ಹುಟ್ಟುಹಬ್ಬದ ಸಂಭ್ರಮದಲ್ಲಿರುವ ಮಾಜಿ ಸಚಿವ ಟಿ.ಬಿ ಜಯಚಂದ್ರಗೆ ಶಾಕ್!

ಮುಂಬರುವ ಕರ್ನಾಟಕ ವಿಧಾನಸಭಾ ಚುನಾವಣೆ ಕಾಂಗ್ರೆಸ್ ಪಕ್ಷಕ್ಕೆ ಮಾಡು ಇಲ್ಲವೆ ಮಡಿ ಹೋರಾಟ. ಕರ್ನಾಟಕ ಗೆದ್ದರೆ ಮಾತ್ರ ಕಾಂಗ್ರೆಸ್ ಪುನಶ್ಚೇತನ ಸಾಧ್ಯ ಎಂದು ಅರಿತಿರುವ ಹೈಕಮಾಂಡ್ ಮುಂದಿನ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿದೆ‌. ಬಹುತೇಕ ಸರ್ವೇಗಳು ಕಾಂಗ್ರೆಸ್ ಅಧಿಕಾರ ಹಿಡಿಯಲು ಅವಕಾಶ ಇರುವ ಮನ್ಸೂಚನೆ ನೀಡಿದ್ದು ಕಾಂಗ್ರೆಸ್ ನಾಯಕರ ಹುಮ್ಮಸ್ಸು ಹೆಚ್ಚಿಸಿದೆ.

Written by - Zee Kannada News Desk | Last Updated : Jul 27, 2022, 08:45 PM IST
  • ಮಾಜಿ ಸಚಿವ ಟಿ.ಬಿ ಜಯಚಂದ್ರ ಅವರಿಗೆ 11 ಬಾರಿ ಕಾಂಗ್ರೆಸ್ ಟಿಕೆಟ್ ನೀಡಿದೆ.
  • ಶಾಸಕರಾಗಿ ಮಂತ್ರಿಯಾಗಿದ್ದು ಆಗಿದೆ.
  • ಆದರೆ ಮುಂದಿನ ಚುಮಾವಣೆಯಲ್ಲಿ ಜಯಚಂದ್ರ ಅವರಿಗೆ ಟಿಕೆಟ್ ನೀಡಬಾರದು ಯುವಕರಿಗೆ ಆದ್ಯತೆ ನೀಡಬೇಕು ಎಂಬ ಕೂಗು ಹೆಚ್ಚಾಗುತ್ತಿದೆ.
ಹುಟ್ಟುಹಬ್ಬದ ಸಂಭ್ರಮದಲ್ಲಿರುವ ಮಾಜಿ ಸಚಿವ ಟಿ.ಬಿ ಜಯಚಂದ್ರಗೆ ಶಾಕ್! title=

ಬೆಂಗಳೂರು: ಮುಂಬರುವ ಕರ್ನಾಟಕ ವಿಧಾನಸಭಾ ಚುನಾವಣೆ ಕಾಂಗ್ರೆಸ್ ಪಕ್ಷಕ್ಕೆ ಮಾಡು ಇಲ್ಲವೆ ಮಡಿ ಹೋರಾಟ. ಕರ್ನಾಟಕ ಗೆದ್ದರೆ ಮಾತ್ರ ಕಾಂಗ್ರೆಸ್ ಪುನಶ್ಚೇತನ ಸಾಧ್ಯ ಎಂದು ಅರಿತಿರುವ ಹೈಕಮಾಂಡ್ ಮುಂದಿನ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿದೆ‌. ಬಹುತೇಕ ಸರ್ವೇಗಳು ಕಾಂಗ್ರೆಸ್ ಅಧಿಕಾರ ಹಿಡಿಯಲು ಅವಕಾಶ ಇರುವ ಮನ್ಸೂಚನೆ ನೀಡಿದ್ದು ಕಾಂಗ್ರೆಸ್ ನಾಯಕರ ಹುಮ್ಮಸ್ಸು ಹೆಚ್ಚಿಸಿದೆ.

