Satish Jarakiholi on CMs chair: ಸಿಎಂ ಬದಲಾವಣೆ ವಿಚಾರವಾಗಿ ಲೋಕೋಪಯೋಗಿ ಇಲಾಖೆ ಮತ್ತು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ಪ್ರತಿಕ್ರಿಯಿಸಿದ್ದಾರೆ. ಇನ್ನೂ ಎರಡುವರೆ ವರ್ಷ ನಾನೇ ಸಿಎಂ ಎಂಬ ಸಿದ್ದರಾಮಯ್ಯರ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಬೆಳಗಾವಿಯಲ್ಲಿ ಪ್ರತಿಕ್ರಯಿಸಿರುವ ಅವರು, ಪಕ್ಷದಲ್ಲಿ ಕೆಲವು ಗೊಂದಲಗಳು ಇವೆ. ಈಗಾಗಲೇ ಕೆಲವು ಗೊಂದಲಗಳಿಗೆ ತೆರೆ ತಿದ್ದಿದೆ. ಈ ವಿಚಾರವನ್ನ ಹೈಕಮಾಂಡ್ ಸರಿಪಡಿಸುತ್ತೆ. ಸಿಎಂ ಕುರ್ಚಿ ಬಗ್ಗೆ ಹೈಕಮಾಂಡ್ ಅಂತಿಮವಾಗಿ ತೀರ್ಮಾನ ಮಾಡುತ್ತದೆ ಎಂದು ಹೇಳಿದ್ದಾರೆ.
ಸಿಎಂ ಸಿದ್ದರಾಮಯ್ಯ ಈ ಹಿಂದಿನ ರೀತಿ ಇಲ್ಲವೆಂಬ ಮಾಜಿ ಸಚಿವ ಕೆ.ಎನ್.ರಾಜಣ್ಣ ನೀಡಿರುವ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಈ ವಿಚಾರವನ್ನ ನೀವು ಅವರನ್ನೇ ಕೇಳಬೇಕು. ಸಿಎಂ ಹೇಗಿರಬೇಕು ಎಂದು ನಾವು ಹೇಳಲು ಆಗುವುದಿಲ್ಲ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ: ಕಾಂಗ್ರೆಸ್ ಭ್ರಷ್ಟಾಚಾರ ಬಯಲಾದರೂ ಬಿಜೆಪಿ ನಾಯಕರು ಸೈಲೆಂಟ್
ಗಣತಿಯಲ್ಲಿ ಅತಿಹೆಚ್ಚು ಪ್ರಶ್ನೆ ಕೇಳಿರುವ ವಿಚಾರವಾಗಿ ಪ್ರತಿಕ್ರಿಯಿಸಿದ ಸತೀಶ್ ಜಾರಕಿಹೊಳಿ, ʼಪ್ರಶ್ನೆಗೆ ಉತ್ತರಿಸಲು ಜನರು ಹಿಂದೇಟು ಹಾಕುತ್ತಿದ್ದಾರೆ. ನಿನ್ನೆ ಗೋಕಾಕ್‌ನಲ್ಲಿಯೂ ಸರ್ವೇಗೆ ಬಂದಿದ್ದರು. ಪ್ರಶ್ನೆಗಳನ್ನು ಕಮ್ಮಿ ಮಾಡಿದ್ರೆ ಒಳ್ಳೆಯದು ಅಂತಾ ಹೇಳಿದ್ದಾರೆ.
ರಾಜ್ಯದಲ್ಲಿ ಎರಡು ಸಚಿವ ಸ್ಥಾನ ಖಾಲಿಯಿರುವ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ವಾಲ್ಮೀಕಿ ಸಮುದಾಯಕ್ಕೆ 2 ಸ್ಥಾನ ನೀಡಬೇಕು ಎಂದು ಸಿಎಂ ಸಿದ್ದರಾಮಯ್ಯರಲ್ಲಿ ಮನವಿ ಮಾಡಿದ್ದಾರೆ. ನಾಳೆ ನಾವು ವಾಲ್ಮೀಕಿ ಶ್ರೀಗಳ ನೇತೃತ್ವದಲ್ಲಿ ಸಿಎಂ ಸಿದ್ದಾಮಯ್ಯರನ್ನ ಭೇಟಿಯಾಗುತ್ತೇವೆ. ಈ ಹಿಂದೆಯೂ ಸಿಎಂ ಭೇಟಿ ಮಾಡಿ ಮನವಿ ಮಾಡಿದ್ದೇವೆ. ಈಗ ಮತ್ತೊಮ್ಮೆ ವಾಲ್ಮೀಕಿ ನಿಯೋಗ ಭೇಟಿ ಮಾಡಲಿದೆ ಎಂದು ಹೇಳಿದ್ದಾರೆ.
ಇದನ್ನೂ ಓದಿ: ಕರ್ನಾಟಕದಲ್ಲಿ ಕೋಲ್ಡ್ರಿಫ್ ಸಿರಪ್ ನಿಷೇಧ









