ಬೆಂಗಳೂರು: ಉದ್ಯಮಿ ಪುತ್ರ ವಿದ್ವತ್ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಶಾಸಕ ಎನ್.ಎ.ಹ್ಯಾರಿಸ್ ಪುತ್ರ ಮೊಹಮದ್ ನಲಪಾಡ್ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ವಿಚಾರಣೆಯನ್ನು ಜೂ.11ಕ್ಕೆ ಮುಂದೂಡಿದೆ. 


COMMERCIAL BREAK
SCROLL TO CONTINUE READING

ಇನ್ನೂ ಜಾಮೀನು ಅರ್ಜಿ ವಿಚಾರಣೆಗೆ ಸಂಬಂಧಿಸಿದಂತೆ ವಿದ್ವತ್ ಪರ ವಾದ ಮಂಡಿಸುತ್ತಿರುವ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಶ್ಯಾಮ್ ಸುಂದರ್ ಅವರು ಜಾಮೀನಿಗೆ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ಕೋರಿದ ಹಿನ್ನೆಲೆಯಲ್ಲಿ, ವಿಚಾರಣೆಯನ್ನು ಜೂ.11ಕ್ಕೆ ಹೈಕೋರ್ಟ್ ಮುಂದೂಡಿದೆ. 


ಫೆ.17 ರಂದು ಯುಬಿ ಸಿಟಿಯಲ್ಲಿರುವ ಫೆಗ್ರಿ ಕಫೆ ರೆಸ್ಟೋರೆಂಟ್ ನಲ್ಲಿ ಊಟ ಮಾಡುತ್ತಿದ್ದ ವೇಳೆ ಕಾಲು ತಗುಲಿತು ಎಂಬ ಕಾರಣಕ್ಕೆ ಮೊಹಮ್ಮದ್ ಹ್ಯಾರಿಸ್ ನಲಪಾಡ್ ಮತ್ತು ಆತನ ಸ್ನೇಹಿತರು ಉದ್ಯಮಿ ಲೋಕನಾಥ್ ಪುತ್ರ ವಿದ್ವತ್ ಮೇಲೆ ಮನಬಂದಂತೆ ಹಲ್ಲೆ ನಡೆಸಿದ್ದರು. ನಂತರ ತಲೆಮರೆಸಿಕೊಂಡಿದ್ದ ನಲಪಾಡ್ ಫೆ.19ರಂದು ಪೊಲೀಸರಿಗೆ ಶರಣಾಗಿದ್ದರು. ಸದ್ಯ ನಲಪಾಡ್  ನ್ಯಾಯಾಂಗ ಬಂಧನದಲ್ಲಿದ್ದಾರೆ.