Bengaluru: ಬಿಟ್ ಕಾಯಿನ್ ಪ್ರಕರಣದ ಆರೋಪಿ ಶ್ರೀಕಿ ಅಲಿಯಾಸ್ ಶ್ರೀ ಕೃಷ್ಣ ಸಹೋದರ ಸುದರ್ಶನ್ ರಮೇಶ್ ಅವರ ವಿರುದ್ಧ ಜಾರಿ ನಿರ್ದೇಶನಾಲಯ ಹೊರಡಿಸಿದ್ದ ಲುಕ್ ಔಟ್ ಸುತ್ತೋಲೆ(ಎಲ್‌ಒಸಿ)ಯನ್ನು ಹೈಕೋರ್ಟ್ ರದ್ದುಪಡಿಸಿ ಆದೇಶಿಸಿದೆ.


COMMERCIAL BREAK
SCROLL TO CONTINUE READING

ತನ್ನ ವಿರುದ್ಧ ಹೊರಡಿಸಿರುವ ಎಲ್‌ಒಸಿ ರದ್ದುಪಡಿಸುವಂತೆ ಕೋರಿ ಸುದರ್ಶನ್ ರಮೇಶ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಹೇಮಂತ್ ಚಂದನ್‌ಗೌಡರ್ ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿದೆ.


ಇದನ್ನೂ ಓದಿ: ವಾರಕ್ಕೆ ಒಂದು ಬಾರಿ ಈ ಎಲೆಯನ್ನು ತಿಂದರೆ ಬೇರಿನಿಂದಲೇ ಕಪ್ಪಾಗುತ್ತೆ ಬಿಳಿಕೂದಲು


ಅಲ್ಲದೆ,  ಕೇಂದ್ರ ಗೃಹ ಇಲಾಖೆಯ ಬ್ಯುರೊ ಆಫ್ ಇಮಿಗ್ರೇಷನ್ ಸುದರ್ಶನ್ ವಿರುದ್ಧ ಹೊರಡಿಸಿರುವ ಲುಕ್‌ಔಟ್ ಸುತ್ತೋಲೆ ಯನ್ನು (ಎಲ್‌ಒಸಿ) ಅನುಷ್ಠಾನಗೊಳಿಸಲಾಗದು ಹಾಗೂ ಅವರ ಪಾಸ್‌ಪೋರ್ಟ್ ಮೇಲೆ ರದ್ದುಪಡಿಸಲಾಗಿದೆ ಎಂದು ನೀಡಲಾಗಿರುವ ಹಿಂಬರಹವನ್ನು ಬ್ಯುರೊ ಆಫ್ ಇಮಿಗ್ರೇಷನ್ ತೆಗೆದು ಹಾಕಬೇಕು ಎಂದು ತನ್ನ ಆದೇಶದಲ್ಲಿ ತಿಳಿಸಿದೆ.


ತನಿಖೆಯ ಸಂದರ್ಭದಲ್ಲಿ ಆಕ್ಷೇಪಾರ್ಹವಾದ ವಿಚಾರಗಳು ಕಂಡುಬಂದಲ್ಲಿ ಜಾರಿ ನಿರ್ದೇಶನಾಲಯವು ಸಮನ್ಸ್ ನೀಡಿದರೆ ಅರ್ಜಿದಾರರು ಹಾಜರಾಗಬೇಕು. ಈಮೇಲ್ ಐಡಿ, ಸಂಪರ್ಕ ವಿವರ ಮತ್ತು ಶಾಶ್ವತ ವಸತಿ ವಿಳಾಸವನ್ನು ಅರ್ಜಿದಾರರು ನೀಡಬೇಕು ಎಂದು ನ್ಯಾಯಾಲಯವು ಆದೇಶದಲ್ಲಿ ಹೇಳಿದೆ.


ಅನುಮಾನದ ಆಧಾರದಲ್ಲಿ ಅರ್ಜಿದಾರರ ವಿರುದ್ಧ ಎಲ್‌ಒಸಿ ಮುಂದುವರಿಯುವುದು ಕಾನೂನು ದುರ್ಬಳಕೆಯಾಗಲಿದೆ ಎಂದು ನ್ಯಾಯಾಲಯವು ಅಭಿಪ್ರಾಯಪಟ್ಟಿದೆ.


ಪ್ರಕರಣದ ಹಿನ್ನೆಲೆ ಏನು ?