ಪರಂಪರಗತವಾಗಿ ಕಾಂಗ್ರೆಸ್ ಟಿಕೆಟ್ ಹಂಚಿಕೆಯಲ್ಲಿ ಎಡವಿರುವುದು ಫಲಿತಾಂಶಗಳಿಂದ ಸ್ಪಷ್ಟವಾಗಿದೆ. ಹೀಗಿದ್ದಾಗ ಕಾಂಗ್ರೆಸ್ ಟಿಕೆಟ್ ನೀಡುವುದು ಹೈಕಮಾಂಡ್ ಸವಾಲಾಗಿ ಪರಿಣಮಿಸಿದೆ.ಈಗಾಗಲೇ ಪಕ್ಷ ಗೆಲ್ಲಬಹುದಾದ 120 ಕ್ಷೇತ್ರಗಳನ್ನು ಪಟ್ಟಿ ಮಾಡಿರುವ ಕಾಂಗ್ರೆಸ್, ಗೆಲ್ಲುವ ಅಭ್ಯರ್ಥಿಗಳಿಗೆ ಕ್ಷೇತ್ರದಲ್ಲಿ ಕೆಲಸವನ್ನು ಮಾಡುವಂತೆ ಸೂಚನೆ ನೀಡಿದೆ. ಆದ್ರೆ ಇನ್ನು  30 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಆಯ್ಕೆಯಲ್ಲಿ ಹೆಚ್ಚು ಗೊಂದಲವಿದ್ದು ಹಿರಿಯರಿಗೆ ಟಿಕೆಟ್ ನೀಡದೆ ಯುವಕರಿಗೆ ಆಧ್ಯತೆ ನೀಡುವಂತೆ ಕೂಗು ಹೆಚ್ಚಾಗಿದೆ.

ಇದನ್ನೂ ಓದಿ: Siddaramaiah : ಸಿದ್ದರಾಮಯ್ಯ 'ಅಮೃತ ಮಹೋತ್ಸವ' : 50 ಎಕರೆ ಜಾಗದಲ್ಲಿ ಬೃಹತ್ ವೇದಿಕೆ!

ಟಿ.ಬಿ ಜಯಚಂದ್ರಗೆ ಟಿಕೆಟ್ ನೀಡಲು ಹೈಕಮಾಂಡ್ ಹಿಂದೇಟು.!

ಕಳೆದ ಎರಡು ವಿಧಾನಸಭೆ ಚುನಾವಣೆಯಲ್ಲಿ ಮಾಜಿ ಸಚಿವ ಟಿ.ಬಿ ಜಯಚಂದ್ರ ಹೀನಾಯ ಸೋಲು ಅನುಭವಿಸಿದ್ದಾರೆ. 2019ರ ಶಿರಾ ವಿಧಾನಸಭೆ ಚುನಾವಣೆ ಮತ್ತು 2021ರ ಶಿರಾ ಉಪಚುನಾವಣೆಯಲ್ಲಿ ಜಯಚಂದ್ರ ಬಹು ಅಂತರದಲ್ಲಿ ಸೋತಿದ್ದಾರೆ.ಈ ಬಾರಿ ಶಿರಾ ಕ್ಷೇತ್ರದಲ್ಲಿ ಅಭ್ಯರ್ಥಿಯನ್ನು ಬದಲಿಸಬೇಕು ಎಂಬ ಚರ್ಚೆ ಕಾಂಗ್ರೆಸ್ ನಲ್ಲಿ ಜೋರಾಗಿದೆ.ಹೈಕಮಾಂಡ್ ಮಟ್ಟದಲ್ಲಿ ಜಯಚಂದ್ರಗೆ ಟಿಕೆಟ್ ನೀಡಲು ವಿರೋಧ ಹೆಚ್ಚಾಗುತ್ತಿದೆ. 

