ಸ್ಥಳೀಯ ಸಂಸ್ಥೆ ಮೀಸಲಾತಿ ರದ್ದು: ಅಧ್ಯಕ್ಷ - ಉಪಾಧ್ಯಕ್ಷರಿಗೆ 'ಬಿಗ್ ಶಾಕ್'..!

ಸ್ಥಳೀಯ ಸಂಸ್ಥೆ ಮೀಸಲಾತಿ ರದ್ದು..!

Last Updated : Nov 19, 2020, 06:34 PM IST
  • ಸ್ಥಳೀಯ ಸಂಸ್ಥೆ ಮೀಸಲಾತಿ ರದ್ದು
  • ಅಕ್ಟೋಬರ್ 8ರಂದು ರಾಜ್ಯದ ಒಟ್ಟು 277 ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ - ಉಪಾಧ್ಯಕ್ಷ ಚುನಾವಣೆಗೆ ಮೀಸಲಾತಿ ಅಧಿಸೂಚನೆ
  • ಅಧ್ಯಕ್ಷ ಉಪಾಧ್ಯಕ್ಷರು ಯಾವುದೇ ಅಧಿಕಾರ ನಡೆಸುವಂತಿಲ್
ಸ್ಥಳೀಯ ಸಂಸ್ಥೆ ಮೀಸಲಾತಿ ರದ್ದು: ಅಧ್ಯಕ್ಷ - ಉಪಾಧ್ಯಕ್ಷರಿಗೆ 'ಬಿಗ್ ಶಾಕ್'..! title=

ಬೆಂಗಳೂರು: ರಾಜ್ಯ ಸರ್ಕಾರ ಈ ಹಿಂದೆ ಹೊರಡಿಸಿದ್ದ ರಾಜ್ಯದ ಎಲ್ಲಾ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿಗಳ ಅಧ್ಯಕ್ಷ, ಉಪಾಧ್ಯಕ್ಷರ ಮೀಸಲಾತಿ ಆದೇಶವನ್ನು ಇಂದು ಹೈಕೋರ್ಟ್(HighCourt) ರದ್ದುಗೊಳಿಸಿದೆ. ಈ ಆದೇಶದಿಂದ ಇತ್ತೀಚೆಗಷ್ಟೇ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ- ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದವರಿಗೆ ಆತಂಕ ಆರಂಭವಾಗಿದೆ.

ಪದವಿ ವಿದ್ಯಾರ್ಥಿಗಳಿಗೆ ‘ಭರ್ಜರಿ ಸಿಹಿ ಸುದ್ದಿ’ ನೀಡಿದ KSRTC..!

ಅಕ್ಟೋಬರ್ 8ರಂದು ರಾಜ್ಯದ ಒಟ್ಟು 277 ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ - ಉಪಾಧ್ಯಕ್ಷ ಚುನಾವಣೆಗೆ ಮೀಸಲಾತಿ ಅಧಿಸೂಚನೆ ಹೊರಡಿಸಲಾಗಿತ್ತು. ಅದರಂತೆ ಬಹಳಷ್ಟು ಕಡೆ ಚುನಾವಣೆ ನಡೆದು ಅಧ್ಯಕ್ಷ - ಉಪಾಧ್ಯಕ್ಷರ ಚುನಾವಣೆ ನಡೆದು ಫಲಿತಾಂಶ ಪ್ರಕಟವಾಗಿದೆ. ಈ ಆದೇಶದಿಂದ ಈ ಚುನಾವಣಾ ಫಲಿತಾಂಶಗಳು ಅಮಾನತು ಸ್ಥಿತಿಯಲ್ಲಿರುತ್ತದೆ. ಅಂದರೆ ಅಧ್ಯಕ್ಷ ಉಪಾಧ್ಯಕ್ಷರು ಯಾವುದೇ ಅಧಿಕಾರ ನಡೆಸುವಂತಿಲ್ಲ.

'ಹದಿನೇಳು ಜನರ ಬಗ್ಗೆ ಸಿಎಂ ಬಿಎಸ್‌ವೈಗೆ ಬಹಳ ಗೌರವವಿದೆ'

ಸದ್ಯ ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸಲು ಸರ್ಕಾರಕ್ಕೆ ಹತ್ತು ದಿನಗಳ ಕಾಲವಕಾಶ ನೀಡಲಾಗಿದೆ. ಮೇಲ್ಮನವಿ ಸಲ್ಲಿಸಿದಲ್ಲಿ ಹೈಕೋರ್ಟ್ ನ ವಿಭಾಗೀಯ ಪೀಠ ಇದರ ವಿಚಾರಣೆ ನಡೆಸಲಿದ್ದು, ಅದು ನೀಡುವ ತೀರ್ಪು ಅಂತಿಮವಾಗಿರಲಿದೆ.

'KPSC' ಆಕಾಂಕ್ಷಿಗಳಿಗೆ ಗುಡ್ ನ್ಯೂಸ್: ಮುಖ್ಯ ಪರೀಕ್ಷೆ ಮುಂದೂಡಿದ ರಾಜ್ಯಸರ್ಕಾರ

Trending News