ಸುದರ್ಶನ್ ರಮೇಶ್ ಅವರು 12-08-2021ರಂದು ನೆದರ್‌ಲ್ಯಾಂಡ್‌ನಿಂದ ಭಾರತಕ್ಕೆ ಬಂದಿದ್ದರು. ಸುದರ್ಶನ್ಗೆ ಪಿಎಂಎಲ್‌’ಎ ಸೆಕ್ಷನ್ 50ರಂದು ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿ ಮಾಡಿತ್ತು. ಈ ಹಿನ್ನೆಲೆಯಲ್ಲಿ 29-12-2021, 30-12-2021 ಮತ್ತು 01-01-2022ರಂದು ವಿಚಾರಣೆಗೆ ಹಾಜರಾಗಿದ್ದರು. ಅಂದು ಅವರ ಹೇಳಿಕೆಯನ್ನು ದಾಖಲಿಸಿಕೊಳ್ಳಲಾಗಿತ್ತು. 13-01-2022ರಂದು ನೆದರ್‌ಲ್ಯಾಂಡ್‌ಗೆ ತೆರಳಲು ವಿಮಾನ ನಿಲ್ದಾಣಕ್ಕೆ ತೆರಳಿದ್ದಾಗಿ ಇಮಿಗ್ರೇಷನ್ ಅಧಿಕಾರಿಗಳು ಸುದರ್ಶನ್ ಅವರನ್ನು ತಡೆದಿದ್ದು, ಅವರ ಪಾಸ್‌ಪೋರ್ಟ್‌’ಗೆ ಕ್ಯಾನ್ಸಲ್ ಹಿಂಬರಹ ನೀಡಲಾಗಿತ್ತು. ಆದರೆ, ಎಲ್‌ಒಸಿ ಪ್ರತಿಯನ್ನು ಅರ್ಜಿದಾರರಿಗೆ ನೀಡಿರಲಿಲ್ಲ. ಈ ಮಧ್ಯೆ, ಪಿಎಂಎಲ್‌ಎ ಅಡಿ ಸಮನ್ಸ್ ಜಾರಿ ಮಾಡಿತ್ತು.


ಇದನ್ನು ಪ್ರಶ್ನಿಸಿ ಅರ್ಜಿದಾರರ ಹೈಕೊರ್ಟ್ ಮೆಟ್ಟಿಲೇರಿದ್ದರು;


ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ಅರ್ಜಿದರರನ್ನು ವಿನಾಕಾರಣ ವಿಚಾರಣೆಗೆ ಹಾಜರಾಗುವಂತೆ ಮನವಿ ಮಾಡಲಾಗುತ್ತಿದೆ. ಈ ಬೆಳವಣಿಗೆ ನ್ಯಾಯಾಂಗ ನಿಯಮಗಳ ಉಲ್ಲಂಘನೆಯಾದಂತಾಗಿದೆ. ತನಿಖೆಗೆ ಸಹಕರಿಸಿದರೂ, ಸ್ವಯಂ ದೋಷಾರೋಪಣೆ ಹೇಳಿಕೆಗಳನ್ನು ನೀಡುವುದಕ್ಕೆ ಸಾಧ್ಯವಿಲ್ಲ. ಎಲ್‌ಒಸಿ ಆದೇಶವನ್ನು ರದ್ದು ಮಾಡಬೇಕು ಎಂದು ಕೋರಿದ್ದರು.


ಕೇಂದ್ರ ಸರ್ಕಾರದ ಪರವಾಗಿ ವಾದ ಮಂಡಿಸಿದ ಸಹಾಯಕ ಸಾಲಿಸೇಟರ್ ಜನರಲ್, ಅರ್ಜಿದಾರರ ವಿರುದ್ಧದ ಸಾಕ್ಷ್ಯಾಧಾರಗಳನ್ನು ಪರಿಗಣಿಸಿದೇ ವಿಚಾರಣೆ ಬರುವಂತೆ ಕೋರಲಾಗಿದೆ. ಜತೆಗೆ, ಅರ್ಜಿದಾರರ ಸಹೋದರನವಿರುದ್ಧ ಗಂಭೀರವಾದ ಆರೋಪವಿದೆ. ಇದೇ ಕಾರಣದಿಂದ. ಅರ್ಜಿದಾರರ ವಿರುದ್ಧ ಎಲ್‌ಒಸಿ ನೀಡಲಾಗಿದೆ. ಈ ಸುತ್ತೋಲೆ ಹಿಂಪಡೆದಲ್ಲಿ ಅರ್ಜಿದಾರರ ವಿದೇಶಕ್ಕೆ ತೆರಳಲಿದ್ದು, ತನಿಖೆಗೆ ಸಹಕರಿಸದೇ ಇರಬಹುದು. ಹೀಗಾಗಿ ಎಲ್‌ಒಸಿ ರದ್ದು ಮಾಡಲಾಗದು ಎಂದು ಮನವಿ ಮಾಡಿದ್ದರು.


ಅಲ್ಲದೆ, ಅರ್ಜಿದಾರರ ಖಾತೆಯಿಂದ ವಿದೇಶಿ ಮೊತ್ತ ವರ್ಗಾವಣೆಯಾಗಿದೆ. ಈ ಸಂಬಂಧ ಮಾಹಿತಿ ಸಂಗ್ರಹಿಸಲು ಇ-ಮೇಲ್ ಐಡಿ ಸೇರಿದಂತೆ ಮತ್ತಿತರರ ಮಾಹಿತಿ ನೀಡುತ್ತಿಲ್ಲ. ಆದ ಕಾರಣ ಅರ್ಜಿ ವಜಾಗೊಳಿಸಬೇಕು ಎಂದು ಕೋರಿದ್ದರು.


ಇದನ್ನೂ ಓದಿ: ಮುಂದಿನ 3 ದಿನ ಈ ಭಾಗಗಳಲ್ಲಿ ಧಾರಾಕಾರ ಮಳೆ: ಜಲಪ್ರಳಯದ ಎಚ್ಚರಿಕೆ ಜೊತೆ ಗುಡುಗು-ಮಿಂಚಿನ ಭೀತಿ


ಇದೀಗ ವಾದ- ಪ್ರತಿವಾದ ಆಲಿಸಿದ ನ್ಯಾಯಪೀಠ, ಎಲ್‌ಒಸಿಯನ್ನು ರದ್ದುಪಡಿಸಿ ಆದೇಶಿಸಿದೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್