ಮಾಜಿ ಸಚಿವ ಟಿ.ಬಿ ಜಯಚಂದ್ರ ಅವರಿಗೆ 11 ಬಾರಿ ಕಾಂಗ್ರೆಸ್ ಟಿಕೆಟ್ ನೀಡಿದೆ. ಶಾಸಕರಾಗಿ ಮಂತ್ರಿಯಾಗಿದ್ದು ಆಗಿದೆ. ಆದರೆ ಮುಂದಿನ ಚುಮಾವಣೆಯಲ್ಲಿ ಜಯಚಂದ್ರ ಅವರಿಗೆ ಟಿಕೆಟ್ ನೀಡಬಾರದು ಯುವಕರಿಗೆ ಆದ್ಯತೆ ನೀಡಬೇಕು ಎಂಬ ಕೂಗು ಹೆಚ್ಚಾಗುತ್ತಿದೆ. ರಾಜ್ಯ ಕಾಂಗ್ರೆಸ್  ಪ್ರಧಾನ ಕಾರ್ಯದರ್ಶಿ,ಕಾಡುಗೊಲ್ಲ ಸಮುದಾಯದ ಜನಪ್ರಿಯ ನಾಯಕ ಸತೀಶ್ ಶಿರಾ ಕ್ಷೇತ್ರದಲ್ಲಿ ಹೆಚ್ಚಾಗಿ ಓಡಾಡುತ್ತಿದ್ದಾರೆ.ಸಾಸಲು ಸತೀಶ್ ಗೆ ಡಿ.ಕೆ ಶಿವಕುಮಾರ್, ಸಿದ್ದರಾಮಯ್ಯ ಬೆಂಬಲ ಸಿಕ್ಕಿದ್ದು ಕ್ಷೇತ್ರದಲ್ಲಿ ಕೆಲಸ ಮಾಡುವಂತೆ ಪರೋಕ್ಷ ಸೂಚನೆ ಸಿಕ್ಕಿದೆ. ಅಲ್ಲದೆ‌ ಕೆಪಿಸಿಸಿಯಿಂದ ಮಾಡಿಸಿರುವ ಸರ್ವೆಯಲ್ಲಿಯೂ  ಜಯಚಂದ್ರ ಸೋಲು ಖಚಿತ ಎನ್ನುತ್ತಿವೆ. ಜಯಚಂದ್ರ ಅವ್ರು 74ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ.‌ ವಯಸ್ಸು ಹೆಚ್ಚಾಗುತ್ತಿರುವುದು ಹಿನ್ನೆಡೆಯಾಗಿ ಪರಿಣಮಿಸಿದೆ.

ಇದನ್ನೂ ಓದಿ: DK Shivakumar : 'ಒಬ್ಬ ಹೋಮ್‌ ಮಿನಿಸ್ಟರ್, ಪಕ್ಷ ಅಂತ ತೊಗೊಂಡರೇ ರಾಜ್ಯ ಉಳಿಯಲು ಸಾಧ್ಯವಿಲ್ಲ'

ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲು ಎಲ್ಲ ರೀತಿಯ ಕಾರ್ಯತಂತ್ರಗಳನ್ನು ಸುನೀಲ್ ಕನಗೋಲು ನೇತೃತ್ವದಲ್ಲಿ ತಂತ್ರಗಾರಿಕೆ ನಡೆಯುತ್ತಿದೆ. ಹಾಲಿ ಶಾಸಕರ ಪೈಕಿ ಕಳಪೆ ಕಾರ್ಯ ಸಾಧನೆ, ಪಕ್ಷದ ಸಂಘಟನೆ ಮಾಡದಿರುವುದು, ಕಾರ್ಯಕರ್ತರು ಮತ್ತು ಸಾರ್ವಜನಿಕರೊಂದಿಗೆ ಉತ್ತಮ ಸಂಪರ್ಕ ಇಟ್ಟುಕೊಳ್ಳದ ಶಾಸಕರನ್ನು ಬದಲಾಯಿಸಿ ಹೊಸಬರಿಗೆ  ಹೊಸಬರಿಗೆ ಅವಕಾಶ ಕಲ್ಪಿಸಲು ನಿರ್ಧರಿಸಿದ್ದಾರೆ ಎಂದು ಹೇಳಲಾಗಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

 

Trending News