗಿ ವರದಿಯಾಗಿದೆ. ಕೋವಿಡ್‌ ನಡುವೆ ಮತ್ತೊಂದು ಆತಂಕಕ್ಕೆ ಕಾರಣವಾಗಿರುವ ಟೊಮೆಟೊ ಜ್ವರ ಕಾಣಿಸಿಕೊಂಡಿದ್ದು ಯಾವುದೇ ರೀತಿಯ ಆತಂಕ ಪಡುವ ಅಗತ್ಯವಿಲ್ಲ ಕರ್ನಾಟಕ-ಕೇರಳ ಗಡಿಯ ಭಾಗವಾದ ಬಾವಲಿ ಚೆಕ್ ಪೋಸ್ಟ್  ಮೂಲಕ  ಪ್ರವೇಶಿಸುವ ಐದು ವರ್ಷ ಒಳಪಡುವ ಮಕ್ಕಳನ್ನು ವೈದ್ಯಕೀಯ ತಂಡವು ಪರೀಕ್ಷೆ ನಡೆಸುತ್ತಿದ್ದಾರೆ


ಹಲವು ವರ್ಷಗಳಿಂದ ದೇಶದಾದ್ಯಂತ ಆಗಾಗ್ಗೆ ಬಾಧಿಸುತ್ತಿರುವ 'ಚಿಕೂನ್‌ಗುನ್ಯಾ' ರೀತಿಯ ಕೆಲವು ಲಕ್ಷಣಗಳು ಟೊಮೆಟೊ ಜ್ವರದಲ್ಲೂ ಕಾಣಿಸಿಕೊಂಡಿದೆ. ತೀವ್ರ ಜ್ವರ, ಇಡೀ ದೇಹದಲ್ಲಿ ನೋವು, ಕೀಲುಗಳಲ್ಲಿ ಊತ, ಅತಿಯಾದ ಆಯಾಸದಂತಹ ಲಕ್ಷಣಗಳನ್ನು ಗಮನಿಸಲಾಗಿದೆ.


ಸೋಂಕಿಗೆ ಒಳಗಾಗಿರುವ ಮಕ್ಕಳ ಚರ್ಮದ ಮೇಲೆ ಗುಳ್ಳೆಗಳು ಎದ್ದಿರುವುದು, ಕೆರೆತ ಉಂಟಾಗಿದೆ. ಇದರೊಂದಿಗೆ ಕೆಮ್ಮು, ನೆಗಡಿ, ಹೊಟ್ಟೆ ನೋವು, ವಾಂತಿ ಅಥವಾ ಬೇಧಿ, ಹೊಟ್ಟೆ ತೊಳಸುವಿಕೆ, ಕೈಗಳು, ಮಂಡಿಗಳಲ್ಲಿ ಬಣ್ಣ ಬದಲಾವಣೆ ಉಂಟಾಗುವ ಲಕ್ಷಣಗಳು ಕಾಣಿಸಿಕೊಳ್ಳಬಹುದಾಗಿದೆ. ಸೋಂಕಿತ ವ್ಯಕ್ತಿಯೊಂದಿಗೆ ಅಂತರ ಕಾಯ್ದುಕೊಳ್ಳುವ ಮೂಲಕ ಸೋಂಕು ಹರಡುವುದನ್ನು ತಡೆಯಬಹುದಾಗಿದೆ. 


ಇದನ್ನೂ ಓದಿ: Employee Pension Scheme : ಪಿಂಚಣಿ ಬಗ್ಗೆ ಮಹತ್ವದ ಸುದ್ದಿ : ಇಪಿಎಸ್‌ನಿಂದ ಬಿಗ್ ಅಪ್‌ಡೇಟ್!


ಈ ಸಂದರ್ಭದಲ್ಲಿ ಪೊಲೀಸ್ ಇಲಾಖೆಯ ಸಬ್ ಇನ್ಸ್ಪೆಕ್ಟರ್ ಭರತ್, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಟಿ. ರವಿರಾಜ್, ಅರಣ್ಯ ಇಲಾಖೆಯ ಚಿಕ್ಕಣ್ಣ, ಆರೋಗ್ಯ ಇಲಾಖೆ ಸಿಬ್ಬಂದಿ ವರ್ಗದವರಾದ  ಸೌಮ್ಯ, ಆಶಾ ಕಾರ್ಯಕರ್ತೆ ಮಂಜುಳಾ ಇನ್ನಿತರರಿದ್ದರು.


ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.