ಬೆಂಗಳೂರು: ಆ್ಯಂಬಿಡೆಂಟ್ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಜನಾರ್ಧನ ರೆಡ್ಡಿ ಮತ್ತು ಅವರ ಆಪ್ತ ಅಲಿಖಾನ್ ಅವರ ವಿರುದ್ಧ ಬಲವಂತ ತನಿಖೆ ನಡೆಸದಂತೆ ಹೈಕೋರ್ಟ್ ಮಂಗಳವಾರ ಸಿಸಿಬಿಗೆ ಸೂಚನೆ ನೀಡಿದೆ.


COMMERCIAL BREAK
SCROLL TO CONTINUE READING

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ಸಿಸಿಬಿ ಪೊಲೀಸರು ನಡೆಸುತ್ತಿರುವ ತನಿಖೆಯನ್ನು ತಡೆಹಿಡಿಯುವಂತೆ ಜನಾರ್ಧನ್ ರೆಡ್ಡಿ ಮತ್ತು ಅಲಿಖಾನ್ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ಮಂಗಳವಾರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಪಿ.ಎಸ್.ದಿನೇಶ್ ಕುಮಾರ್ ಅವರಿದ್ದ ಏಕ ಸದಸ್ಯ ಪೀಠ, ಮುಂದಿನ ವಿಚಾರಣೆವರೆಗೂ ಜನಾರ್ದನ ರೆಡ್ಡಿ ಹಾಗೂ ಅಲಿಖಾನ್​ ವಿರುದ್ಧ ತನಿಖೆ ನಡೆಸದಿರಲು ಸಿಸಿಬಿಗೆ ಸೂಚನೆ ನೀಡಿದ್ದು, ಮುಂದಿನ ವಿಚಾರಣೆಯನ್ನು ಡಿಸೆಂಬರ್ 4 ಕ್ಕೆ ಮುಂದೂಡಿದೆ.


ಇನ್ನು, ಜನಾರ್ಧನರೆಡ್ಡಿ ಆಪ್ತ ಅಲಿಖಾನ್ ಅವರಿಗೆ 1ನೇ ಎಸಿಎಂಎಂ ಕೋರ್ಟ್ ಈಗಾಗಲೇ ನವೆಂಬರ್ 29ರವರೆಗೆ ನ್ಯಾಯಾಂಗ ಬಂಧನ ವಿಧಿಸಿದ್ದು, ಆರೋಪಿ ಮೇಲೆ ಯಾವುದೇ ದೌರ್ಜನ್ಯ ಎಸಗುವಂತಿಲ್ಲ ಮತ್ತು ವೈದ್ಯಕೀಯ ಚಿಕಿತ್ಸೆ ಕೊಡಿಸಬೇಕು ಎಂದು ಸಿಸಿಬಿ ಅಧಿಕಾರಿಗಳಿಗೆ ಸೂಚನೆ ನೀಡಿತ್ತು.