ಬೆಂಗಳೂರು: ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆಯೊಬ್ಬರ ಅಪಹರಣ ಪ್ರಕರಣದಲ್ಲಿ ಬಂಧನ ಭೀತಿ ಎದುರಿಸುತ್ತಿದ್ದ ಭವಾನಿ ರೇವಣ್ಣ ಅವರಿಗೆ ಹೈಕೋರ್ಟ್ ಬಿಗ್‌ ರಿಲೀಫ್‌ ನೀಡಿದೆ.


COMMERCIAL BREAK
SCROLL TO CONTINUE READING

ಪ್ರಕರಣ ಸಂಬಂಧ 42ನೇ ಹೆಚ್ಚುವರಿ ಎಸಿಎಂಎಂ ನ್ಯಾಯಾಲಯ (ಜನ ಪ್ರತಿನಿಧಿಗಳ ವಿಶೇಷ  ಕೋರ್ಟ್‌) ಜಾರಿ ಮಾಡಿದ್ದ ವಾರೆಂಟ್ ಅನ್ನು ಅಮಾನತ್ತಿನಲ್ಲಿಟ್ಟು ಹೈಕೋರ್ಟ್ ಮಧ್ಯಂತರ ಆದೇಶ ನೀಡಿದೆ. ಹಾಗೆಯೇ, ಮುಂದಿನ ಶುಕ್ರವಾರದವರೆಗೆ ಮಧ್ಯಂತರ ಷರತ್ತುಬದ್ಧ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ‌


ಇದನ್ನೂ ಓದಿ: ವಾಲ್ಮೀಕಿ ನಿಗಮದ ಹಗರಣ ಪ್ರಕರಣ: ಸಚಿವ ಸ್ಥಾನಕ್ಕೆ ನಾಗೇಂದ್ರ ರಾಜೀನಾಮೆ


ಆದರೆ ಜಾಮೀನು ದೊರೆತಿದೆ ಎಂದು ಭವಾನಿ ಸಂಭ್ರಮ ಮಾಡುವಂತಿಲ್ಲ. ಇಂದು ಮಧ್ಯಾಹ್ನ 1 ಗಂಟೆಗೆ ಭವಾನಿ ರೇವಣ್ಣ ತನಿಖಾಧಿಕಾರಿಗಳ ಮುಂದೆ ಹಾಜರಾಗಬೇಕು ಹಾಗೂ ತನಿಖೆಗೆ ಸಂಪೂರ್ಣ ಸಹಕಾರ ನೀಡಬೇಕು ಎಂದು ಕೋರ್ಟ್‌ ಸೂಚಿಸಿದೆ.


ತನಿಖಾಧಿಕಾರಿಗಳು ಭವಾನಿ ರೇವಣ್ಣ ಅವರನ್ನು ಬಂಧಿಸಬಾರದು. ವಿಚಾರಣೆ ನೆಪದಲ್ಲಿ‌ ಸಂಜೆ 5 ಗಂಟೆ ಮೇಲೆ‌ ಇರಿಸಿಕೊಳ್ಳುವಂತಿಲ್ಲ.‌‌ ಭವಾನಿ ರೇವಣ್ಣ ಅವರು ಕೆ.ಆರ್.ನಗರ ತಾಲೂಕು ಹಾಗೂ ಹಾಸನ ಜಿಲ್ಲೆಗೆ ಹೋಗುವಂತಿಲ್ಲ ಎಂದು ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಆದೇಶಿಸಿದ್ದಾರೆ.


ಇದನ್ನೂ ಓದಿ: ಆನ್ ಲೈನ್ ಮೂಲಕ ವಸ್ತು ಖರೀದಿಸಿದ ವಿದ್ಯಾರ್ಥಿಗೆ ಮೋಸ: ರಿಲೈನ್ಸ್ ರಿಟೇಲ್ ಕಂಪನಿಗೆ ದಂಡ


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.