ಬೆಂಗಳೂರು: ಟಿಪ್ಪು ಸುಲ್ತಾನ್ ಜಯಂತಿಯನ್ನು ನಿಷೇಧಿಸಿರುವ ರಾಜ್ಯ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ಹೈಕೋರ್ಟ್ ಮಂಗಳವಾರ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ. 


COMMERCIAL BREAK
SCROLL TO CONTINUE READING

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ನೋಟಿಸ್ ಜಾರಿ ಮಾಡಿರುವ ಹೈಕೋರ್ಟ್ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಅಭಯ್ ಎಸ್.ಓಕಾ ನೇತೃತ್ವದ ವಿಭಾಗೀಯ ಪೀಠ, ವಿಚಾರಣೆಯನ್ನು ಸೆಪ್ಟೆಂಬರ್ 18ಕ್ಕೆ ಮುಂದೂಡಿದೆ.


ಈ ಹಿಂದೆ ಇದ್ದ ಕಾಂಗ್ರೆಸ್ ಸರ್ಕಾರ ಪ್ರತಿ ವರ್ಷ ನವೆಂಬರ್ 10ರಂದು ಟಿಪ್ಪು ಜಯಂತಿ ಆಚರಣೆಯನ್ನು ಜಾರಿಗೆ ತಂದು 2015ರಲ್ಲಿ ಅಧಿಸೂಚನೆ ಹೊರಡಿಸಿತ್ತು. ಆದರೆ, 2019ರಲ್ಲಿ ಅಧಿಕಾರಕ್ಕೆ ಬಂದ ಬಿಜೆಪಿ ಸರ್ಕಾರ ಟಿಪ್ಪು ಜಯಂತಿ ಆಚರಣೆ ರದ್ದುಗೊಳಿಸಿ ಆದೇಶ ಹೊರಡಿಸಿತ್ತು. ಈ ಹಿನ್ನೆಲೆಯಲ್ಲಿ ಟಿಪ್ಪು ಜಯಂತಿ ರದ್ದತಿ ಸಂವಿಧಾನದ ಅನುಚ್ಚೇದ 14 ಮತ್ತು 15ಕ್ಕೆ ವಿರುದ್ಧವಾಗಿದೆ ಎಂದು ಉತ್ತರಪ್ರದೇಶದ ಲಖನೌ ನಿವಾಸಿ ಬಿಲಾಲ್ ಅಲಿ ಶಾ, ಟಿಪ್ಪು ರಾಷ್ಟ್ರೀಯ ಸೇವಾ ಸಂಘ, ಟಿಪ್ಪು ಸುಲ್ತಾನ್ ಯುನೈಟೆಡ್ ಫ್ರಂಟ್‌ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿವೆ.