Karnataka Hijab Row: ಹಿಜಾಬ್ ವಿವಾದದ ವಿಚಾರಣೆ ಮುಂದೂಡಿದ ಹೈಕೋರ್ಟ್

Karnataka Hijab Row: ಕರ್ನಾಟಕ ಹಿಜಾಬ್ ವಿವಾದದ ವಿಚಾರಣೆಯನ್ನು ಹೈಕೋರ್ಟ್ ನಾಳೆಗೆ ಮುಂದೂಡಿದೆ.

Edited by - Chetana Devarmani | Last Updated : Feb 14, 2022, 07:07 PM IST
  • ಕರ್ನಾಟಕದಲ್ಲಿ ಸಂದಿಗ್ದ ಪರಿಸ್ಥಿತಿ ನಿರ್ಮಾಣ ಮಾಡಿದ್ದ ಹಿಜಾಬ್ ವಿವಾದ
  • ಕರ್ನಾಟಕ ಹೈಕೋರ್ಟ್​ನಲ್ಲಿ ನಡೆಯುತ್ತಿರುವ ವಿಚಾರಣೆ
  • ಮಂಗಳವಾರಕ್ಕೆ (ಫೆ.15) ಮುಂದೂಡಿ ಆದೇಶ
Karnataka Hijab Row: ಹಿಜಾಬ್ ವಿವಾದದ ವಿಚಾರಣೆ ಮುಂದೂಡಿದ ಹೈಕೋರ್ಟ್  title=
ಹಿಜಾಬ್ ವಿವಾದ

ಬೆಂಗಳೂರು: ಕರ್ನಾಟಕದಲ್ಲಿ ಸಂದಿಗ್ದ ಪರಿಸ್ಥಿತಿ ನಿರ್ಮಾಣ ಮಾಡಿದ್ದ ಹಿಜಾಬ್ (Hijab) ವಿವಾದಕ್ಕೆ ಸಂಬಂಧಿಸಿ ಕರ್ನಾಟಕ ಹೈಕೋರ್ಟ್​ನಲ್ಲಿ (High Court) ನಡೆಯುತ್ತಿರುವ ವಿಚಾರಣೆಯನ್ನು ಮಂಗಳವಾರಕ್ಕೆ (ಫೆ.15) ಮುಂದೂಡಿ ಆದೇಶ ನೀಡಲಾಗಿದೆ. 

ಇದನ್ನೂ ಓದಿ: ಹಿಜಾಬ್ ವಿವಾದ ಪ್ರಕರಣ ವಿಸ್ತೃತ ಪೀಠಕ್ಕೆ ವರ್ಗಾವಣೆ

ಹಿಜಾಬ್ ವಿವಾದದ (Karnataka Hijab Row) ವಿಚಾರಣೆಗೆ ರಚಿಸಲಾಗಿರುವ ತ್ರಿಸದಸ್ಯ ಪೀಠ ಪ್ರಕರಣದ ವಿಚಾರಣೆ ನಡೆಸಿದೆ. ಅರ್ಜಿದಾರರ ಪರವಾಗಿ ದೇವದತ್ ಕಾಮತ್, ಸರ್ಕಾರದ ಪರವಾಗಿ ಎಜಿ ಪ್ರಭುಲಿಂಗ್ ನಾವದಗಿ ಹಾಗೂ ಇತರರು ವಾದ ಮಂಡಿಸಿದ್ದಾರೆ. 

ಮುಖ್ಯ ನ್ಯಾಯಮೂರ್ತಿ ರಿತು ರಾಜ್ ಅವಸ್ತಿ, ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಮತ್ತು ನ್ಯಾಯಮೂರ್ತಿ ಜೆಎಂ ಖಾಜಿ ಅವರನ್ನೊಳಗೊಂಡ ಪೂರ್ಣ ಪೀಠವು ಅರ್ಜಿ ವಿಚಾರಣೆ ನಡೆಸುತ್ತಿದೆ. 

ಇದನ್ನೂ ಓದಿ: ಹಿಜಾಬ್, ಕೇಸರಿ ಶಾಲು ವಿವಾದದ ಬಗ್ಗೆ ಹೆಚ್ ಡಿ ಕುಮಾರಸ್ವಾಮಿ ಕಿಡಿ

ಈ ಕುರಿತು ವಿಚಾರಣೆ ನಡೆಸುತ್ತಿರುವ ಕರ್ನಾಟಕ ಹೈಕೋರ್ಟ್‌ನ ವಿಸ್ತೃತ ಪೀಠ ಗುರುವಾರ (ಫೆ.10) ಕಟ್ಟುನಿಟ್ಟಿನ ಸೂಚನೆ ನೀಡಿದೆ. ತೀರ್ಪು ಬರುವವರೆಗೂ ಧಾರ್ಮಿಕ ಉಡುಗೆ (Religious Dress) ತೊಡಬಾರದು. ಆದಷ್ಟು ಬೇಗ ಈ ಪ್ರಕರಣದ ತೀರ್ಪು ಪ್ರಕಟಿಸಲಾಗುವುದು. ಅಲ್ಲಿಯವರೆಗೆ ಶಾಂತಿ ಕಾಪಾಡುವುದು ಅಗತ್ಯ ಎಂದು ಹೇಳಿದೆ. 

ಈ ಪ್ರಕರಣದ ಮುಂದಿನ ವಿಚಾರಣೆಯನ್ನು ನ್ಯಾಯಾಲಯ ನಾಳೆ (ಮಂಗಳವಾರ) ನಡೆಸಲಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News